Advertisement

ಆಕ್ಸಿಜನ್ ಘಟಕ್ಕಾಗಿ ಪ್ರಸ್ತಾವನೆ ಸಲ್ಲಿಸಿ

08:25 PM Apr 30, 2021 | Team Udayavani |

ಚಿತ್ರದುರ್ಗ: ಜಿಲ್ಲಾ ಕೇಂದ್ರ ಸೇರಿದಂತೆ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಆಕ್ಸಿಜನ್‌ ಉತ್ಪಾದನಾ ಘಟಕ ಆರಂಭ ಮಾಡಲು ಪ್ರಸ್ತಾವನೆ ಸಲ್ಲಿಸುವಂತೆ ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಶ್ರೀರಾಮುಲು ಜಿಲ್ಲಾ ಧಿಕಾರಿಗೆ ಸೂಚನೆ ನೀಡಿದರು.

Advertisement

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಕೋವಿಡ್‌-19 ರೋಗ ತಡೆ ಕಾರ್ಯಕ್ರಮಗಳು ಹಾಗೂ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಆಕ್ಸಿಜನ್‌ ಸಮಸ್ಯೆ ಉಂಟಾಗಬಾರದು. ಈ ಹಿನ್ನೆಲೆಯಲ್ಲಿ ತಾಲೂಕುವಾರು ಆಕ್ಸಿಜನ್‌ ಉತ್ಪಾದನಾ ಘಟಕ ಆರಂಭ ಮಾಡಲು ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಸಚಿವರು ತಾಕೀತು ಮಾಡಿದರು.

ರೆಮ್‌ಡೆಸಿವಿಯರ್‌ ಲಸಿಕೆ ಸರಬರಾಜು ವಿಚಾರದಲ್ಲಿ ತೊಂದರೆ ಉಂಟಾಗುತ್ತಿದೆ. ಇದರಿಂದ ಎಲ್ಲ ಕಡೆಯೂ ದೂರುಗಳು ಬರುತ್ತಿವೆ. ರೆಮ್‌ಡೆಸಿವಿಯರ್‌ ಇಂಜೆಕ್ಷನ್‌ ಕಾಳಸಂತೆಯಲ್ಲಿ ಮಾರಾಟವಾಗುವುದನ್ನು ತಡೆಗಟ್ಟುವ ಉದ್ದೇಶದಿಂದ ಈಗಾಗಲೇ ಜಿಲ್ಲೆಯಲ್ಲಿ ಫ್ಲೆ$çಯಿಂಗ್‌ ಸ್ಕ್ವಾಡ್‌ ನೇಮಕ ಮಾಡಲಾಗಿದ್ದು, ಅಗತ್ಯ ಕ್ರಮ ವಹಿಸಬೇಕು. ಜಿಲ್ಲೆಯಲ್ಲಿ ರೆಮ್‌ಡಿಸಿವಿರ್‌ ಲಸಿಕೆ ಹೆಚ್ಚಿನ ಪ್ರಮಾಣದಲ್ಲಿ ಸಂಗ್ರಹ ಮಾಡಿಕೊಳ್ಳಬೇಕು. ಕೋವಿಡ್‌ ಸೋಂಕಿತರ ಚಿಕಿತ್ಸೆಗೆ ಬಹಳ ಅಗತ್ಯವಿರುವ ಆಕ್ಸಿಜನ್‌ ಹಾಗೂ ರೆಮಿಡೆಸಿವಿಯರ್‌ ಪೂರೈಕೆಗೆ ಅಗತ್ಯ ಕ್ರಮಕೈಗೊಳ್ಳಲಾಗುವುದು ಎಂದು ಸಚಿವರು ಭರವಸೆ ನೀಡಿದರು.

