ಚಿತ್ರದುರ್ಗ: ಕೋವಿಡ್-19 ಎರಡನೇ ಅಲೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ವಿ ಧಿಸಿರುವ ಜನತಾ ಕರ್ಫ್ಯೂ ನಡುವೆಯೇ ಕಾರ್ಮಿಕ ದಿನವನ್ನು ಸರಳವಾಗಿ ಆಚರಿಸಲಾಯಿತು. ನಗರದ ಸಂತೆಹೊಂಡದ ರಸ್ತೆಯಲ್ಲಿರುವ ಜಿಲ್ಲಾ ಕಟ್ಟಡ ಕಾರ್ಮಿಕರ ಸಂಘದ ಕಚೇರಿಯಲ್ಲಿ ಕಾರ್ಮಿಕರು ತಮ್ಮ ಬೇಡಿಕೆಗಳ ಕರಪತ್ರಗಳನ್ನು ಪ್ರದರ್ಶಿಸಿದರು.
ರಾಜ್ಯ ಸರ್ಕಾರ ಕೋವಿಡ್ ಸಂಕಷ್ಟದಲ್ಲಿ ಕಾರ್ಮಿಕರ ನೆರವಿಗೆ ಪರಿಹಾರ ಘೋಷಿಸಬೇಕು ಎಂದು ಒತ್ತಾಯಿಸಿದರು. ಜಿಲ್ಲಾ ಕಟ್ಟಡ ಕಾರ್ಮಿಕರ ಸಂಘದ ಅಧ್ಯಕ್ಷ ವೈ. ತಿಪ್ಪೇಸ್ವಾಮಿ ಮಾತನಾಡಿ, ಕೊರೊನಾ ಎರಡನೇ ಅಲೆ ಶರವೇಗದಲ್ಲಿ ಹರಡುತ್ತಿರುವುದರಿಂದ ನೋಂದಾಯಿತ ಕಟ್ಟಡ ಕಾರ್ಮಿಕರು ಹೊರಬರಲು ಆಗದಂತಹ ಪರಿಸ್ಥಿತಿಯಲ್ಲಿದ್ದಾರೆ.
ಹಾಗಾಗಿ ಕಾರ್ಮಿಕರು ಎಲ್ಲಿದ್ದಾರೋ ಅಲ್ಲಿಯೇ ಮೇ ದಿನಾಚರಣೆ ಆಚರಿಸುವಂತಾಗಿದೆ. ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಕಾರ್ಮಿಕರಿಗೆ ವಿಶೇಷ ಪ್ಯಾಕೇಜ್ ಘೋಷಿಸುವಂತೆ ಮನವಿ ಮಾಡಿದರು. ಜಿಲ್ಲಾ ಕಟ್ಟಡ ಕಾರ್ಮಿಕರ ಸಂಘದ ಕಾರ್ಯಾಧ್ಯಕ್ಷ ಜಾವೀದ್ ಭಾಷ, ಉಪಾಧ್ಯಕ್ಷ ಎಂ. ಮಲ್ಲಿಕಾರ್ಜುನ್, ಸಂಘಟನಾ ಕಾರ್ಯದರ್ಶಿ ಸಿ.ಎಚ್. ನಾಗಭೂಷಣ, ಪ್ರಧಾನ ಕಾರ್ಯದರ್ಶಿ ಎ. ನಾಗರಾಜ್, ಕಾರ್ಯದರ್ಶಿ ಕಳ್ಳಿಹಟ್ಟಿ ನಾಗರಾಜ್, ಖಜಾಂಚಿ ಟಿ. ಅಶೋಕ, ಮಹಿಳಾ ಪ್ರಧಾನ ಕಾರ್ಯದರ್ಶಿ ಲಕ್ಷ್ಮೀದೇವಿ, ನಿರ್ದೇಶಕ ನಾಗರಾಜ್ ಮತ್ತಿತರರು ಇದ್ದರು. ¬
ಕಾರ್ಮಿಕರಿಗೆ ಪರಿಹಾರ ಕಲ್ಪಿಸಿ: ನಗರದ ಪ್ರಸನ್ನ ಚಿತ್ರಮಂದಿರದ ಪಕ್ಕದಲ್ಲಿರುವ ಸಿಐಟಿಯು ಕಚೇರಿಯಲ್ಲಿ ಶನಿವಾರ ಕಾರ್ಮಿಕ ದಿನಾಚರಣೆಯನ್ನು ಸರಳವಾಗಿ ಆಚರಿಸಲಾಯಿತು. ಸಿಐಟಿಯು ಜಿಲ್ಲಾ ಸಹ ಸಂಚಾಲಕ ಸಿ.ಕೆ. ಗೌಸ್‌ಪೀರ್ ಮಾತನಾಡಿ, ಕಳೆದ ವರ್ಷ ಘೋಷಿಸಲಾದ ಕೋವಿಡ್ ಪರಿಹಾರ ನಿ ಧಿ ಐದು ಸಾವಿರ ರೂ. ಇನ್ನೂ ಒಂದು ಲಕ್ಷ ಕಟ್ಟಡ ಕಾರ್ಮಿಕರಿಗೆ ತಲುಪಿಲ್ಲ. ಕೂಡಲೇ ಅವರ ಬ್ಯಾಂಕ್ ಖಾತೆಗಳಿಗೆ ಹಣ ಜಮಾ ಆಗಬೇಕು. ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಕೋವಿಡ್ ಎರಡನೆ ಹಂತದ ಪರಿಹಾರವಾಗಿ ಪ್ರತಿ ವಾರ ಎರಡು ಸಾವಿರ ರೂ.ನಂತೆ ಮುಂದಿನ ಮೂರು ತಿಂಗಳ ಕಾಲ ಕಾರ್ಮಿಕರ ಖಾತೆಗಳಿಗೆ ವರ್ಗಾವಣೆಯಾಗಬೇಕು.
ಎಲ್ಲರಿಗೂ ಕೋವಿಡ್ ಲಸಿಕೆ, ಆಮ್ಲಜನಕ, ಔಷಉಚಿತವಾಗಿ ಸಿಗಬೇಕು. ಪ್ರತಿ ಕುಟುಂಬಕ್ಕೆ ಹತ್ತು ಸಾವಿರ ರೂ. ಆರ್ಥಿಕ ನೆರವು ನೀಡಿ ತಲಾ ಹತ್ತು ಕೆಜಿ ಆಹಾರ ಧಾನ್ಯ ಒದಗಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು. ಕಟ್ಟಡ ಕಾರ್ಮಿಕರ ಸಮಿತಿ ಜಿಲ್ಲಾಧ್ಯಕ್ಷ ಬಿ.ಸಿ. ನಾಗರಾಜ ಚಾರಿ, ಭಾಸ್ಕರ ಚಾರಿ, ಅಬ್ದುಲ್ಲಾ, ಕೆಂಚಪ್ಪ, ಸಣ್ಣಮ್ಮ ಇದ್ದರು.