ಮೊಳಕಾಲ್ಮೂರು: ಕೊರೊನಾ ನಿಯಂತ್ರಿಸಲು ತಾಲೂಕು ಮಟ್ಟದ ಅ ಧಿಕಾರಿಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ. ಶ್ರೀರಾಮುಲು ಸೂಚನೆ ನೀಡಿದರು. ಪಟ್ಟಣದ ತಾಲೂಕು ಪಂಚಾಯಿತಿ ಕಾರ್ಯಾಲಯದಲ್ಲಿ ನಡೆದ ಕೋವಿಡ್ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
ತಾಲೂಕಿನ ಸರ್ಕಾರಿ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಸೌಲಭ್ಯದ ಬೆಡ್‌ಗಳಿಗೆ ಕೊರತೆಯಾಗದಂತೆ ಆಕ್ಸಿಜನ್, ವೆಂಟಿಲೇಟರ್ ಮತ್ತು ರೆಮ್ ಡಿಸಿವರ್ ಸೇರಿದಂತೆ ಅಗತ್ಯವಿರುವ ಔಷ ಧ ಪೂರೈಕೆಯಾಗಬೇಕಿದೆ. ತಾಲೂಕಿನಲ್ಲಿ ಆಕ್ಸಿಜನ್ ಪ್ಲಾಂಟ್ ಮಂಜೂರಾತಿಗೆ ಸರ್ಕಾರದ ಗಮನಕ್ಕೆ ತರಲಾಗುವುದು ಎಂದರು.
ಹೋಂ ಕ್ವಾರಂಟೈನ್‌ನಲ್ಲಿರುವವರನ್ನು ತ್ವರಿತವಾಗಿ ಕೋವಿಡ್ ಆಸ್ಪತ್ರೆಗೆ ಸ್ಥಳಾಂತರಿಸಿ ಸೂಕ್ತ ಚಿಕಿತ್ಸೆ ಕಲ್ಪಿಸಿ ಮತ್ತೂಬ್ಬರಿಗೆ ಹರಡದಂತೆ ಮುನ್ನೆಚ್ಚರಿಕೆ ಕೈಗೊಳ್ಳಬೇಕಾಗಿದೆ. ತಾಲೂಕಿನಲ್ಲಿ ಆಕ್ಸಿಜನ್, ಬೆಡ್‌ಗಳು, ಔಷಧ ಇನ್ನಿತರ ಸೌಲಭ್ಯಗಳು ಕೊರತೆಯಾಗದಂತೆ ನಿರ್ವಹಿಸಲು ತಾಲೂಕು ಮಟ್ಟದ ಅಧಿ ಕಾರಿಗಳು ಕೆಲಸವನ್ನು ಹಂಚಿಕೆ ಮಾಡಿಕೊಂಡು ಕಾರ್ಯ ನಿರ್ವಹಿಸಬೇಕೆಂದರು.
ತಾಲೂಕಿನಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾದಲ್ಲಿ ಆಸ್ಪತ್ರೆಗಳಲ್ಲಿರುವ ಬೆಡ್‌ಗಳ ಪ್ರಮಾಣವನ್ನು ಹೆಚ್ಚಿಸಿಕೊಳ್ಳಲು ನಿತ್ಯದ ಹೊರರೋಗಿಗಳ ಆಸ್ಪತ್ರೆಯನ್ನು ತಾತ್ಕಾಲಿಕವಾಗಿ ಬೇರೆ ಕಟ್ಟಡಕ್ಕೆ ಸ್ಥಳಾಂತರಿಸಲು ಸರ್ಕಾರದಿಂದ ಹೆಚ್ಚಿನ ಅನುದಾನ ಕಲ್ಪಿಸಲಾಗುವುದು. 18 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ ನೀಡಲು ಲಸಿಕೆಯ ಲಭ್ಯತೆಯನ್ನು ಪರಿಗಣಿಸಿ ಸೌಲಭ್ಯ ಕಲ್ಪಿಸಲಾಗುವುದೆಂದು ತಿಳಿಸಿದರು.
ತಹಶೀಲ್ದಾರ್ ಟಿ. ಸುರೇಶ್‌ಕುಮಾರ್ ಮಾತನಾಡಿ, ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ 51 ಬೆಡ್‌ಗಳ ಸೌಲಭ್ಯ ಕಲ್ಪಿಸಲಾಗಿದೆ. ಕೊರೊನಾ ಪ್ರಮಾಣ ಹೆಚ್ಚಾದಲ್ಲಿ ಆದರ್ಶ ವಿದ್ಯಾಲಯ ಕಟ್ಟಡ, ಮೊರಾರ್ಜಿ ವಸತಿ ಶಾಲೆಗಳಲ್ಲಿ ಚಿಕಿತ್ಸೆ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದರು.
ತಾಲೂಕು ಆರೋಗ್ಯಾಧಿಕಾರಿ ಡಾ| ಸುಧಾ, ಸರ್ಕಾರಿ ಆಸ್ಪತ್ರೆ ಆಡಳಿತಾಧಿ ಕಾರಿ ಡಾ| ಅಭಿನವ್, ಪೊಲೀಸ್ ವೃತ್ತ ನಿರೀಕ್ಷಕ ಜಿ.ಬಿ. ಉಮೇಶ್, ತಾಪಂ ಪ್ರಭಾರಿ ಇಒ ಮಾರುತಿ, ಪಿಎಸ್‌ಐ ಎಂ.ಕೆ. ಬಸವರಾಜ್, ತಾಲೂಕು ಕಚೇರಿ ಶಿರಸ್ತೇದಾರ ಏಳುಕೋಟಿ, ಶಿಶು ಅಭಿವೃದ್ಧಿ ಯೋಜನಾ ಧಿಕಾರಿ ಸವಿತಾ, ಪಪಂ ಮುಖ್ಯಾ ಧಿಕಾರಿ ಕಾಂತರಾಜ್, ಬಿಜೆಪಿ ಮಂಡಲಾಧ್ಯಕ್ಷ ಡಾ| ಪಿ.ಎಂ. ಮಂಜುನಾಥ, ಪಪಂ ಅಧ್ಯಕ್ಷ ಪಿ. ಲಕ್ಷ್ಮಣ, ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಬಿ. ವಿಜಯ್ ಇತರರು ಇದ್ದರು.