ಚಿತ್ರದುರ್ಗ: ಜಿಲ್ಲೆಯಲ್ಲಿ ಕೊರೊನಾ ಹತೋಟಿಗೆ ತರುವ ನಿಟ್ಟಿನಲ್ಲಿ ಹೆಚ್ಚು ಪ್ರಕರಣಗಳಿರುವ ಗ್ರಾಮಗಳಲ್ಲೇ ಮೈಕ್ರೋ ಐಸೋಲೇಶನ್ ಕೇಂದ್ರ ತೆರೆಯಿರಿ ಎಂದು ಸಂಸದ ಎ. ನಾರಾಯಣಸ್ವಾಮಿ ಸೂಚಿಸಿದರು. ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಆರೋಗ್ಯ ಇಲಾಖೆ ಅ ಕಾರಿಗಳು, ತಹಶೀಲ್ದಾರ್ ಹಾಗೂ ಇಒಗಳ ಸಭೆ ನಡೆಸಿ ಅವರು ಮಾತನಾಡಿದರು.
ಗ್ರಾಮ ಮಟ್ಟದಲ್ಲೇ ಪ್ರಕರಣಗಳನ್ನು ಪತ್ತೆ ಮಾಡಿ, ಅಲ್ಲಿಯೇ ಕೋವಿಡ್ ಕೇರ್ ಕೇಂದ್ರಗಳನ್ನು ತೆರೆಯುವುದರಿಂದ ಸಾವು ನೋವು ಕಡಿಮೆಯಾಗುತ್ತದೆ. ಜಿಲ್ಲಾ ಕೇಂದ್ರದ ಮೇಲಿನ ಒತ್ತಡವೂ ಕಡಿಮೆಯಾಗುತ್ತದೆ. ಈ ನಿಟ್ಟಿನಲ್ಲಿ ತಹಶೀಲ್ದಾರ್ ಹಾಗೂ ಇಒಗಳು ಪಡಿಒಗಳು, ಗ್ರಾಮ ಪಂಚಾಯಿತಿ ಅಧ್ಯಕ್ಷರು ಸದಸ್ಯರ ಸಹಕಾರದೊಂದಿಗೆ ಆಶಾ, ಅಂಗನವಾಡಿ ಕಾರ್ಯಕರ್ತೆಯರನ್ನು ಬಳಸಿಕೊಂಡು ಶಾಲೆಗಳಲ್ಲಿ ಕೋವಿಡ್ ಕೇಂದ್ರ ತೆರೆಯಿರಿ. ಅಗತ್ಯವಿದ್ದರೆ ಊಟದ ವ್ಯವಸ್ಥೆಯನ್ನು ನನ್ನ ಖರ್ಚಿನಲ್ಲೇ ಪ್ರತಿ ತಾಲೂಕು ಕೇಂದ್ರದಿಂದ ಸರಬರಾಜು ಮಾಡಿಸುವ ವ್ಯವಸ್ಥೆ ಮಾಡಿಸುತ್ತೇನೆ ಎಂದು ತಿಳಿಸಿದರು.
ಬೆಡ್‌ಗಳ ಮಾಹಿತಿಗೆ ವಾರ್ ರೂಂ ತಕ್ಷಣ ತೆರೆಯಿರಿ: ಜಿಲ್ಲೆಯಲ್ಲಿ ಸರ್ಕಾರಿ ಕೋಟಾದಡಿ ಖಾಸಗಿ ಆಸ್ಪತ್ರೆಗಳಲ್ಲಿ ಶೇ.50 ರಷ್ಟು ಬೆಡ್‌ಗಳನ್ನು ಮೀಸಲಿಟ್ಟು ಚಿಕಿತ್ಸೆ ನೀಡಬೇಕು. ಆದರೆ, ಇದು ಸರಿಯಾಗಿ ಆಗುತ್ತಿಲ್ಲ. ಈ ನಿಟ್ಟಿನಲ್ಲಿ ಜಿಲ್ಲಾಸ್ಪತ್ರೆ ಆವರಣದಲ್ಲೇ ವಾರ್ ರೂಂ ತೆರೆದು ರೋಗಿಗಳಿಗೆ ಮಾಹಿತಿ ನೀಡುವ ಕೆಲಸ ಮಾಡಬೇಕು. ಈ ಕೆಲಸ ಇಂದೇ ಆಗಬೇಕು ಎಂದು ತಾಕೀತು ಮಾಡಿದರು.
ಜಿಲ್ಲಾ ಕಾರಿ ಕವಿತಾ ಎಸ್. ಮನ್ನಿಕೇರಿ ಮಾತನಾಡಿ, ವಾರ್ ರೂಂ ತೆರೆಯಲು ವಾರದ ಹಿಂದೆಯೇ ಅಧಿ ಕಾರಿಯನ್ನು ನೇಮಕ ಮಾಡಿ ಸಿಬ್ಬಂದಿ ನೀಡಲಾಗಿದೆ. ಆದರೆ, ಈವರೆಗೆ ಆಗಿಲ್ಲ, ನಿಮ್ಮಿಂದ ಆಗುತ್ತದೋ ಇಲ್ಲವೋ ತಿಳಿಸಿ ಎಂದು ಡಾ| ಚಂದ್ರಶೇಖರ್ ಅವರಿಗೆ ಪ್ರಶ್ನಿಸಿದರು. ಡಿಎಚ್‌ಒ ಡಾ| ಪಾಲಾಕ್ಷ ಮಾತನಾಡಿ, ನಾಳೆಯಿಂದಲೇ ವಾರ್ ರೂಂ ಆರಂಭಿಸಿ ಬೆಡ್, ಆಕ್ಸಿಜನ್ ಸೇರಿದಂತೆ ಎಲ್ಲಾ ಮಾಹಿತಿ ಅಲ್ಲಿ ಸಿಗುವಂತೆ ಮಾಡುತ್ತೇವೆ ಎಂದು ತಿಳಿಸಿದರು.
