Advertisement

ಪ್ರಾಣ ರಕ್ಷಣೆಗೆ ವೈದ್ಯರು ಶ್ರಮಿಸಿ

10:45 PM May 16, 2021 | Team Udayavani |

ಚಳ್ಳಕೆರೆ: ಸರ್ಕಾರ ಕೊರೊನಾ ನಿಯಂತ್ರಣ ಹಾಗೂ ಸೋಂಕಿತರ ರಕ್ಷಣೆಗೆ ಎಲ್ಲಾ ರೀತಿಯ ವ್ಯವಸ್ಥೆ ಮಾಡಿದೆ. ಜನರ ಪ್ರಾಣ ಉಳಿಸಲು ವೈದ್ಯರು ಮತ್ತು ಸಿಬ್ಬಂದಿ ವರ್ಗ ಹಗಲಿರುಳು ಕರ್ತವ್ಯ ನಿರ್ವಹಿಸಿ ಜನರಲ್ಲಿ ಆತ್ಮವಿಶ್ವಾಸ ಮೂಡಿಸಲು ಪ್ರಾಮಾಣಿಕ ಪ್ರಯತ್ನ ನಡೆಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ. ಶ್ರೀರಾಮುಲು ಸೂಚಿಸಿದರು.

Advertisement

ಶನಿವಾರ ಇಲ್ಲಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿದ್ದ ಅವರು ಕೊರೊನಾ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದು ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ಇಲ್ಲಿನ ಸಾರ್ವಜನಿಕ ಆಸ್ಪತ್ರೆ ಸೇರಿದಂತೆ ಬಹುತೇಕ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕೋವಿಡ್‌ ಸೋಂಕಿತರಿಗೆ ಸೂಕ್ತವಾಗಿ ಚಿಕಿತ್ಸೆ ದೊರೆಯುತ್ತಿಲ್ಲವೆಂಬ ಆರೋಪವಿದೆ. ಆಸ್ಪತ್ರೆಗೆ ದಾಖಲಾದರೂ ವೈದ್ಯರು ಕರ್ತವ್ಯದಲ್ಲಿದ್ದರೂ ಕೋವಿಡ್‌ ಸೋಂಕಿತರ ಜೀವ ಉಳಿಸಲು ಸಾಧ್ಯವಾಗುತ್ತಿಲ್ಲ. ಇದಕ್ಕೆ ಸ್ಪಷ್ಟ ಕಾರಣ ಇನ್ನೂ ತಿಳಿದಿಲ್ಲ ಎಂದರು.

ಸರ್ಕಾರ ಈಗಾಗಲೇ ಜಿಲ್ಲಾಧಿ ಕಾರಿಗಳ ಖಾತೆಗೆ ಹಣ ಜಮಾ ಮಾಡಿದೆ. ಕೊರೊನಾ ಸೋಂಕಿತರ ಚಿಕಿತ್ಸೆಗೆ ಅವಶ್ಯವಿರುವ ಆಕ್ಸಿಜನ್‌ ಸೇರಿದಂತೆ ಎಲ್ಲಾ ರೀತಿಯ ವೈದ್ಯಕೀಯ ಉಪಕರಣಗಳನ್ನು ಖರೀದಿಸಿ ರೋಗಿಗಳ ಜೀವ ಉಳಿಸಲು ವೈದ್ಯರು ಮುಂದಾಗಬೇಕಿದೆ. ನಿಮ್ಮ ಪರಿಶ್ರಮ ಪ್ರಾಮಾಣಿಕತೆ, ನೈಪುಣ್ಯ, ಸಹನೆ, ಕರ್ತವ್ಯ ಪ್ರಜ್ಞೆಯಿಂದ ರೋಗಿಗಳನ್ನು ಗುಣಮುಖರನ್ನಾಗಿಸಬೇಕೆಂಬ ಛಲ ನಿಮ್ಮಲ್ಲಿರ ಬೇಕು. ವೈದ್ಯರು ಮತ್ತು ಸಿಬ್ಬಂದಿ ವರ್ಗ ಇನ್ನೂ ಎರಡು ತಿಂಗಳ ಕಾಲ ಕೊರೊನಾ ವಿರುದ್ಧ ಸಮರ ಸಾರಬೇಕು. ಪ್ರತಿಯೊಬ್ಬ ರೋಗಿಯನ್ನು ಆತ್ಮವಿಶ್ವಾಸದಿಂದ ಕಂಡು ಅವನನ್ನು ಗುಣಮುಖನಾಗುವ ರೀತಿಯಲ್ಲಿ ಚಿಕಿತ್ಸೆ ನೀಡಿ. ಯಾವುದೇ ಹಂತದಲ್ಲೂ ಸರ್ಕಾರ ನಿರ್ಲಕ್ಷ ಸಹಿಸುವುದಿಲ್ಲ ಎಂದು ತಾಕೀತು ಮಾಡಿದರು.

