Advertisement

“ವೈದ್ಯರ ನಡೆ ಹಳ್ಳಿ ಕಡೆ’ಕಾರ್ಯಕ್ರಮಕ್ಕೆ ಚಾಲನೆ

10:13 PM May 27, 2021 | Team Udayavani |

ಚಿತ್ರದುರ್ಗ: ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿ ಕೋವಿಡ್‌ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ರೋಗ ನಿಯಂತ್ರಣ ಹಾಗೂ ಜಾಗೃತಿಗಾಗಿ ರೂಪಿಸಿರುವ “ವೈದ್ಯರ ನಡೆ ಹಳ್ಳಿ ಕಡೆ’ ಎಂಬ ಕಾರ್ಯಕ್ರಮಕ್ಕೆ ಜಿಲ್ಲಾ ಧಿಕಾರಿ ಕವಿತಾ ಎಸ್‌. ಮನ್ನಿಕೇರಿ ಬುಧವಾರ ಚಾಲನೆ ನೀಡಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಕಾರ್ಯಕ್ರಮಕ್ಕೆ ಹಸಿರು ನಿಶಾನೆ ತೋರಿಸಲಾಯಿತು.

Advertisement

ನಗರದ ಹೊರವಲಯದ ಪಿಳ್ಳೆಕೇರನಹಳ್ಳಿಗೆ ಭೇಟಿ ನೀಡಿದ ವೇಳೆ ಜಿಲ್ಲಾ ಧಿಕಾರಿ ಕವಿತಾ ಎಸ್‌. ಮನ್ನಿಕೇರಿ ಮಾತನಾಡಿ, ಜಿಲ್ಲೆಯ ವಿವಿಧೆಡೆ ಹಾಸ್ಟೆಲ್‌ಗ‌ಳಲ್ಲಿ ಕೋವಿಡ್‌ ಕೇರ್‌ ಸೆಂಟರ್‌ ಗಳನ್ನು ಪ್ರಾರಂಭಿಸಲಾಗಿದೆ. ಕೋವಿಡ್‌ ಕೇರ್‌ ಸೆಂಟರ್‌ಗಳಲ್ಲಿ ಹಾಸಿಗೆ, ಉಚಿತ ಊಟದ ವ್ಯವಸ್ಥೆ, ಬಿಸಿ ನೀರು, ಪ್ರತ್ಯೇಕ ಶೌಚಾಲಯ ಸೌಲಭ್ಯ, ವಿಶೇಷ ಕಾಳಜಿಯಿಂದ ಹಾಗೂ ಮಕ್ಕಳ ರೀತಿಯಲ್ಲಿ ಆರೈಕೆ ಮಾಡಲು ವೈದ್ಯರು ಹಾಗೂ ಶುಶ್ರೂಷಕರು ಸೇರಿದಂತೆ ಎಲ್ಲ ರೀತಿಯ ಸೌಲಭ್ಯಗಳನ್ನು ಕಲ್ಪಿಸಲಾಗಿದೆ.

ಹಾಗಾಗಿ ಕೋವಿಡ್‌ ಸೋಂಕು ದೃಢಪಟ್ಟ ಸಂದರ್ಭದಲ್ಲಿ ಹೋಂ ಐಸೋಲೇಷನ್‌ ಬದಲಾಗಿ ಕೋವಿಡ್‌ ಕೇರ್‌ ಸೆಂಟರ್‌ಗೆ ದಾಖಲಾಗಿ ಕೆಲವು ದಿನಗಳ ಕಾಲ ಚಿಕಿತ್ಸೆ ಪಡೆದು ಗುಣಮುಖರಾಗಿ ಎಂದು ತಿಳಿಸಿದರು. ಜಿಪಂ ಸಿಇಒ ಡಾ| ಕೆ. ನಂದಿನಿದೇವಿ ಮಾತನಾಡಿ, ಗ್ರಾಮೀಣ ಪ್ರದೇಶಗಳಲ್ಲಿ ಕೋವಿಡ್‌ ಸೋಂಕು ಪ್ರಕರಣಗಳು ಹೆಚ್ಚು ವರದಿಯಾಗುತ್ತಿವೆ.

ಕೋವಿಡ್‌ ಸೋಂಕು ತಡೆಗಟ್ಟುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕೋವಿಡ್‌ ಲಕ್ಷಣಗಳಿರುವವರು ತಕ್ಷಣ ಕೋವಿಡ್‌-19 ಪರೀಕ್ಷೆಯನ್ನು ಮಾಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

“ವೈದ್ಯರ ನಡೆ ಹಳ್ಳಿ ಕಡೆ’ ಕಾರ್ಯಕ್ರಮದ ಅಂಗವಾಗಿ ಚಿತ್ರದುರ್ಗ ತಾಲೂಕಿನ ಕಾಸವರಹಟ್ಟಿ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯ ಮದಕರಿಪುರ, ಜಿ.ಆರ್‌. ಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಪಿಳ್ಳೇಕೆರೆನಹಳ್ಳಿ, ಗೊಡಬನಹಾಳ್‌ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಗೊಡಬನಾಳ್‌ ಹಾಗೂ ಕ್ಯಾಸಾಪುರ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಸೀಬಾರ ಗ್ರಾಮ ಸೇರಿದಂತೆ ಚಿತ್ರದುರ್ಗ ನಾಲ್ಕು ಹಳ್ಳಿಗಳಿಗೆ ಭೇಟಿ ನೀಡಿ ಜನರ ಆರೋಗ್ಯ ತಪಾಸಣೆ ನಡೆಸಲಾಯಿತು.

Advertisement

ಗ್ರಾಮೀಣ ಪ್ರದೇಶದಲ್ಲಿ ವ್ಯಾಪಕ ಪ್ರಮಾಣದಲ್ಲಿ ಕೋವಿಡ್‌ ಪರೀಕ್ಷೆ ಮಾಡಿ ಸೋಂಕು ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವುದು, ಕೋವಿಡ್‌ ಸೋಂಕಿನ ಪ್ರಸರಣದ ಸರಪಳಿ ತುಂಡರಿಸುವುದು, ಜನರನ್ನು ಪರೀಕ್ಷೆಗೆ ಒಳಪಡಿಸಿ ಸೂಕ್ತ ಚಿಕಿತ್ಸೆಗೆ ವ್ಯವಸ್ಥೆ ಮಾಡುವುದು “ವೈದ್ಯರ ನಡೆ ಹಳ್ಳಿ ಕಡೆ’ ಕಾರ್ಯಕ್ರಮದ ಉದ್ದೇಶವಾಗಿದೆ.

ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್‌ ವರಿಷ್ಠಾ  ಧಿಕಾರಿ ಜಿ. ರಾಧಿ ಕಾ, ಡಿಎಚ್‌ಒ ಡಾ| ಸಿ.ಎಲ್‌. ಪಾಲಾಕ್ಷ, ತಹಶೀಲ್ದಾರ್‌ ಜೆ.ಸಿ. ವೆಂಕಟೇಶಯ್ಯ, ಸರ್ವೇಕ್ಷಣಾ ಧಿಕಾರಿ ಡಾ| ರಂಗನಾಥ್‌ ತಾಲೂಕು ಆರೋಗ್ಯಾಧಿ ಕಾರಿ ಡಾ| ಬಿ.ವಿ. ಗಿರೀಶ್‌ ಮತ್ತಿತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next