Advertisement
ಹಿರಿಯೂರು: ಮಲೆನಾಡಿನಲ್ಲಿ ಧಾರಾಕಾರವಾಗಿ ಮಳೆಯಾಗುತ್ತಿರುವುದರಿಂದ ವೇದಾವತಿ ನದಿ ಮೈದುಂಬಿ ಹರಿಯುತ್ತಿದ್ದು, ವಾಣಿವಿಲಾಸ ಸಾಗರ ಜಲಾಶಯದಲ್ಲಿ ಮಂಗಳವಾರ 101.10 ಅಡಿ ನೀರು ಸಂಗ್ರಹಗೊಂಡಿದೆ. ಈ ವರ್ಷ ಮಳೆಗಾಲದ ಆರಂಭದಲ್ಲೇ ಉತ್ತಮವಾಗಿ ಮಳೆಯಾಗಿತ್ತು. ಕಳೆದ ಜು. 7 ರಿಂದ ಭದ್ರಾ ಜಲಾಶಯದ ನೀರನ್ನು ವಿವಿ ಸಾಗರಕ್ಕೆ ಹರಿಸಲಾಗುತ್ತಿದ್ದು, ಪ್ರತಿ ನಿತ್ಯ 500 ಕ್ಯೂಸೆಕ್ಸ್ ನೀರು ಹರಿದು ಬರುತ್ತಿದೆ.
Related Articles
Advertisement
ಜಲಾಶಯದ ಸುತ್ತ ಬೆಟ್ಟ ಗುಡ್ಡಗಳು ನೋಡುಗರ ಕಣ್ಮನ ಸೆಳೆಯುವಂತಿವೆ. ಪ್ರವಾಸೋದ್ಯಮ ಇಲಾಖೆ ಇಲ್ಲಿ ಉದ್ಯಾನವನ, ತಂಗುದಾಣ ನಿರ್ಮಿಸಿ ಮೂಲ ಸೌಲಭ್ಯಗಳನ್ನು ಕಲ್ಪಿಸಿ ಅಭಿವೃದ್ಧಿಪಡಿಸಿದರೆ ಉತ್ತಮ ಪ್ರವಾಸಿ ತಾಣವಾಗುವ ಎಲ್ಲಾ ಸಾಧ್ಯತೆಗಳೂ ಇವೆ.
ಬಯಲುಸೀಮೆ ಜನರ ಆಧಾರಸ್ತಂಭ
ವಾಣಿವಿಲಾಸಸಾಗರ ಜಲಾಶಯ ಬಯಲುಸೀಮೆ ಜನರ ಜೀವನದ ಆಧಾರಸ್ತಂಭವಾಗಿದೆ. ಅಡಿಕೆ, ತೆಂಗು, ಭತ್ತ, ರಾಗಿ, ಬಾಳೆಯಂತಹ ತೋಟಗಾರಿಕೆ ಬೆಳೆಗಳಿಗೆ ಜೀವಜನವಾಗಿದೆ. ಮಳೆ ಇಲ್ಲದೆ ಸದಾ ಬರಗಾಲಕ್ಕೆ ತುತ್ತಾಗಿದ್ದ ರೈತರು ಲಕ್ಷಾಂತರ ತೆಂಗಿನಮರಗಳನ್ನು ಕಳೆದುಕೊಂಡು ಸಂಕಷ್ಟ ಅನುಭವಿಸುತ್ತಿದ್ದರು.
ನೀರಿಗಾಗಿ ಕಳೆದ 12 ವರ್ಷಗಳಿಂದ ಹೋರಾಟ, ಪ್ರತಿಭಟನೆ ಧರಣಿಗಳನ್ನು ನಡೆಸಲಾಗಿದೆ. ಇದೆಲ್ಲರ ಫಲವಾಗಿ ಭದ್ರಾ ಮೇಲ್ದಂಡೆ ಯೋಜನೆಯಿಂದ ಕಳೆದ ಒಂದು ವರ್ಷದಿಂದ ವಿವಿ ಸಾಗರಕ್ಕೆ ನೀರು ಹರಿದು ಬರುವಂತಾಗಿದೆ. ಕಾಮಗಾರಿ ಪೂರ್ಣಗೊಂಡರೆ ಹೆಚ್ಚಿನ ಪ್ರಮಾಣದ ನೀರು ವಿವಿ ಸಾಗರಕ್ಕೆ ಹರಿದು ಬರಲಿದೆ.