ಸಹಾಯಕ ಔಷ ಧ ನಿಯಂತ್ರಕ ಮಾತನಾಡಿ, ಖಾಸಗಿ ಆಸ್ಪತ್ರೆಗಳಿಗೆ ಪ್ರತಿದಿನ 300 ಹಾಗೂ ಸರ್ಕಾರಿ ಆಸ್ಪತ್ರೆಗೆ 200 ಸೇರಿದಂತೆ ಜಿಲ್ಲೆಗೆ ಪ್ರತಿದಿನವೂ ಕನಿಷ್ಠ 500 ರೆಮ್‌ ಡಿಸಿವಿಯರ್‌ ಅಗತ್ಯವಿದೆ. ಗುರುವಾರ ಜಿಲ್ಲೆಗೆ 480 ರೆಮ್‌ ಡಿಸಿವಿಯರ್‌ ಸರಬರಾಜಾಗಿದೆ ಎಂದು ತಿಳಿಸಿದರು. ಶಾಸಕಿ ಪೂರ್ಣಿಮಾ ಶ್ರೀನಿವಾಸ್‌ ಮಾತನಾಡಿ, ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿರುವ ರೋಗಿಗಳಿಗೆ ಸಮರ್ಪಕವಾಗಿ ಸೌಲಭ್ಯ ದೊರೆಯುವಂತಾಗಬೇಕು. ರೋಗಿಗಳು ಯಾವುದೇ ಕಾರಣಕ್ಕೂ ಆಕ್ಸಿಜನ್‌ ಇಲ್ಲ ಎಂಬ ಸಮಸ್ಯೆ ಹೇಳಬಾರದು. ಸರ್ಕಾರಿ ವೈದ್ಯರು ರೆಮ್‌ಡೆಸಿವಿಯರ್‌ ಲಸಿಕೆ ದುರ್ಬಳಕೆ ಮಾಡಿಕೊಳ್ಳಬಾರದು ಎಂದು ತಾಕೀತು ಮಾಡಿದರು.

ಅನೇಕ ಜನರಿಗೆ ರೋಗ ಲಕ್ಷಣಗಳಿದ್ದರೂ ಆರ್‌ಟಿಪಿಸಿಆರ್‌ ಹಾಗೂ ರ್ಯಾಪಿಡ್‌ ಪರೀಕ್ಷೆಯಲ್ಲಿ ನೆಗೆಟಿವ್‌ ವರದಿ ಬರುತ್ತಿದೆ. ಸಿಟಿ ಸ್ಕಾ Âನ್‌ನಲ್ಲಿ ಈ ಬಗ್ಗೆ ವರದಿಯಾಗಲಿದ್ದು ಇಂತಹ ರೋಗಿಗಳನ್ನು ಸಾರಿ, ಐಎಲ್‌ಐ ವಾರ್ಡ್‌ಗೆ ದಾಖಲಿಸಿ ಕೋವಿಡ್‌ ಸೋಂಕಿತರಿಗೆ ನೀಡುವ ಚಿಕಿತ್ಸೆಯನ್ನು ಇವರಿಗೂ ನೀಡಬೇಕು. ಸರ್ಕಾರಿ ಆಸ್ಪತ್ರೆಗೆ ಬರುವ ರೋಗಿಗಳೊಂದಿಗೆ ವೈದ್ಯರು ಸೌಜನ್ಯದಿಂದ ವರ್ತಿಸಬೇಕು. ಅವರೊಂದಿಗೆ ಗೌರವದೊಂದಿಗೆ ನಡೆದುಕೊಳ್ಳಬೇಕು ಎಂದು ತಿಳಿಸಿದರು.

Advertisement

ಲಸಿಕೆ ಶೇ.51 ರಷ್ಟು ಸಾಧನೆ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾ ಧಿಕಾರಿ ಡಾ.ಸಿ.ಎಲ್‌.ಫಾಲಾಕ್ಷ ಮಾತನಾಡಿ, ಕೋವಿಡ್‌ ಲಸಿಕೆಗೆ ಸಂಬಂಧಿ ಸಿದಂತೆ ಜಿಲ್ಲೆಯ 199 ಕೇಂದ್ರಗಳನ್ನು ಲಸಿಕೆ ನೀಡಲಾಗುತ್ತಿದ್ದು, ಶೇ.51 ಗುರಿ ಸಾಧನೆ ಮಾಡಲಾಗಿದೆ. 45 ವರ್ಷ ಮೇಲ್ಪಟ್ಟ 44,8453 ಮಂದಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದ್ದು, ಇದರಲ್ಲಿ 2,18,498 ಮಂದಿಗೆ ಲಸಿಕೆ ನೀಡಲಾಗಿದೆ. ಮೇ 01 ರಿಂದ 18 ವರ್ಷ ಮೇಲ್ಪಟ್ಟವರಿಗೆ ಕೋವಿಡ್‌ ಲಸಿಕೆ ನೀಡಲು ನೊಂದಣಿ ಕಾರ್ಯ ನಡೆಯುತ್ತಿದೆ ಎಂದು ಮಾಹಿತಿ ನೀಡಿದರು.

