ಚಿತ್ರದುರ್ಗ: ಹೊಳಲ್ಕೆರೆ ತಾಲೂಕಿನಲ್ಲಿ ರೈತರಿಗೆ ಗಂಗಾ ಕಲ್ಯಾಣ ಯೋಜನೆಯಡಿ ಮಂಜೂರಾಗಿರುವ ಕೊಳವೆಬಾವಿಗಳನ್ನು ಕೊರೆಸಲು ಕಾರ್ಯಾದೇಶ ನೀಡಲು ಒತ್ತಾಯಿಸಿ ರೈತ ಸಂಘದಿಂದ ಜಿಲ್ಲಾ ಧಿಕಾರಿ ಕಚೇರಿ ಎದುರು ಬುಧವಾರದಿಂದ ಅನಿರ್ದಿಷ್ಟಾವ ಧಿ ಧರಣಿ ಸತ್ಯಾಗ್ರಹ ಆರಂಭಗೊಂಡಿದೆ.
2016-17 ಹಾಗೂ 2017-18 ರಲ್ಲಿ ಸಚಿವರಾಗಿದ್ದ ಎಚ್. ಆಂಜನೇಯ ಅವರು ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ 10 ಕೋಟಿ ರೂ. ವೆಚ್ಚದಲ್ಲಿ ಸುಮಾರು 660 ಫಲಾನುಭವಿಗಳಿಗೆ ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆ ಬಾವಿ ಕೊರೆಸಲು ಅನುದಾನ ನೀಡಿದ್ದರು. ಆದರೆ ಆನಂತರ ಬಂದ ಶಾಸಕರು ಇದಕ್ಕೆ ತಡೆ ಒಡ್ಡಿದ್ದಾರೆ. ಇದರಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ತಕ್ಷಣ ಕೊಳವೆ ಬಾವಿಗಳನ್ನು ಕೊರೆಸಲು ಜಿಲ್ಲಾ ಧಿಕಾರಿಗಳು ಅನುಮತಿ ನೀಡಬೇಕು. ಇಲ್ಲದಿದ್ದರೆ ಅನಿ ìಷ್ಟಾವ ಧಿ ಧರಣಿ ನಡೆಸುತ್ತೇವೆ ಎಂದು ಎಚ್ಚರಿಸಿದರು.
ಮೂರು ವರ್ಷಗಳ ಹಿಂದೆ ಮಂಜೂರಾಗಿದ್ದ ಕೊಳವೆಬಾವಿಗಳನ್ನು ಅಂದೇ ಕೊರೆಸಲು ಅನುವು ಮಾಡಿಕೊಟ್ಟಿದ್ದರೆ ಇಷ್ಟೊತ್ತಿಗೆ ರೈತರು ಬೆಳೆ ಬೆಳೆದು ಬದುಕು ಕಟ್ಟಿಕೊಳ್ಳುತ್ತಿದ್ದರು. ಆದರೆ ತಡೆಯೊಡ್ಡಿರುವುದರಿಂದ ಇಕ್ಕಟ್ಟಿಗೆ ಸಿಲುಕಿದ್ದಾರೆ ಎಂದು ತಿಳಿಸಿದರು. ವಿಪಕ್ಷ ನಾಯಕರ ಗಮನಕ್ಕೆ ತರುವೆ: ರೈತರು ಧರಣಿ ನಡೆಸುತ್ತಿದ್ದ ಸ್ಥಳಕ್ಕೆ ಮಾಜಿ ಸಚಿವ ಎಚ್. ಆಂಜನೇಯ ಆಗಮಿಸಿ ರೈತರ ಜತೆ ಚರ್ಚಿಸಿದರು.
ರೈತರಿಗೆ ಒಳ್ಳೆದಾಗಲಿ ಎಂಬ ಕಾರಣಕ್ಕೆ ಇಷ್ಟು ದೊಡ್ಡ ಮಟ್ಟದಲ್ಲಿ ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆ ಬಾವಿಗಳನ್ನು ಮಂಜೂರು ಮಾಡಿದರೆ ಈಗಿನ ಶಾಸಕರು ದುರುದ್ದೇಶದಿಂದ ಕೊರೆಯುವುದನ್ನು ನಿಲ್ಲಿಸಿದ್ದಾರೆ. ಅವರಿಗೆ ಬಡವರ ಕಷ್ಟ ಗೊತ್ತಿಲ್ಲ. ಅದಕ್ಕಾಗಿ ಹೀಗೆಲ್ಲಾ ವರ್ತಿಸುತ್ತಿದ್ದಾರೆ. ಈ ವಿಚಾರವನ್ನು ವಿಪಕ್ಷ ನಾಯಕರಾದ ಸಿದ್ದರಾಮಯ್ಯ ಅವರ ಗಮನಕ್ಕೆ ತರುತ್ತೇನೆ ಎಂದು ಭರವಸೆ ನೀಡಿದರು.
ಧರಣಿಯಲ್ಲಿ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ನುಲೇನೂರು ಎಂ. ಶಂಕರಪ್ಪ, ಜಿಲ್ಲಾಧ್ಯಕ್ಷ ಬಸ್ತಿಹಳ್ಳಿ ಸುರೇಶ್‌ಬಾಬು, ಮುಖಂಡರಾದ ಬೇಡರೆಡ್ಡಿಹಳ್ಳಿ ಬಸವ ರೆಡ್ಡಿ, ಧನಂಜಯ, ಚಿಕ್ಕಪ್ಪನಹಳ್ಳಿ ರುದ್ರಸ್ವಾಮಿ, ಕೆ.ಸಿ. ಹೊರಕೇರಪ್ಪ ಸೇರಿದಂತೆ ಹೊಳಲ್ಕೆರೆ ತಾಲೂಕಿನ ರೈತರು ಭಾಗವಹಿಸಿದ್ದರು.
ಓದಿ : ಸಿಡಿ ಪ್ರಕರಣ : ಕುತಂತ್ರಕ್ಕೆ ಬಲಿಯಾಗಿ ಜೀವಕ್ಕೆ ಅಪಾಯ ತಂದುಕೊಳ್ಳುವುದು ಬೇಡ : ಎಚ್ ಡಿ ಕೆ