Advertisement

ಕೊರೊನಾ ನಿರ್ಮೂಲನೆಗೆ ಶ್ರಮಿಸಿ: ಎಸ್‌. ಪರಮೇಶ್‌

10:15 PM May 09, 2021 | Team Udayavani |

ಮೊಳಕಾಲ್ಮೂರು: ಮಾರಣಾಂತಿಕ ಕೊರೊನಾ ನಿರ್ಮೂಲನೆಗೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ಸಮಾಜ ಪರಿವರ್ತನಾ ಸೇವಾ ಸಂಸ್ಥೆಯ ನಿರ್ದೇಶಕ ಎಸ್‌. ಪರಮೇಶ್‌ ಹೇಳಿದರು. ತಾಲೂಕಿನ ನೇರ‌್ಲಹಳ್ಳಿ ಗ್ರಾಮದಲ್ಲಿ ಸಮಾಜ ಪರಿವರ್ತನಾ ಸೇವಾ ಸಂಸ್ಥೆ ಹಾಗೂ ಗ್ರಾಮ ಪಂಚಾಯಿತಿ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ಕೊರೊನಾ ನಿಯಂತ್ರಣ ಜಾಗೃತಿ ಜಾಥಾದಲ್ಲಿ ಅವರು ಮಾತನಾಡಿದರು.

Advertisement

ಪ್ರತಿಯೊಬ್ಬರೂ ಮಾಸ್ಕ್ ಧರಿಸಿ ಅಗತ್ಯ ಮತ್ತು ಅನಿವಾರ್ಯತೆ ಇದ್ದಲ್ಲಿ ಮಾತ್ರ ಹೊರಗಡೆ ಬಂದು ಕನಿಷ್ಠ 2 ಮೀಟರ್‌ನಷ್ಟು ಭೌತಿಕ ಅಂತರ ಕಾಪಾಡಿಕೊಳ್ಳಬೇಕು. ಅಗತ್ಯ ವಸ್ತುಗಳನ್ನು ಖರೀದಿಸಿ ಸುರಕ್ಷಿತವಾಗಿ ಮನೆ ಸೇರಬೇಕು ಆಗಾಗ.ಸ್ಯಾನಿಟೈಸರ್‌ ಅಥವಾ ಸಾಬೂನಿನಿಂದ ಕೈಗಳನ್ನು ಸ್ವತ್ಛಗೊಳಿಸಬೇಕು. ಕೆಮ್ಮು, ನೆಗಡಿ, ಶೀತ, ಜ್ವರ, ತಲೆನೋವು ಇತ್ಯಾದಿ ಲಕ್ಷಣಗಳು ಕಂಡು ಬಂದಲ್ಲಿ ಹತ್ತಿರದ ಆರೋಗ್ಯ ಕೇಂದ್ರಗಳನ್ನು ಸಂಪರ್ಕಿಸಿ ಸೂಕ್ತ ಚಿಕಿತ್ಸೆ ಪಡೆದು ಆರೋಗ್ಯವನ್ನು ಕಾಪಾಡಿಕೊಳ್ಳಬೇಕೆಂದರು.

ಪಂಚಾಯತ್‌ ಅಭಿವೃದ್ಧಿ ಅಧಿಕಾರಿ ಆರ್‌. ಕೆಂಚಪ್ಪ ಮಾತನಾಡಿ ಕೊರೊನಾ ಎರಡನೇ ಅಲೆ ದೇಶಾದ್ಯಂತ ಅತ್ಯಂತ ಭಯಂಕರ ವಾತಾವರಣವನ್ನು ಸೃಷ್ಟಿಸಿ ಸಾವು-ನೋವುಗಳಿಗೆ ಕಾರಣವಾಗಿದೆ. ಆರೋಗ್ಯವೇ ಮಹಾಭಾಗ್ಯವಾಗಿರುವುದರಿಂದ ಪ್ರತಿಯೊಬ್ಬರೂ ಕೊರೊನಾ ಲಸಿಕೆ ಪಡೆಯಬೇಕು. ಏಕೆಂದರೆ ಕೊರೊನಾ ಲಸಿಕೆ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದು ತಿಳಿಸಿದರು.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ರತ್ನಮ್ಮ, ಕಾರ್ಯದರ್ಶಿ ಕೊಲ್ಲಣ್ಣ, ಜಯಣ್ಣ, ಯುವ ಮುಖಂಡರಾದ ಎಚ್‌.ತಿಪ್ಪೇಸ್ವಾಮಿ, ಪದ್ಮಾವತಿ, ಪಾಪಣ್ಣ, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next