ಕೋವಿಡ್‌-19 ಪರೀಕ್ಷೆಗೆ ಸಂಬಂ ಧಿಸಿದಂತೆ ಪ್ರತಿ ದಿನವೂ 1600 ಮಂದಿಗೆ ಪರೀಕ್ಷೆ ಮಾಡಬೇಕು ಎಂಬ ಗುರಿ ಇದೆ. ನಿತ್ಯವೂ 2000ಕ್ಕೂ ಹೆಚ್ಚು ಮಂದಿಗೆ ಕೋವಿಡ್‌ ಪರೀಕ್ಷೆ ಮಾಡಲಾಗುತ್ತಿದೆ. ಕೋವಿಡ್‌ ಪರೀಕ್ಷೆಗೆ ಸಂಬಂ ಸಿದಂತೆ ಯಾವುದೇ ಸಮಸ್ಯೆ ಇಲ್ಲ ಎಂದು ತಿಳಿಸಿದರು. ಕೋವಿಡ್‌ ಪರೀûಾ ವರದಿಯು ವಾರ ಆದರೂ ತಲುಪುತ್ತಿಲ್ಲ. ಇದರಿಂದ ಸಮಸ್ಯೆ ಉಂಟಾಗುತ್ತಿದೆ. ಹಾಗಾಗಿ ಶೀಘ್ರವಾಗಿ ಕೋವಿಡ್‌ ವರದಿ ನೀಡಬೇಕು ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶಶಿಕಲಾ ಸುರೇಶ್‌ಬಾಬು ಡಿಎಚ್‌ಒಗೆ ಸೂಚನೆ ನೀಡಿದರು. ಕೋವಿಡ್‌ ಲಸಿಕೆ ಪಡೆಯಲು ಜನರು ಹೆಚ್ಚಿನ ಸಂಖ್ಯೆಯಲ್ಲಿ ಸ್ವಯಂ ಪ್ರೇರಣೆಯಿಂದ ಬರುತ್ತಿದ್ದಾರೆ.

ಆದರೆ ಲಸಿಕೆ ದಾಸ್ತಾನು ಇಲ್ಲವಾಗಿದೆ. ಮುಂದಿನ ದಿನಗಳಲ್ಲಿ ಹೆಚ್ಚಿನ ಲಸಿಕೆ ಸಂಗ್ರಹಿಸಿಕೊಟ್ಟುಕೊಳ್ಳಬೇಕು ಶಾಸಕಿ ಪೂರ್ಣಿಮಾ ಸೂಚಿಸಿದರು. ಶಾಸಕ ಟಿ.ರಘುಮೂರ್ತಿ ಮಾತನಾಡಿ, ಕೋವಿಡ್‌ ಹಿನ್ನೆಲೆಯಲ್ಲಿ ಜನರಿಗೆ ಯಾವುದೇ ಉದ್ಯೋಗವಿಲ್ಲ. ಹಾಗಾಗಿ ಗ್ರಾಮ ಪಂಚಾಯಿತಿವಾರು ಕೂಲಿಗಾಗಿ ಕೆಲಸ ಕಾರ್ಯಕ್ರಮ ಹಮ್ಮಿಕೊಂಡು ದುಡಿಯುವ ಕೈಗಳಿಗೆ ಕೆಲಸ ನೀಡಬೇಕು. ಇದರಿಂದ ದುಡಿದು ತಿನ್ನುವವರಿಗೆ ಅನುಕೂಲವಾಗುತ್ತದೆ ಎಂದು ಹೇಳಿದರು.

ಜಿಲ್ಲಾ ಧಿಕಾರಿ ಕವಿತಾ ಎಸ್‌.ಮನ್ನಿಕೇರಿ, ಜಿಪಂ ಸಿಇಒ ಡಾ.ಕೆ.ನಂದಿನಿದೇವಿ, ಎಸ್‌ಪಿ ಜಿ.ರಾಧಿ ಕಾ, ಅಪರ ಜಿಲ್ಲಾ  ಧಿಕಾರಿ ಈ.ಬಾಲಕೃಷ್ಣ ಸೇರಿದಂತೆ ಆರೋಗ್ಯ ಇಲಾಖೆ ಅ ಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅ ಧಿಕಾರಿಗಳು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next