ಜಿಲ್ಲಾ ಧಿಕಾರಿ ಕವಿತಾ ಎಸ್‌. ಮನ್ನಿಕೇರಿ ಮಾತನಾಡಿ, ತಾಲೂಕು ಹಾಗೂ ಗ್ರಾಮೀಣ ಭಾಗಗಳಲ್ಲಿ ಕರ್ತವ್ಯ ನಿರ್ವಹಿಸುವ ಎಲ್ಲಾ ಸರ್ಕಾರಿ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು, ಕೊರೋನಾ ನಿಯಂತ್ರಣಕ್ಕೆ ಸಹಕರಿಸಬೇಕು. ಗ್ರಾಮೀಣ ಭಾಗಗಳಲ್ಲಿ ಸ್ವತ್ಛತೆ ಮಾಯವಾಗುತ್ತಿದ್ದು, ಪಂಚಾಯಿತಿ ಅಭಿವೃದ್ಧಿ ಅ ಧಿಕಾರಿಗಳು ಗ್ರಾಮದಲ್ಲೇ ಇದ್ದು ಸ್ವತ್ಛತೆಗೆ ಆದ್ಯತೆ ನೀಡಬೇಕು. ಗ್ರಾಮೀಣ ಭಾಗದಲ್ಲಿ ಸ್ಯಾನಿಟೈಸರ್‌, ಫಾಗಿಂಗ್‌ ಮಾಡಿಸುವಂತೆ ತಾಪಂ ಇಒ ಪ್ರಕಾಶ್‌ ಗಮನ ಹರಿಸಬೇಕು ಎಂದು ಸೂಚಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿ ಕಾರಿ ಡಾ| ಸಿ.ಎಲ್‌. ಪಾಲಾಕ್ಷ ಮಾತನಾಡಿ, ಚಳ್ಳಕೆರೆ ತಾಲೂಕಿಗೆ ಪ್ರತಿ ನಿತ್ಯ ಸುಮಾರು 60ಕ್ಕೂ ಹೆಚ್ಚು ಆಕ್ಸಿಜನ್‌ ಸಿಲೆಂಡರ್‌, 50ಕ್ಕೂ ಹೆಚ್ಚು ರೆಮ್‌ ಡಿಸಿವಿರ್‌ ಅವಶ್ಯಕತೆ ಇದೆ. ಲಭ್ಯವಿರುವ ಪ್ರಮಾಣವನ್ನು ಕಳುಹಿಸಿಕೊಡಲಾಗುತ್ತದೆ. ಚಳ್ಳಕೆರೆ ತಾಲೂಕಿನಲ್ಲಿ ಇದುವರೆಗೂ ಒಟ್ಟು 60 ಸಾವಿರ ಜನರ ಗಂಟಲು ದ್ರವ ಪರೀಕ್ಷೆ ನಡೆಸಲಾಗಿದೆ. 2747 ಪಾಸಿಟಿವ್‌ ಪ್ರಕರಣಗಳಿದ್ದು, 2582 ಜನರು ಗುಣಮುಖರಾಗಿದ್ದಾರೆ. 26 ಜನ ಮೃತಪಟ್ಟಿದ್ದಾರೆ. ಒಟ್ಟು 154 ಸಕ್ರಿಯ ಪ್ರಕರಣಗಳಿವೆ. 1374 ಜನ ಮನೆಯಲ್ಲೇ ಚಿಕಿತ್ಸೆ ಮುಂದುವರೆಸಿದ್ದಾರೆ. ವಿವಿಧ ಕೋವಿಡ್‌ ಕೇಂದ್ರಗಳಲ್ಲಿ 185 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಮಾಹಿತಿ ನೀಡಿದರು.

Advertisement

ನಗರದ ಎಲ್ಲಾ ವಾರ್ಡ್‌ಗಳಲ್ಲೂ ವಾರಕ್ಕೆ ಎರಡು ಬಾರಿ ಹೈಡ್ರೋ ಕ್ಲೋರಿನೇಷನ್‌ ರಾಸಾಯನಿಕ ದ್ರಾವಣವನ್ನು ಸಿಂಪಡಿಸಬೇಕು ಎಂದು ಪೌರಾಯುಕ್ತ ಪಿ. ಪಾಲಯ್ಯ ಅವರಿಗೆ ತಿಳಿಸಿದರು. ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜೆ.ಪಿ. ಜಯಪಾಲಯ್ಯ ಮಾತನಾಡಿ, ಗ್ರಾಮೀಣ ಹಾಗೂ ನಗರ ಭಾಗಗಳಲ್ಲಿ ಕೋವಿಡ್‌ನಿಂದ ಮೃತಪಟ್ಟವರ ಅಂತ್ಯಸಂಸ್ಕಾರಕ್ಕೆ ಯಾವುದೇ ವ್ಯವಸ್ಥೆ ಇಲ್ಲ, ಸರ್ಕಾರದ ವತಿಯಿಂದಲೇ ಅಂತ್ಯಸಂಸ್ಕಾರ ನಡೆಸುವ ವ್ಯವಸ್ಥೆ ಆಗಬೇಕು. ಲಸಿಕೆಯನ್ನು ನಗರದ ಗುರುಭವನ ಅಥವಾ ಸರ್ಕಾರಿ ಶಾಲೆಗಳಲ್ಲಿ ನೀಡುವಂತಾಗಬೇಕು ಎಂದು ಒತ್ತಾಯಿಸಿದರು.

ಜಿಪಂ ಸಿಇಒ ಡಾ| ನಂದಿನಿದೇವಿ, ಜಿಲ್ಲಾ ರಕ್ಷಣಾಧಿಕಾರಿ ಜಿ. ರಾಧಿಕಾ, ತಾಲೂಕು ಆರೋಗ್ಯಾಧಿ ಕಾರಿ ಡಾ| ಎನ್‌. ಪ್ರೇಮಸುಧಾ, ಸಿಎಂಒ ಡಾ| ಜೆ.ಡಿ. ವೆಂಕಟೇಶ್‌, ಡಿವೈಎಸ್ಪಿ ಕೆ.ವಿ. ಶ್ರೀಧರ್‌, ಬಿಜೆಪಿ ಮುಖಂಡರಾದ ರಾಮದಾಸ್‌, ಈ.ರಾಮರೆಡ್ಡಿ, ಎಚ್‌.ವಿ. ಪ್ರಕಾಶ್‌ ರೆಡ್ಡಿ ಮತ್ತಿತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next