ಚಳ್ಳಕೆರೆ: ನಗರದ 31 ವಾರ್ಡ್‌ಗಳ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಮನೆಗಳಲ್ಲಿ ತಪಾಸಣಾ ಕಾರ್ಯ ನಡೆಸಲಾಗಿದೆ. ಹೊರ ಜಿಲ್ಲೆ, ರಾಜ್ಯ ಹಾಗೂ ವಿದೇಶದಿಂದ ಬಂದ 32 ಜನರ ಬಗ್ಗೆ ಮಾಹಿತಿ ಸಂಗ್ರಹಿಸಲಾಗಿದೆ ಎಂದು ನಗರಸಭೆ ಪೌರಾಯುಕ್ತ ಪಿ. ಪಾಲಯ್ಯ ತಿಳಿಸಿದ್ದಾರೆ.
ನಗರದ ವಿವಿಧ ವಾರ್ಡ್‌ಗಳಲ್ಲಿ ಮನೆ ಮನೆ ಸಮೀಕ್ಷೆ ನಡೆಸಿದ ಸಂದರ್ಭದಲ್ಲಿ ಮಾತನಾಡಿದ ಅವರು, ಕೊರೊನಾ ಪಾಸಿಟಿವ್ ಪ್ರಕರಣಗಳ ರೋಗಿಗಳು ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದರು.
ನಗರಸಭೆ ಸಭಾಂಗಣದಲ್ಲಿ ಶಾಸಕ ಟಿ. ರಘುಮೂರ್ತಿ, ತಹಶೀಲ್ದಾರ್ ಎಂ. ಮಲ್ಲಿಕಾರ್ಜುನ್, ಡಿವೈಎಸ್ಪಿ ಕೆ.ವಿ. ಶ್ರೀಧರ್, ನಗರಸಭೆ ಅಧ್ಯಕ್ಷೆ ಸಿ.ಬಿ. ಜಯಲಕ್ಷ್ಮೀ, ಉಪಾಧ್ಯಕ್ಷೆ ಜೈತುಂಬಿ, ಸ್ಥಾಯಿ ಸಮಿತಿ ಅಧ್ಯಕ್ಷ ಬಿ.ಟಿ. ರಮೇಶ್ ಗೌಡ, ಸದಸ್ಯರು ಹಾಗೂ ಅಧಿಕಾರಿಗಳ ಸಭೆ ನಡೆದಿತ್ತು. ಆ ಸಭೆಯಲ್ಲಿ ಕೈಗೊಂಡ ತೀರ್ಮಾನದಂತೆ ನಗರಸಭೆ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಆಶಾ, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಮತಗಟ್ಟೆ ಅ ಧಿಕಾರಿಗಳ ಸಮೀಕ್ಷಾ ಕಾರ್ಯವನ್ನು ಮೇ 1 ಮತ್ತು 2ರಂದು ಬೆಳಗಿನಿಂದ ಸಂಜೆ ತನಕ ನಿರಂತರವಾಗಿ ನಡೆಸಿ ಮಾಹಿತಿ ಸಂಗ್ರಹಿಸಿದ್ದಾರೆ.
ಇದೇ ಸಂದರ್ಭದಲ್ಲಿ ನಗರದ ವಿವಿಧ ವಾಡ್ ìಗಳಲ್ಲಿ ಸ್ವತ್ಛತೆ ಹಾಗೂ ಇನ್ನಿತರ ಮೂಲ ಸೌಕರ್ಯಗಳ ಬಗ್ಗೆಯೂ ಗಮನ ನೀಡಲಾಗಿದೆ. ಬೇರೆ ಕಡೆಯಿಂದ ಬಂದ ಯಾರಾದರೂ ತಮ್ಮ ಮನೆ ಅಥವಾ ಬಡಾವಣೆ¿åಲ್ಲಿ ಇದ್ದರೆ ಅವರ ಬಗ್ಗೆ ತಕ್ಷಣ ಮಾಹಿತಿ ನೀಡುವಂತೆ ಮನವಿ ಮಾಡಿರುವುದಾಗಿ ಹೇಳಿದರು.
ಸಮೀಕ್ಷೆ ಸಂದರ್ಭದಲ್ಲಿ ಅಮೇರಿಕದಿಂದ ವಿದ್ಯಾರ್ಥಿನಿಯೊಬ್ಬರು ಆಗಮಿಸಿದ್ದು, ಅವರ ಮನೆಯಲ್ಲೇ ಐದು ಜನ ಕೊರೊನಾ ಸೋಂಕಿತರು ಇರುವುದು ಕಂಡುಬಂದಿದೆ. ಅಲ್ಲದೆ ಬೆಂಗಳೂರು, ತುಮಕೂರು, ಬಳ್ಳಾರಿ, ಮಂಗಳೂರು ಮುಂತಾದ ಕಡೆಗಳಿಂದ ಬಂದವರು ಇಲ್ಲಿ ವಾಸವಾಗಿದ್ದಾರೆ. ಅವರೆಲ್ಲರನ್ನೂ ತಪಾಸಣೆಗೆ ಒಳಪಡಿಸಿ ಮನೆಯಲ್ಲೇ ಇರುವಂತೆ ಸೂಚಿಸಲಾಗಿದೆ ಎಂದರು.
ನಗರಸಭೆ ವ್ಯವಸ್ಥಾಪಕ ಲಿಂಗರಾಜು, ಕಂದಾಯಾಧಿಕಾರಿ ವಿ. ಈರಮ್ಮ, ನೈರ್ಮಲ್ಯ ಇಂಜಿನಿಯರ್ ನರೇಂದ್ರಬಾಬು, ವಿನಯ್, ಲೋಕೇಶ್, ಹಿರಿಯ ಆರೋಗ್ಯ ನಿರೀಕ್ಷಕ ಮಹಲಿಂಗಪ್ಪ, ಕಿರಿಯ ಆರೋಗ್ಯ ನಿರೀಕ್ಷರಾದ ಗಣೇಶ್, ದಾದಾಪೀರ್, ಸಿಬ್ಬಂದಿಯವರಾದ ತಿಪ್ಪೇಸ್ವಾಮಿ, ವಿಶ್ವನಾಥ, ಮಂಜುನಾಥ, ವೀರಭದ್ರಪ್ಪ ಮತ್ತಿತರರು ಹಾಜರಿದ್ದರು.