Advertisement
ಇಂದು ಬೆಳಗ್ಗೆ 23ವರ್ಷದ ಕಾನೂನು ವಿದ್ಯಾರ್ಥಿನಿಯನ್ನು ಉತ್ತರಪ್ರದೇಶದ ಮನೆಯಲ್ಲಿ ಆಕೆಯನ್ನು ವಿಶೇಷ ತನಿಖಾ ತಂಡ ಬಂಧಿಸಿದ್ದು, ವಿದ್ಯಾರ್ಥಿನಿಯನ್ನು ವೈದ್ಯಕೀಯ ತಪಾಸಣೆಗೆ ಕರೆದೊಯ್ಯಲಾಗಿದೆ ಎಂದು ವರದಿ ವಿವರಿಸಿದೆ.
ಸ್ವಾಮಿ ಚಿನ್ಮಯಾನಂದ ತನ್ನ ಮೇಲೆ ಅತ್ಯಾಚಾರ ಎಸಗಿರುವುದಾಗಿ ಆರೋಪಿಸಿ ಕಾನೂನು ವಿದ್ಯಾರ್ಥಿನಿ ದೂರು ಆಧರಿಸಿ ಸ್ವಾಮಿ ಅವರನ್ನು ಪೊಲೀಸರು ಬಂಧಿಸಿದ್ದರು. ಬಳಿಕ ನ್ಯಾಯಾಲಯ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು. ಇದೀಗ ಕಾನೂನು ವಿದ್ಯಾರ್ಥಿನಿ ತನ್ನ ಬಳಿ 5 ಕೋಟಿ ರೂಪಾಯಿ ಹಣಕ್ಕೆ ಬೇಡಿಕೆ ಇಟ್ಟಿರುವುದಾಗಿ ಚಿನ್ಮಯಾನಂದ ಸ್ವಾಮಿ ಆರೋಪಿಸಿದ್ದರು.ಸುಲಿಗೆ ಪ್ರಕರಣದಲ್ಲಿ ಬಂಧಿಸಲ್ಪಿಟ್ಟಿರುವ ಕಾನೂನು ವಿದ್ಯಾರ್ಥಿನಿಯನ್ನು ಪೊಲೀಸರು ಕೋರ್ಟ್ ಗೆ ಹಾಜರುಪಡಿಸಿದ್ದು, ಕೋರ್ಟ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿದೆ.
Related Articles
Advertisement