Advertisement

ಇಂದಿರಾ ಕ್ಯಾಂಟಿನ್‌ನಲ್ಲಿ ಉಚಿತ ಊಟ

10:31 PM May 13, 2021 | Team Udayavani |

ಜಗಳೂರು: ಕೊರೊನಾ ಕರ್ಫ್ಯೂ ಹಿನ್ನೆಲೆಯಲ್ಲಿ ಇಂದಿರಾ ಕ್ಯಾಂಟಿನ್‌ನಲ್ಲಿ ಉಚಿತವಾಗಿ ಉಪಹಾರ ಮತ್ತು ಊಟದ ವ್ಯವಸ್ಥೆ ಮಾಡಲಾಗಿದ್ದು, ಕೂಲಿ ಕಾರ್ಮಿಕರು ಸದುಪಯೋಗ ಪಡೆದುಕೊಳ್ಳಬೇಕು ಎಂದು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ರಾಜು ಬಣಕಾರ್‌ ಹೇಳಿದರು.

Advertisement

ಪಟ್ಟಣದ ಇಂದಿರಾ ಕ್ಯಾಂಟಿನ್‌ ಗೆ ಭೇಟಿ ನೀಡಿ ಪರಿಶೀಲಿಸಿ ನಡೆಸಿದ ಅವರು, ಕೋವಿಡ್‌ ಎರಡನೇ ಅಲೆ ನಿಯಂತ್ರಿಸಲು ಈ ಸಂದರ್ಭದಲ್ಲಿ ಬಡಕೂಲಿ ಕಾರ್ಮಿಕರಿಗೆ, ವಲಸಿಗರಿಗೆ, ದುರ್ಬಲ ವರ್ಗದವರಿಗೆ ಅನಾನುಕೂಲ ಆಗದಂತೆ ಸರ್ಕಾರ ಸ್ಥಳಿಯ ಆಡಳಿತ ಸಂಸ್ಥೆಗಳಲ್ಲಿ ಚಾಲ್ತಿಯಲ್ಲಿರುವ ಇಂದಿರಾ ಕ್ಯಾಂಟಿನ್‌ನಲ್ಲಿ ಉಚಿತವಾಗಿ ಉಪಹಾರ, ಮಧ್ಯಾಹ್ನ ಹಾಗೂ ರಾತ್ರಿ ಊಟ ಒದಗಿಸುವಂತೆ ಪೌರಾಡಳಿತ ನಿರ್ದೇಶನಾಲಯ ನಿರ್ದೇಶಿಸಿದೆ. ನಿತ್ಯ ಆಹಾರ ಸೇವಿಸುವ ಜನ ಸಂಖ್ಯೆಯ ವಿವರಗಳನ್ನು ನಿರ್ವಹಿಸಲು ತಿಳಿಸಿದೆ ಎಂದರು.

ಮೇ 24ರ ವರೆಗೆ ಉಚಿತವಾಗಿ ಬೆಳಗ್ಗೆ ಉಪಹಾರ ಮಧ್ಯಾಹ್ನ ಹಾಗೂ ರಾತ್ರಿ ಊಟ ಒದಗಿಸುವಂತೆ ಅಡುಗೆ ಸಿಬ್ಬಂದಿಗೆ ಸೂಚಿಸಿದರು. ಸಾರ್ವಜನಿಕರು ಕೋವಿಡ್‌ ಮಾರ್ಗಸೂಚಿ ಕಡ್ಡಾಯ ಪಾಲಿಸಬೇಕು. ಮಾಸ್ಕ್ ಸ್ಯಾನಿಟೈಸರ್‌ ಬಳಸಿ ಕ್ಯಾಂಟಿನ್‌ಗೆ ಆಗಮಿಸಬೇಕು. ಅಲ್ಲದೆ ಶುಚಿರುಚಿಯಾದ ಅಡುಗೆ ತಯಾರಿಸಲು ತಿಳಿಸಲಾಗಿದೆ ಎಂದರು.

ಈ ಸಂದರ್ಭದಲ್ಲಿ ಪ.ಪಂ ಆರೋಗ್ಯ ನಿರೀಕ್ಷಕ ಖೀಫಾಯತ್‌, ಅಡುಗೆ ಸಿಬ್ಬಂದಿ ರೇಣುಕಮ್ಮ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next