ಖಾಸಗಿ ಕ್ಲಿನಿಕ್‌ಗಳ ಮೇಲೆ ನಿಗಾ: ಕೋವಿಡ್ ರೋಗ ಲಕ್ಷಣಗಳಿದ್ದರೂ ಸಹ ಖಾಸಗಿ ಕ್ಲಿನಿಕ್‌ನಲ್ಲಿ ವೈದ್ಯರು ಅವರಿಗೆ ಸಾಮಾನ್ಯ ಚಿಕಿತ್ಸೆ ನೀಡಿ ಕಳುಹಿಸುತ್ತಾರೆ. ಕೆಲವು ದಿನಗಳ ನಂತರ ಇವರ ಆಕ್ಸಿಜನ್ ಲೆವೆಲ್ ಕಡಿಮೆಯಾದಾಗ ಸರ್ಕಾರಿ ಆಸ್ಪತ್ರೆಗೆ ಬರುತ್ತಾರೆ. ಇದರಿಂದ ಅಂತಹ ರೋಗಿಯು ಸಂಕಷ್ಟಕ್ಕೆ ಸಿಲುಕುತ್ತಾನೆ. ಕೋವಿಡ್ ಲಕ್ಷಣಗಳು ಕಂಡು ಬಂದ ತಕ್ಷಣವೇ ಟೆಸ್ಟ್ ಮಾಡಿಸಿ ಸಕಾಲದಲ್ಲಿ ಚಿಕಿತ್ಸೆ ನೀಡುವುದರಿಂದ ಆಕ್ಸಿಜನ್ ಕೊಡುವ ಹಂತಕ್ಕೆ ರೋಗಿ ತಲುಪುವುದಿಲ್ಲ, ಕೋವಿಡ್ ಕೇರ್ ಸೆಂಟರ್ ಅಥವಾ ಪ್ರತ್ಯೇಕ ವ್ಯವಸ್ಥೆ ಇದ್ದರೆ ಮನೆಯಲ್ಲಿ ಚಿಕಿತ್ಸೆ ಪಡೆದು ಆರೋಗ್ಯವಾಗಿರಬಹುದಾಗಿದೆ. ಈ ನಿಟ್ಟಿನಲ್ಲಿ ಎಲ್ಲಾ ತಾಲೂಕು ಆರೋಗ್ಯಾ ಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ವಹಿಸಬೇಕಾಗಿದೆ ಎಂದು ಸಂಸದರು ತಿಳಿಸಿದರು.
ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳಲ್ಲಿ ತೀವ್ರ ನಿಗಾ ವಹಿಸಬೇಕಾಗಿದೆ. ಪಂಚಾಯಿತಿ ಅಭಿವೃದ್ಧಿ ಅಧಿ ಕಾರಿಗಳ ಮೇಲೆ ಒಬ್ಬೊಬ್ಬ ನೋಡಲ್ ಅ ಧಿಕಾರಿಯನ್ನು ನೇಮಕ ಮಾಡಿ. ಎಲ್ಲಾ ಗ್ರಾಮಗಳಲ್ಲಿ ಕೋವಿಡ್ ಲಕ್ಷಣಗಳಿರುವವರನ್ನು ಟೆಸ್ಟ್ ಮಾಡಿಸಿ ಈ ಗ್ರಾಮಗಳನ್ನು ಕೋವಿಡ್ ಮುಕ್ತ ಎಂಬ ಬೋರ್ಡ್ ಹಾಕುವ ಮಟ್ಟಕ್ಕೆ ಕೆಲಸ ಮಾಡಬೇಕಾಗಿದೆ. ಅದೇ ರೀತಿ ಕೋವಿಡ್‌ಗೆ ಲಸಿಕೆಯನ್ನು ಹಾಕಲಾಗುತ್ತಿದ್ದು ಗ್ರಾಮಗಳಲ್ಲಿ ಎಲ್ಲರಿಗೂ ಲಸಿಕೆಯನ್ನು ಹಾಕಿಸುವ ಮೂಲಕ ಲಸಿಕೆ ಮುಕ್ತಗ್ರಾಮ ಎಂದು ಫಲಕವನ್ನು ಹಾಕುವ ನಿಟ್ಟಿನಲ್ಲಿ ಕೆಲಸ ಮಾಡುವ ಮೂಲಕ ಬೇರೆಯವರಿಗೆ ಮಾದರಿಯಾಗುವ ನಿಟ್ಟಿನಲ್ಲಿ ಇಲ್ಲಿನ ಅಕಾರಿಗಳು ಕೆಲಸ ಮಾಡುವಂತಾಗಬೇಕೆಂದರು.
ಸಭೆಯಲ್ಲಿ ಜಿಪಂ ಸಿಇಒ ಡಾ| ಕೆ. ನಂದಿನಿದೇವಿ, ಜಿಲ್ಲಾ ರಕ್ಷಣಾ ಧಿಕಾರಿ ಜಿ. ರಾಧಿ ಕಾ, ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣ ಇದ್ದರು.