ಚಿತ್ರದುರ್ಗ: ಕೆಪಿಸಿಸಿ ಇಂಟೆಕ್ ವಿಭಾಗದ ರಾಜ್ಯಾಧ್ಯಕ್ಷರನ್ನಾಗಿ ನನ್ನನ್ನು ರಾಷ್ಟ್ರೀಯ ವಿಭಾಗದ ಅಧ್ಯಕ್ಷರು ನೇಮಕ ಮಾಡಿ ಆದೇಶ ನೀಡಿದ್ದಾರೆ ಎಂದು ನೂತನ ಅಧ್ಯಕ್ಷ ಎ. ಜಾಕೀರ್ ಹುಸೇನ್ ತಿಳಿಸಿದರು.
ನಗರದ ಪ್ರವಾಸಿಮಂದಿರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ 20 ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ದಕ್ಷತೆ ಮತ್ತು ಪ್ರಾಮಾಣಿಕತೆಯಿಂದ ಕೆಲಸ ಮಾಡಿದ್ದೇನೆ. ನನ್ನ ಪಕ್ಷನಿಷ್ಠೆಯನ್ನು ಗಮನಿಸಿ ಇಂಟೆಕ್ ರಾಷ್ಟ್ರೀಯ ಅಧ್ಯಕ್ಷರು ರಾಜ್ಯ ವಿಭಾಗದ ಇಂಟೆಕ್ ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ ಎಂದರು.
ನಾನು ಜಿಲ್ಲೆಯಲ್ಲಿ ಕಾರ್ಮಿಕ ಸಂಘಟನೆಯ ಮೂಲಕ ಗುರುತಿಸಿಕೊಂಡು ಹಲವಾರು ಜನಪರ ಹೋರಾಟಗಳಲ್ಲಿ ತೊಡಗಿಸಿ ಕೊಂಡಿದ್ದೇನೆ. ಅಲ್ಲದೆ ಕಾಂಗ್ರೆಸ್ ಪಕ್ಷದಲ್ಲೂ ಸಕ್ರಿಯವಾಗಿದ್ದೇನೆ. ಈಗ ನನಗೆ ಹೊಸ ಜವಾಬ್ದಾರಿ ಸಿಕ್ಕಿದ್ದು, ಅದನ್ನು ಸಮರ್ಥವಾಗಿ ನಿಭಾಯಿಸುತ್ತೇನೆ ಎಂದು ಹೇಳಿದರು.
ಕೊರೊನಾ ಸೊಂಕಿನಿಂದ ಇಡೀ ದೇಶವೇ ಆತಂಕಕ್ಕೀಡಾಗಿದೆ. ಇಂತಹ ಸಂದರ್ಭದಲ್ಲಿ ನಾವು ಸಂಭ್ರಮದಿಂದ ಸಮಾವೇಶ ಮಾಡುವ ಸ್ಥಿತಿಯಲ್ಲಿ ಇಲ್ಲ. ನಮ್ಮ ಪಕ್ಷದ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್, ನಾಯಕರಾದ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ, ಡಾ| ಜಿ. ಪರಮೇಶ್ವರ ಅವರ ಆಶೀರ್ವಾದ ಪಡೆದು ಅವರ ಸಮ್ಮುಖದಲ್ಲಿಯೇ ಅ ಧಿಕಾರ ಸ್ವೀಕರಿಸಲಾಗುವುದು ಎಂದರು.
ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರಾದ ಎಚ್. ಅನ್ವರ್ ಸಾಬ್, ಯೂಸೂಫ್ ಇತರರು ಇದ್ದರು.