ಚಳ್ಳಕೆರೆ: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕಳೆದ ಒಂದು ವರ್ಷದಿಂದ ನಿರಂತರವಾಗಿ ಕೊರೊನಾ ನಿಯಂತ್ರಣಕ್ಕೆ ಸಾಧ್ಯವಿರುವ ಎಲ್ಲಾ ಪ್ರಯತ್ನಗಳನ್ನು ಪ್ರಾಮಾಣಿಕವಾಗಿ ಕೈಗೊಂಡಿವೆ. ಇತ್ತೀಚಿನ ದಿನಗಳಲ್ಲಿ ಗ್ರಾಮಾಂತರ ಪ್ರದೇಶಗಳಲ್ಲಿ ಕೊರೊನಾ ಸ್ಫೋಟಗೊಳ್ಳುತ್ತಿರುವುದು ಆರೋಗ್ಯ ಇಲಾಖೆಗೆ ಸವಾಲಾಗಿದೆ.
ಗ್ರಾಮೀಣ ಪ್ರದೇಶದಲ್ಲಿ ಕೊರೊನಾವನ್ನು ಹತೋಟಿಗೆ ತರಲು ಮೈಕ್ರೋ ಕೋವಿಡ್ ಕೇರ್ ಕೇಂದ್ರವನ್ನು ಶೀಘ್ರದಲ್ಲೇ ಪ್ರಾರಂಭಿಸುವ ಯೋಜನೆ ಇದೆ ಎಂದು ಸಂಸದ ಎ. ನಾರಾಯಣಸ್ವಾಮಿ ಹೇಳಿದರು.
ತಾಲೂಕಿನ ಬೇಡರೆಡ್ಡಿಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಕೊರೊನಾ ನಿಯಂತ್ರಣ ಸಭೆಯಲ್ಲಿ ಅವರು ಮಾತನಾಡಿದರು. ಗ್ರಾಮೀಣ ಪ್ರದೇಶಗಳಲ್ಲಿ ಕೊರೊನಾ ಬಂದ ಕೂಡಲೇ ಸಾವು ಖಚಿತವೆಂಬ ಆತಂಕಕ್ಕೆ ಯಾರೂ ಒಳಗಾಗಬಾರದು. ಆರೋಗ್ಯ ಇಲಾಖೆ ಅಧಿ ಕಾರಿಗಳು ಪ್ರತಿ ಗ್ರಾಮದಲ್ಲೂ ಈಗಾಗಲೇ ಸಮೀಕ್ಷೆ ನಡೆಸಿ ನಿಯಂತ್ರಣ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ. ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯ ಗ್ರಾಮಗಳಲ್ಲಿ 25ಕ್ಕೂ ಹೆಚ್ಚು ಪ್ರಕರಣ ಕಂಡುಬಂದಿದ್ದು ಇದನ್ನು ಹಾಟ್‌ಸ್ಪಾಟ್ ಎಂದು ಪರಿಗಣಿಸಲಾಗಿದೆ. ಮೈಕ್ರೋ ಕೋವಿಡ್ ಕೇರ್ ಸೆಂಟರ್ ಸಹಕಾರದಿಂದ ಗ್ರಾಮೀಣ ಪ್ರದೇಶಗಳಲ್ಲಿ ಆರೋಗ್ಯ ತಪಾಸಣೆ ನಡೆಸಲಾಗುತ್ತದೆ. ಸೋಂಕಿತರು ಹೆಚ್ಚಾದಲ್ಲಿ ಗ್ರಾಮದ ಶಾಲೆಯಲ್ಲೇ ಕೋವಿಡ್ ಕೇಂದ್ರ ಪ್ರಾರಂಭಿಸಿ ಅಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುವುದು ಎಂದರು.
ಜಿಲ್ಲಾ ಧಿಕಾರಿ ಕವಿತಾ ಎಸ್. ಮನ್ನಿಕೇರಿ ಮಾತನಾಡಿ, ಯಾವುದೇ ರೋಗ ಸುಲಭವಾಗಿ ನಮ್ಮನ್ನು ವ್ಯಾಪಿಸಿದೆ ಎಂದರೆ ನಿರ್ಲಕ್ಷé ಮತ್ತು ಆರೋಗ್ಯದ ಬಗ್ಗೆ ಚಿಂತನೆ ನಡೆಸದೇ ಇರುವುದೇ ಕಾರಣ. ನಿಮ್ಮಲ್ಲಿ ಕೊರೊನಾ ಸೋಂಕಿತರು ಕಂಡುಬಂದಲ್ಲಿ ನೇರವಾಗಿ ಆರೋಗ್ಯ ಇಲಾಖೆಗೆ ಮಾಹಿತಿ ನೀಡಿದರೆ ತ್ವರಿತಗತಿಯಲ್ಲಿ ಕ್ರಮ ಕೈಗೊಳ್ಳುತ್ತಾರೆ.
ಗ್ರಾಮಸ್ಥರು, ಚುನಾಯಿತ ಪ್ರತಿನಿ ಧಿಗಳು, ಸಂಘ ಸಂಸ್ಥೆಗಳ ಪದಾಧಿ ಕಾರಿಗಳು ಕೊರೊನಾ ವೈರಾಣು ನಿಯಂತ್ರಣಕ್ಕೆ ಸಹಕಾರ ನೀಡಬೇಕೆಂದು ಮನವಿ ಮಾಡಿದರು. ಜಿಲ್ಲಾ ರಕ್ಷಣಾಧಿ ಕಾರಿ ಜಿ. ರಾ ಧಿಕಾ, ಜಿಪಂ ಸಿಇಒ ಡಾ| ನಂದಿನಿದೇವಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿ ಕಾರಿ ಡಾ| ಸಿ.ಎಲ್. ಪಾಲಾಕ್ಷ, ಜಿಲ್ಲಾ ಸರ್ವೇಕ್ಷಣಾಧಿ ಕಾರಿ ಡಾ| ರಂಗನಾಥ, ತಹಶೀಲ್ದಾರ್ ಎಂ. ಮಲ್ಲಿಕಾರ್ಜುನ್, ತಾಪಂ ಇಒ ಪ್ರಕಾಶ್, ಡಿವೈಎಸ್ಪಿ ಕೆ.ವಿ. ಶ್ರೀಧರ್, ಡಾ| ಅನಿತಾಲಕ್ಷ್ಮೀ ಮತ್ತಿತರರು ಇದ್ದರು.