Advertisement
ನಿಜಾಮ ಆಳ್ವಿಕೆಯಲ್ಲಿ ಚಿಟಗುಪ್ಪ ಜಿಲ್ಲಾ ಕೇಂದ್ರವಾಗಿತ್ತು ಎಂದು ಇತಿಹಾಸ ಹೇಳುತ್ತದೆ. ಸ್ವಾತಂತ್ರ್ಯ ನಂತರದಲ್ಲಿ ಹುಮನಾಬಾದ ತಾಲೂಕು ಕೇಂದ್ರವಾಗಿ ಗುರುತಿಸಿಕೊಂಡಿತ್ತು. ಕಳೆದ ನಾಲ್ಕು ದಶಕಕ್ಕೂ ಅಧಿಕ ಅವಧಿಯಿಂದ ಚಿಟಗುಪ್ಪ ತಾಲೂಕು ಕೇಂದ್ರವಾಗಿ ಸರ್ಕಾರ ಘೋಷಿಸುವಂತೆ ಒತ್ತಾಯಿಸಿ ವಿವಿಧ ಬಗೆಯ ಹೋರಾಟಗಳು ನಡೆಸಿದರು.
Related Articles
Advertisement
ನನೆಗುದಿಗೆ ಬಿದ್ದ ಕಾಮಗಾರಿ ಪೂರ್ಣಗೊಳಿಸಲು ಸೂಚನೆ ಹುಮನಾಬಾದ: ನನೆಗುದಿಗೆ ಬಿದ್ದ ಕಾಮಗಾರಿಗಳನ್ನು ಸೂಕ್ತ ಸಮಯದಲ್ಲಿ ಮುಗಿಸುವಂತೆ ಶಾಸಕ ರಾಜಶೇಖರ ಪಾಟೀಲ ತಾಲೂಕು ಮಟ್ಟದ ಅಧಿಕಾರಿಗಳಿಗೆ ಸೂಚಿಸಿದರು. ಪಟ್ಟಣದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಚಿಟಗುಪ್ಪ ಪಟ್ಟಣ ತಾಲೂಕು ಕೇಂದ್ರ ಉದ್ಘಾಟನೆ ಹಿನ್ನೆಲೆಯಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.
ಚಿಟಗುಪ್ಪ ಪಟ್ಟಣ ತಾಲೂಕು ಕೇಂದ್ರವಾಗಿ ಅಧಿಕೃತವಾಗಿ ಫೆ. 26ರಂದು ಚಾಲನೆ ದೊರೆಯಲ್ಲಿದೆ. ಮುಂದಿನ ದಿನಗಳಲ್ಲಿ ವಿವಿಧ ಇಲಾಖೆಗಳು ಆ ಭಾಗದ ಜನರ ಅನುಕೂಲಕ್ಕೆ ಅಣಿಯಾಗಬೇಕಾಗಿದೆ. ಈ ಹಿನ್ನೆಲೆಯಲ್ಲಿ ಆಯಾ ಇಲಾಖೆಗಳ ಅಧಿಕಾರಿಗಳು ಸರ್ಕಾರದ ನಿರ್ದೇಶನದಂತೆ ಇಲಾಖೆ ಸ್ಥಾಪನೆಗೆ ತಯಾರಿ ಮಾಡಿಕೊಳ್ಳಬೇಕು. ಆ ಭಾಗದ ಜನರು ಅನೇಕ ವರ್ಷಗಳ ಹೋರಾಟ ನಡೆಸಿ ಇದೀಗ ಅವರ ಕನಸು ನನಸ್ಸಾಗುತ್ತಿದ್ದು, ಅಧಿಕಾರಿಗಳು ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡಬೇಕು ಎಂದರು.
