Advertisement
ಸೋಮವಾರ (ಅ.19, 2020) ಬೆಳಗ್ಗೆ ಭಾರತೀಯ ಸೇನೆ ಚೀನಾದ ಕಾರ್ಪೊರಲ್ ವಾಂಗ್ ಯಾ ಲಾಂಗ್ ನನ್ನು ಲಡಾಖ್ ನ ಡೆಮ್ಟುಕ್ ನಲ್ಲಿ ಬಂಧಿಸಿತ್ತು. ಬಂಧಿತ ಚೀನಾ ಸೈನಿಕನ ವಿಚಾರಣೆ ಪೂರ್ಣಗೊಂಡ ಬಳಿಕ ಚೀನಾದ ಪೀಪಲ್ಸ್ ಲಿಬರೇಷನ್ ಆರ್ಮಿ(ಪಿಎಲ್ ಎ)ಗೆ ಹಸ್ತಾಂತರಿಸಲಾಗುವುದು ಎಂದು ಹೇಳಿದೆ.
Related Articles
Advertisement
ಕಳೆದ ಮೇ ತಿಂಗಳಿನಿಂದ ಪೂರ್ವ ಲಡಾಖ್ ನ ವಾಸ್ತವ ಗಡಿ ನಿಯಂತ್ರಣ ರೇಖೆಯ ಬಳಿ ಉಭಯ ದೇಶಗಳ ಸೈನಿಕರ ನಡುವೆ ಸಂಘರ್ಷ ನಡೆಯುತ್ತಲೇ ಇದೆ. ಜೂನ್ ನಲ್ಲಿ ಗಾಲ್ವಾನ್ ಕಣಿವೆ ಪ್ರದೇಶದಲ್ಲಿ ನಡೆದ ಸಂಘರ್ಷದಲ್ಲಿ 20 ಮಂದಿ ಭಾರತೀಯ ಸೈನಿಕರು ಹುತಾತ್ಮರಾಗಿದ್ದರು. ಪ್ಯಾಂಗಾಂಗ್ ತ್ಸೋ ಪ್ರದೇಶದಲ್ಲಿ ಕಳೆದ ತಿಂಗಳು ಉಭಯ ಸೇನೆ ಗಾಳಿಯಲ್ಲಿ ಗುಂಡಿನ ದಾಳಿ ನಡೆಸಿದ್ದ ಘಟನೆಯೂ ನಡೆದಿತ್ತು.