ಮೊಳಕಾಲ್ಮೂರು: ರಾಜ್ಯದಲ್ಲಿ ಹೆಚ್ಚಾಗಿ ಹರಡುತ್ತಿರುವ ಮಹಾಮಾರಿ ಕೊರೊನಾ ವನ್ನು ಹತೋಟಿಗೆ ತರಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರವರು ಮುಂಜಾಗ್ರತಿ ಕ್ರಮಗಳನ್ನು ಕೈಗೊಂಡು ಕೊರೊನಾ ನಿಯಂತ್ರಣಕ್ಕೆ ನಿರಂತರವಾಗಿ ಶ್ರಮಿಸುತ್ತಿದ್ದಾರೆ ಎಂದು ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೊರೊನಾ ನಿಯಂತ್ರಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ರಾಜ್ಯದ ಎಲ್ಲಾ ಜಿಲ್ಲಾ ಧಿಕಾರಿಗಳು ಮತ್ತು ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ವಿಡಿಯೋ ಕಾನ ರೆನ್ಸ್ ಕೈಗೊಂಡು ಸೂಕ್ತ ನಿರ್ಧಾರ ಕೈಗೊಳ್ಳಲಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್ .ಯಡಿಯೂರಪ್ಪ ಅವರು 24 ಗಂಟೆ ನಿರಂತರವಾಗಿ ಕೊರೊನಾ ನಿಯಂತ್ರಣಕ್ಕೆ ಕೆಲಸ ನಿರ್ವಹಿಸುತ್ತಿದ್ದು, ಯಾವುದೇ ರೀತಿಯ ಕೊರತೆಯಾಗದಂತೆ ಕಾರ್ಯನಿರ್ವಹಿಸುತ್ತಿದ್ದಾರೆ.
ವಿರೋಧ ಪಕ್ಷದವರು ಯಾವುದೇ ರೀತಿಯಲ್ಲಿ ಮಾತನಾಡುತ್ತಿರುವುದಕ್ಕೆ ಕಿಮ್ಮತ್ತಿಲ್ಲ, ಸರ್ಕಾರವು ಏನು ಮಾಡಬೇಕಾಗಿರುತ್ತೋ ಆ ಕೆಲಸವನ್ನು ಮಾಡುವಂತಹ ಕೆಲಸ ಮಾಡಲಾಗುತ್ತಿದೆ. ಕೊರೊನಾದಿಂದ ನರಳುವ ರೋಗಿಗಳಿಗೆ ಸಾಕಷ್ಟು ವ್ಯವಸ್ಥೆ ಮಾಡಲಾಗುತ್ತಿದೆ. ರಾಜ್ಯದಲ್ಲಿ ಮುಖ್ಯಮಂತ್ರಿಗಳು, ಆರೋಗ್ಯ ಸಚಿವರು ಹಾಗೂ ಇನ್ನಿತರ ಎಲ್ಲಾ ಸಚಿವರು ಮುಂಜಾಗ್ರತಾ ಕ್ರಮ ಕೈಗೊಂಡು ಅಗತ್ಯ ಔಷ ಧಗಳನ್ನು ನೀಡುವಂತಹ ಕೆಲಸ ಮಾಡಲಾಗುತ್ತಿದೆ.
ರಾಜ್ಯದಲ್ಲಿ ಜನರಲ್ಲಿ ಕೊರೊನಾ ಬಗ್ಗೆ ಜಾಗೃತಿ ಮೂಡಿಸಿ ಕೊರೊನಾ ನಿಯಂತ್ರಣ ಮಾಡುವ ಕೆಲಸ ಮಾಡಲಾಗುತ್ತಿದೆ. ಈ ಭಾಗದಲ್ಲಿ ಜನರು ಹೆಚ್ಚಾಗಿ ರಾಗಿ ಬಳಸುವುದರಿಂದ ಬಡ ಪಡಿತರ ಕಾರ್ಡ್‌ದಾರರಿಗೆ ಅಕ್ಕಿ ಕಡಿಮೆಯಾಗಿರುವುದರ ಬದಲಾಗಿ ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಳ್ಳಲಾಗುವುದು. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಉಮೇಶ್ ಕತ್ತಿಯವರ ಹೇಳಿಕೆಗೆ ಆ ಸಚಿವರೇ ಕ್ಷಮೆಯಾಚಿಸಿದ್ದಾರೆಂದು ತಿಳಿಸಿದರು.