ಮಾರ್ಚ್ ತಿಂಗಳಿಂದ ಬೇಸಿಗೆ ಪ್ರಾರಂಭಗೊಳ್ಳುತ್ತಿದ್ದು, ಹುಮನಾಬಾದ, ಚಿಟಗುಪ್ಪ ಪುರಸಭೆಗಳು ಹಾಗೂ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಈಗಲೇ ಅಧಿಕಾರಿಗಳು ಜಾಗೃತೆ ವಹಿಸಬೇಕು. ಅಲ್ಲದೇ ಯಾವ ಇಲಾಖೆಗಳಲ್ಲಿ ನೆನೆಗುದ್ದಿಗೆ ಬಿದ್ದ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ನಡೆಸಿ ಚುನಾವಣೆಗೂ ಮುನ್ನ ಮುಗಿಸುವ ಕೆಲಸ ಮಾಡಬೇಕು. ಗ್ರಾಮೀಣ ಭಾಗದಲ್ಲಿ ನಡೆಸಿದ ಜನಸ್ಪಂದನ ಕಾರ್ಯಕ್ರಮಗಳು ನಡೆದ ಗ್ರಾಮಗಳಲ್ಲಿನ ಸಮಸ್ಯೆಗಳಿಗೆ ಮೊದಲು ಪರಿಹಾರ ಕಂಡುಕೊಳ್ಳುವ ಕೆಲಸ ಅಧಿಕಾರಿಗಳು ಮಾಡಬೇಕು. ನಾವು ನೀಡಿದ ಭರವಸೆಗಳು ಈಡೇರಿಸುವ ಕೆಲಸ ಮಾಡಿ, ಅನುದಾನದ ಚಿಂತೆ ಅಧಿಕಾರಿಗಳು ಮಾಡುವುದು ಬೇಡ ಎಂದು ತಿಳಿಸಿದರು.
ಈಗಾಗಲೇ ಚಿಟಗುಪ್ಪ ಹಾಗೂ ಹುಮನಾಬಾದ ಪುರಸಭೆ ವ್ಯಾಪ್ತಿಯಲ್ಲಿ ಸುಮಾರು 35 ಕೋಟಿ ರೂ. ವೆಚ್ಚದಲ್ಲಿ ವಿವಿಧ ಕಾಮಗಾರಿಗಳು ನಡೆಯುತ್ತಿವೆ. ಅವುಗಳ ಗುಣಮಟ್ಟ ವೀಕ್ಷಿಸಲು ಪ್ರತ್ಯೇಕ ಅಧಿಕಾರಿಗಳನ್ನು ಜಿಲ್ಲಾಧಿಕಾರಿಗಳು ನಿಯೋಜಿಸಿದ್ದಾರೆ. ಯಾವುದೇ ಕಾಮಗಾರಿಗಳು ಕಳಪೆ ಆಗದಂತೆ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ ಎಂದ ಅವರು, ಮಾ. 5ರಂದು ಹುಮನಾಬಾದ ಮತ ಕ್ಷೇತ್ರದಲ್ಲಿನ ವಿವಿಧ ಅಭಿವೃದ್ಧಿ ಕಾಮಗಾರಿ ಹಾಗೂ ಕುಂದುಕೊರತೆಗಳ ಕುರಿತು ಅಧಿಕಾರಿಗಳ ಸಭೆ ನಡೆಸುವುದಾಗಿ ತಿಳಿಸಿದರು.
ಬೀದರ: ನೂತನ ಚಿಟಗುಪ್ಪ ತಾಲೂಕು ಉದ್ಘಾಟನಾ ಸಮಾರಂಭವು ಜಿಲ್ಲಾಡಳಿತದ ಆಶ್ರಯದಲ್ಲಿ ಫೆ. 26ರಂದು ಸಂಜೆ 5ಕ್ಕೆ ಚಿಟಗುಪ್ಪದ ತಹಶೀಲ್ದಾರ ಕಚೇರಿ ಆವರಣದಲ್ಲಿ ನಡೆಯಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಉದ್ಘಾಟಿಸುವರು.ಶಾಸಕ ರಾಜಶೇಖರ ಪಾಟೀಲ ಅಧ್ಯಕ್ಷತೆ ವಹಿಸುವರು.