ಹೊಸದಿಲ್ಲಿ: ವೀಸಾ ಹಗರಣದ ಆರೋಪಿಯಾಗಿರುವ ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ ಅವರು ದಿಲ್ಲಿ ಹೈಕೋರ್ಟ್‌ನಲ್ಲಿ ಸಲ್ಲಿಸಿರುವ ನಿರೀಕ್ಷಣ ಜಾಮೀನಿನ ಅರ್ಜಿ ವಿರುದ್ಧ ಜಾರಿ ನಿರ್ದೇಶನಾಲಯವು ವಾದಿಸಿದೆ.
“ಕಾರ್ತಿ ಅವರಿಗೆ ಬಂಧನ ಆತಂಕವಿಲ್ಲ. ನಾವು ಅವರಿಗೆ ಸಮನ್ಸ್‌ನೂ° ಕೊಟ್ಟಿಲ್ಲ. ಆದರೆ ಅದಕ್ಕೂ ಮೊದಲೇ ಅವರು ಜಾಮೀನು ಅರ್ಜಿ ಸಲ್ಲಿಸಿರುವುದು ಸರಿಯಲ್ಲ’ ಎಂದು ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ.ರಾಜು ವಾದಿಸಿ ದ್ದಾರೆ. ನ್ಯಾಯಮೂರ್ತಿ ಪೂಣಂ ಎ. ಬಂಬಾ ಅವರು 3 ತಾಸುಗಳ ಕಾಲ ವಿಚಾರಣೆ ನಡೆಸಿದ್ದು, ತೀರ್ಪು ಕಾಯ್ದಿರಿಸಿದ್ದಾರೆ.
ಕಾರ್ತಿ ಅವರ ಜಾಮೀನು ಅರ್ಜಿಯನ್ನು ಜೂ. 3ರಂದು ದಿಲ್ಲಿಯ ಸ್ಥಳೀಯ ನ್ಯಾಯಾಲಯ ತಿರಸ್ಕರಿಸಿದ ಹಿನ್ನೆಲೆ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು.