ನಗರದ ಕಮ್ಮಾರೆಡ್ಡಿ ಸಮುದಾಯ ಭವನದಲ್ಲಿ ಬುಧವಾರ ಬಿಜೆಪಿ ಯುವ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸಭೆ ಉದ್ಘಾಟಿಸಿ ಮಾತನಾಡಿದ ಅವರು, 2004 ರಿಂದ 2014 ರವರೆಗೆ ಡಾ.ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದ ಅವ ಧಿಯಲ್ಲಿ ಸಾಲು ಸಾಲು ಹಗರಣಗಳು ನಡೆದವು. ಕೋಟ್ಯಂತರ ರೂ. ಲೂಟಿ ಮಾಡಲಾಯಿತು. ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ಒಂದೇ ಒಂದು ಹಗರಣ ನಡೆದಿಲ್ಲ. ಭ್ರಷ್ಟಾಚಾರ ಮುಕ್ತ ಆಡಳಿತ ನೀಡಿದ ಕೀರ್ತಿ ಮೋದಿ ಹಾಗೂ ವಾಜಪೇಯಿ ಅವರಿಗೆ ಸಲ್ಲಬೇಕು ಎಂದರು.
ಲಾಲ್ ಬಹದ್ದೂರು ಶಾಸ್ತ್ರಿ ಹೊರತುಪಡಿಸಿ ಕಾಂಗ್ರೆಸ್‌ನ ಬಹುತೇಕರು ಭ್ರಷ್ಟಾಚಾರದ ಕೊಳೆ ಅಂಟಿಸಿಕೊಂಡಿದ್ದಾರೆ. ಜವಾಹರಲಾಲ್ ನೆಹರೂ ಅವರಿಂದ ಮನಮೋಹನ್ ಸಿಂಗ್‌ವರೆಗೆ ಕಾಂಗ್ರೆಸ್‌ನ ಎಲ್ಲ ಪ್ರಧಾನಿಗಳು ಹಗರಣಗಳಲ್ಲಿ ಭಾಗಿಯಾಗಿದ್ದಾರೆ. ಕಾಂಗ್ರೆಸ್ ಪಕ್ಷದ ರಾಷ್ಟ್ರ
ಮತ್ತು ರಾಜ್ಯ ಘಟಕದ ಅಧ್ಯಕ್ಷರೇ ಜಾಮೀನು ಮೇಲೆ ಹೊರಗಿದ್ದಾರೆ ಎಂದು ಕುಟುಕಿದರು. ಭಾರತಕ್ಕೆ ಸ್ವಾತಂತ್ರ ತಂದುಕೊಟ್ಟ ಹಾಗೂ ಮಹಾತ್ಮ ಗಾಂ ಧೀಜಿ ಈ ಪಕ್ಷದಲ್ಲಿದ್ದ ಪುಣ್ಯ ಕಾಂಗ್ರೆಸ್‌ಗಿತ್ತು. ಈವರೆಗೆ ಈ ಎರಡು ಪುಣ್ಯಗಳು ಕಾಂಗ್ರೆಸ್‌ಗೆ ಮತ ತಂದುಕೊಟ್ಟವು. 1990 ರಲ್ಲಿ ಕಾಂಗ್ರೆಸ್ 1,900 ಶಾಸಕರನ್ನು ಹೊಂದಿದ್ದರೆ, ಬಿಜೆಪಿಗೆ ಮೂರು ಶಾಸಕರಿದ್ದರು. ಈಗ ಕಾಲ ಸಂಪೂರ್ಣ ಬದಲಾಗಿದ್ದು, ಬಿಜೆಪಿ 1,900 ಶಾಸಕರನ್ನು ಹೊಂದಿದೆ. ನಕಲಿ ಗಾಂಧಿ ಕುಟುಂಬದ ರಾಜಕಾರಣದಿಂದ ಕಾಂಗ್ರೆಸ್ ವಿರೋಧ ಪಕ್ಷವಾಗಲು ಸಾಧ್ಯವಾಗದ ಹೀನಾಯ
ಸ್ಥಿತಿ ತಲುಪಿದೆ ಎಂದು ವ್ಯಂಗ್ಯವಾಡಿದರು.
ಕಾಂಗ್ರೆಸ್ ವಂಶಪಾರಂಪರ್ಯ ನಾಯಕತ್ವಕ್ಕೆ ಜೋತು ಬಿದ್ದು, ಜಾತಿ ರಾಜಕಾರಣಕ್ಕೆ ಕುಮ್ಮಕ್ಕು ನೀಡಿ, ಮಿತಿ ಮೀರಿದ ಭ್ರಷ್ಟಾಚಾರದಲ್ಲಿ ತೊಡಗಿಕೊಂಡಿತು. ವೋಟಿಗಾಗಿ ಧರ್ಮಗಳ ತುಷ್ಟೀಕರಣ ಮಾಡಿತು. ವಿಚಾರಧಾರೆ ಮರೆತು, ಮಹಾತ್ಮ ಗಾಂಧೀಜಿ ಅವರಿಗೆ ದ್ರೋಹ ಬಗೆದಿದೆ ಎಂದು ನಳೀನ್‌ಕುಮಾರ್ ಕಟೀಲ್ ಕಿಡಿಕಾರಿದರು.
ಸಂಸದ ಎ. ನಾರಾಯಣಸ್ವಾಮಿ ಮಾತನಾಡಿ, ಬಿಜೆಪಿ ಬೆಳವಣಿಗೆ, ಕೇಂದ್ರ ಸರ್ಕಾರದ ಆಡಳಿತ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ
ಕಾರ್ಯವೈಖರಿ ಸಹಿಸಲು ಸಾಧ್ಯವಿಲ್ಲದ ಶಕ್ತಿಗಳು ಗಲಭೆಗೆ ಕುಮ್ಮಕ್ಕು ನೀಡುತ್ತಿವೆ. ತ್ರಿವರ್ಣ ಧ್ವಜಕ್ಕೆ ಮಾಡಿದ ಅಪಮಾನದ ಬಗ್ಗೆ ಯುವ ಶಕ್ತಿ
ಆಲೋಚಿಸುವ ಅಗತ್ಯವಿದೆ. ಇಂತಹ ಕೃತ್ಯಗಳನ್ನು ನೋಡಿ ಬಿಜೆಪಿ ಸುಮ್ಮನೆ ಕೂರುವುದಿಲ್ಲ ಎಂದು ಎಚ್ಚರಿಕೆ ನೀಡಿದರು.
Advertisement
ದಾವಣಗೆರೆ ಸಂಸದ ಜಿ.ಎಂ.ಸಿದ್ದೇಶ್ವರ, ಶಾಸಕರಾದ ಎಂ.ಚಂದ್ರಪ್ಪ, ಕೆ.ಪೂರ್ಣಿಮಾ, ವಿಧಾನ ಪರಿಷತ್ ಸದಸ್ಯ ಚಿದಾನಂದಗೌಡ, ಬಿಜೆಪಿ ರಾಜ್ಯ ಕಾರ್ಯದರ್ಶಿ ಕೆ.ಎಸ್. ನವೀನ್, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎ.ಮುರುಳಿ, ವಿಭಾಗೀಯ ಪ್ರಭಾರಿ ಜಿ.ಎಂ.ಸುರೇಶ್, ಖನಿಜ ನಿಗಮದ ಅಧ್ಯಕ್ಷ ಲಿಂಗಮೂರ್ತಿ, ಮಹೇಶ್ ತೆಂಗಿನಕಾಯಿ, ಯುವ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಹನುಮಂತೇಗೌಡ ಇದ್ದರು.