ಚಳ್ಳಕೆರೆ: ಕೊರೊನಾ ಎರಡನೇ ಅಲೆಯ ನಿಯಂತ್ರಣ ಸಫಲವಾದಲ್ಲಿ ಮಾತ್ರ ಮೂರನೇ ಹಂತವನ್ನು ಯಶಸ್ವಿಯಾಗಿ ನಿಭಾಯಿಸಬಹುದು. ಈ ನಿಟ್ಟಿನಲ್ಲಿ ತಾಲೂಕು ಮಟ್ಟದ ಅಧಿ ಕಾರಿಗಳ ಮೇಲೆ ಮಹತ್ತರವಾದ ಜವಾಬ್ದಾರಿ ಇದೆ. ಪ್ರತಿಯೊಂದು ಹಂತದಲ್ಲೂ ಸಕ್ರಿಯವಾಗಿ, ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸುವ ಮೂಲಕ ಕೊರೊನಾ ನಿಯಂತ್ರಣಕ್ಕೆ ಹೆಚ್ಚು ಒತ್ತು ನೀಡಬೇಕೆಂದು ಶಾಸಕ ಟಿ. ರಘುಮೂರ್ತಿ ಅ ಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಮಂಗಳವಾರ ಇಲ್ಲಿನ ಶಾಸಕರ ಭವನದಲ್ಲಿ ತಾಲೂಕು ಮಟ್ಟದ ಅ ಕಾರಿಗಳ ತುರ್ತು ಸಭೆ ಕನಡೆಸಿ ಅವರು ಮಾತನಾಡಿದರು. ಎರಡನೇ ಹಂತವನ್ನು ನಿಯಂತ್ರಿಸುವಲ್ಲಿ ಎಲ್ಲರೂ ಯಶಸ್ವಿಯಾದಲ್ಲಿ ಮಾತ್ರ ಮೂರನೇ ಹಂತದಲ್ಲಿ ಯಾವುದೇ ಅಪಾಯ ನಮಗೆ ಎದುರಾಗುವುದಿಲ್ಲ. ಹಾಗಾಗಿ ನೀವು ನಿರ್ವಹಿಸುವ ಕಾರ್ಯದ ಮೇಲೆ ಎಲ್ಲಾ ಬೆಳವಣಿಗೆಗೆಗಳು ನಿಂತಿವೆ ಎಂದರು.
ತಹಶೀಲ್ದಾರ್ ಎಂ. ಮಲ್ಲಿಕಾರ್ಜುನ್ ಮಾತನಾಡಿ, ಸರ್ಕಾರದ ನಿರ್ದೇಶನದ ಮೇರೆಗೆ ನಗರದ ಹೊರವಲಯದಲ್ಲಿ ನೂರು ಹಾಸಿಗೆಗಳ ಕೋವಿಡ್ ಕೇರ್ ಸೆಂಟರ್ ಪ್ರಾರಂಭಿಸಲಾಗಿದೆ. ಕಂದಾಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿ ಕಾರಿಗಳನ್ನು ಕೋವಿಡ್ ಕೇಂದ್ರದ ಉಸ್ತುವಾರಿಯಾಗಿ ನೇಮಿಸಲಾಗಿದೆ. ಪಾಸಿಟಿವ್ ಸೋಂಕಿತರನ್ನು ಮಾತ್ರ ಅಲ್ಲಿ ದಾಖಲಿಸುತ್ತಿದ್ದು, ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿರುವುದಾಗಿ ತಿಳಿಸಿದರು.
ಪ್ರಭಾರಿ ತಾಲೂಕು ಆರೋಗ್ಯಾಧಿ ಕಾರಿ, ಸರ್ಕಾರಿ ಆಸ್ಪತ್ರೆ ಆಡಳಿತಾಧಿ ಕಾರಿ ಡಾ| ಜೆ.ಡಿ. ವೆಂಕಟೇಶ್ ಮಾತನಾಡಿ, ಸರ್ಕಾರಿ ಆಸ್ಪತ್ರೆ ಕೋವಿಡ್ ಕೇಂದ್ರದಲ್ಲಿರುವ ಸೋಂಕಿತರಿಗೆ ಉತ್ತಮ ಚಿಕಿತ್ಸೆ ನೀಡಲಾಗುತ್ತಿದೆ. ಹೆಚ್ಚುವರಿಯಾಗಿ ಆಕ್ಸಿಜನ್ ಸಿಲಿಂಡರ್‌ಗಳನ್ನು ತರಿಸಿಕೊಳ್ಳಲಾಗಿದೆ. ರೆಮ್‌ಡಿಸಿವಿರ್ ಲಸಿಕೆಯನ್ನು ಸಾಕಷ್ಟು ಪ್ರಮಾಣದಲ್ಲಿ ದಾಸ್ತಾನು ಇಡಲಾಗಿದೆ. ರೋಗಿಯ ಸ್ಥಿತಿಯನ್ನು ಅವಲಂಬಿಸಿ ರೆಮ್ ಡಿಸಿವಿರ್ ಬಳಸಲಾಗುತ್ತಿದೆ ಎಂದರು.
ನಗರಸಭೆ ಪೌರಾಯುಕ್ತ ಪಿ. ಪಾಲಯ್ಯ ಮಾಹಿತಿ ನೀಡಿ, ನಗರದ ವಿವಿಧ ಬಡಾವಣೆಗಳಲ್ಲಿ ಪಾಸಿಟಿವ್ ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಹೈಡ್ರೋಕ್ಲೋರಿನೇಷನ್ ರಾಸಾಯನಿಕ ದ್ರಾವಣವನ್ನು ಸಿಂಪಡಿಸಲಾಗಿದೆ. ಕರ್ಫ್ಯೂ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯ ಸೂಚನೆ ಮೇರೆಗೆ ನಗರದ ಪ್ರಧಾನ ಹಾಗೂ ಒಳ ರಸ್ತೆಗಳಲ್ಲಿ ಸಾರ್ವಜನಿಕರು ಹಾಗೂ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ನಗರಸಭೆ ವತಿಯಿಂದ ಜಿಲ್ಲೆ ಹಾಗೂ ಅಂತರ್ಜಿಲ್ಲೆಯಿಂದ ಬಂದವರನ್ನು ಪತ್ತೆ ಹಚ್ಚಿ ವರದಿ ನೀಡಲಾಗಿದೆ ಎಂದು ತಿಳಿಸಿದರು.
ಡಿವೈಎಸ್ಪಿ ಕೆ.ವಿ. ಶ್ರೀಧರ್, ಠಾಣಾ ಇನ್ಸ್‌ಪೆಕ್ಟರ್ ಜೆ.ಎಸ್. ತಿಪ್ಪೇಸ್ವಾಮಿ, ಪಿಎಸ್‌ಐಗಳಾದ ಪಿ.ಆರ್. ರಾಘವೇಂದ್ರ, ಮಂಜುನಾಥ ಲಿಂಗಾರೆಡ್ಡಿ ಸಭೆಯಲ್ಲಿ ಭಾಗವಹಿಸಿದ್ದರು.