Advertisement
ನಗರದ ತಮಟಕಲ್ಲು ರಸ್ತೆಯಲ್ಲಿರುವ ಬಿ.ಸಿ.ಎಂ ಹಾಸ್ಟೆಲ್‌ನಲ್ಲಿ ಮಂಗಳವಾರ ಜಿಲ್ಲಾಡಳಿತ ಹಾಗೂ ಪ್ರಕಾಶ್ ಸ್ಪಾಂಜ್ ಪ್ರಾಯೋಜಕತ್ವದಲ್ಲಿ 250 ಬೆಡ್ ಸಾಮರ್ಥ್ಯದ ಕೋವಿಡ್ ಕೇರ್ ಸೆಂಟರ್ ಹಾಗೂ 20 ಆಕ್ಸಿಜನ್‌ನೆಟೆಡ್ ಬೆಡ್ ಸೌಲಭ್ಯದ ಕೋವಿಡ್ ಕೇರ್ ಸೆಂಟರ್ ಉದ್ಘಾಟಿಸಿ ಅವರು ಮಾತನಾಡಿದರು. ಕೋವಿಡ್-19 ಸಾಂಕ್ರಾಮಿಕ ರೋಗಕ್ಕೆ ಸಂಬಂ ಧಿಸಿದಂತೆ ಜಿಲ್ಲೆಯಲ್ಲಿ 5,600 ಸಕ್ರಿಯ ಜಿಲ್ಲೆಯಲ್ಲಿ ಪಾಸಿಟಿವ್ ರೇಟ್ ಕಡಿಮೆ ಇದೆ.
Related Articles
Advertisement
ಪ್ರಸ್ತುತ ಇಲ್ಲಿ 68 ಜನರು ದಾಖಲಾಗಿದ್ದು, ದಾಖಲಾದವರಲ್ಲಿ 37 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. ಇವರಿಗೆ ಊಟ, ವಸತಿ, ಬಿಸಿ ನೀರು ಹಾಗೂ ಎಲ್ಲಾ ಔಷಧವನ್ನು ಸರ್ಕಾರವೇ ಒದಗಿಸುತ್ತಿದ್ದು, ಚಿಕಿತ್ಸೆಗಾಗಿ ಒಬ್ಬರು ವೈದ್ಯರು, ನರ್ಸ್ ಮತ್ತು ಸಿಬ್ಬಂದಿಗಳಿದ್ದಾರೆ.
ಕೋವಿಡ್ ಲಕ್ಷಣಗಳು ಕಂಡುಬಂದಲ್ಲಿ ತಕ್ಷಣವೇ ಪರೀಕ್ಷೆಗೆ ಒಳಪಡಿಸಿ ಚಿಕಿತ್ಸೆ ಪಡೆಯಬೇಕು. ಯಾರಿಗೆ ಮನೆಯಲ್ಲಿ ಪ್ರತ್ಯೇಕ ವ್ಯವಸ್ಥೆ ಇಲ್ಲವೊ ಅವರಿಗಾಗಿ ಕೇರ್ ಸೆಂಟರ್ ಗಳನ್ನು ತೆರೆಯಲಾಗಿದೆ. ಜನರು ಇವುಗಳ ಉಪಯೋಗ ಪಡೆದು ತಮ್ಮ ಕುಟುಂಬವನ್ನು ಸುರಕ್ಷಿತವಾಗಿಟ್ಟುಕೊಳ್ಳಬೇಕು ಎಂದು ಸಚಿವ ಶ್ರೀರಾಮುಲು ಕೋರಿದರು.
ಶಾಸಕ ಜಿ.ಎಚ್. ತಿಪ್ಪಾರೆಡ್ಡಿ, ಜಿಲ್ಲಾ ಧಿಕಾರಿ ಕವಿತಾ ಎಸ್. ಮನ್ನಿಕೇರಿ, ಜಿಪಂ ಸಿಇಒ ಡಾ| ಕೆ.ನಂದಿನಿದೇವಿ, ಜಿಲ್ಲಾ ಪೊಲೀಸ್ ವರಿಷ್ಠಾಧಿ ಕಾರಿ ಜಿ. ರಾ ಧಿಕಾ, ಡಿಎಚ್‌ಒ ಡಾ| ಪಾಲಾಕ್ಷ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ| ಎಚ್.ಜೆ. ಬಸವರಾಜಪ್ಪ, ತಹಶೀಲ್ದಾರ್ ಜೆ.ಸಿ.ವೆಂಕಟೇಶಯ್ಯ, ತಾಲೂಕು ಆರೋಗ್ಯಾಧಿ ಕಾರಿ ಡಾ| ಬಿ.ವಿ. ಗಿರೀಶ್ ಮತ್ತಿತರರು ಉಪಸ್ಥಿತರಿದ್ದರು.