Advertisement
ಚಿತ್ರದುರ್ಗ: ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಕೊರೊನಾ ಸೋಂಕಿನ ಪ್ರಮಾಣ ವಿಪರೀತವಾಗಿದ್ದು, ನಿಯಂತ್ರಣಕ್ಕೆ ಜಿಲ್ಲಾಡಳಿತ ಹರಸಾಹಸ ಮಾಡುತ್ತಿದೆ. ಈ ನಿಟ್ಟಿನಲ್ಲಿ ಖುದ್ದು ಜಿಲ್ಲಾ ಧಿಕಾರಿಗಳ ನೇತೃತ್ವದಲ್ಲಿ ಅಧಿ ಕಾರಿಗಳ ತಂಡ ಹಳ್ಳಿಗಳಲ್ಲಿ ಸೋಂಕಿತರ ಮನೆಬಾಗಿಲಿಗೆ ಹೋಗಿ ಕೋವಿಡ್ ಕೇರ್ ಸೆಂಟರ್ ಗಳಿಗೆ ಬನ್ನಿ ಎಂದು ಮನವಿ ಮಾಡುತ್ತಿದೆ.
Related Articles
Advertisement
ನಗರದ ಪ್ರದೇಶಗಳಲ್ಲಿ ಮಾತ್ರವೇ ಹೆಚ್ಚಿದ್ದ ಕೋವಿಡ್ ಸೋಂಕು ಇದೀಗ ಹಳ್ಳಿ ಹಳ್ಳಿಗೂ ವ್ಯಾಪಿಸಿದೆ. ಮನೆ ಮಂದಿಯೆಲ್ಲ ಸೋಂಕಿಗೆ ತುತ್ತಾಗಿರುವ ಉದಾಹರಣೆಗಳಿವೆ. ಕೋವಿಡ್ ಸೋಂಕಿತರಲ್ಲಿ ಕೆಲವರು ಹೋಂ ಐಸೋಲೇಷನ್, ಜಿಲ್ಲಾ ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್ ಕೇರ್ ಸೆಂಟರ್‌ಗಳಲ್ಲಿ ಮತ್ತು ಚಿತ್ರದುರ್ಗ ನಗರದ ವಿವಿಧ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್‌ಗೆ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸೋಂಕಿತರ ಮನೆಬಾಗಿಲಿಗೆ ಹೊರಟ ಜಿಲ್ಲಾಡಳಿತ: ಗ್ರಾಮೀಣ ಪ್ರದೇಶದಲ್ಲಿ ಶರವೇಗದಲ್ಲಿ ಹರಡುತ್ತಿರುವ ಕೋವಿಡ್ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲಾಡಳಿತ ಹಳ್ಳಿಗಳತ್ತ ಮುಖ ಮಾಡಿದೆ. ಕೋವಿಡ್-19 ಸಾಂಕ್ರಾಮಿಕ ರೋಗ ನಿಯಂತ್ರಣ ಹಾಗೂ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸರ್ಕಾರದ ಸೂಚನೆಯಂತೆ ಜಿಲ್ಲಾಡಳಿತದ ನೇತೃತ್ವದಲ್ಲಿ “ವೈದ್ಯರ ನಡೆ ಹಳ್ಳಿಯ ಕಡೆ’ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ. ಪ್ರತಿ ದಿನ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಮನೆ ಮನೆಗೆ ತೆರಳಿ ಕೋವಿಡ್ ಪರೀಕ್ಷೆ ಮಾಡುವುದು, ಕೋವಿಡ್ ಸೋಂಕಿನ ಸರಪಳಿ ತುಂಡರಿಸುವುದು ಸೇರಿದಂತೆ ಕೋವಿಡ್-19 ಕುರಿತು ಗ್ರಾಮೀಣ ಜನರಿಗೆ ಜಾಗೃತಿ ಮೂಡಿಸಲಾಗುತ್ತಿದೆ. ಜಿಲ್ಲೆಯಲ್ಲಿ ಈಗಾಗಲೇ ದಿನ ಬಿಟ್ಟು ದಿನ ಲಾಕ್‌ಡೌನ್ ಜಾರಿಗೊಳಿಸಲಾಗಿದೆ.
ಕೋವಿಡ್ ಸೋಂಕಿತರಿಗಾಗಿ ಜಿಲ್ಲೆಯಾದ್ಯಂತ ವಿವಿಧೆಡೆ ಹಾಸ್ಟೆಲ್‌ಗಳಲ್ಲಿ ಕೋವಿಡ್ ಆರೈಕೆ ಕೇಂದ್ರಗಳನ್ನು ತೆರೆಯಲಾಗಿದ್ದು, ಕೋವಿಡ್ ಸೋಂಕಿತರ ಚಿಕಿತ್ಸೆಗಾಗಿ ಎಲ್ಲ ರೀತಿಯ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಕೋವಿಡ್ ಸೋಂಕು ದೃಢಪಟ್ಟ ಸಂದರ್ಭದಲ್ಲಿ ಹೋಂ ಐಸೋಲೇಷನ್ ಬದಲಾಗಿ ಕಡ್ಡಾಯವಾಗಿ ಕೋವಿಡ್ ಕೇರ್ ಸೆಂಟರ್‌ಗೆ ಸೋಂಕಿತರನ್ನು ಶಿಫ್ಟ್ ಮಾಡಲಾಗುತ್ತಿದೆ.
ಒಟ್ಟಿನಲ್ಲಿ ಹಳ್ಳಿಗಳಲ್ಲಿ ಹೋಂ ಐಸೋಲೇಷನ್‌ನಲ್ಲಿರುವ ಸೋಂಕಿತರನ್ನು ಕೋವಿಡ್ ಕೇರ್ ಸೆಂಟರ್‌ಗಳಿಗೆ ದಾಖಲಿಸಲು ಜಿಲ್ಲಾಡಳಿತ ಪ್ರಯತ್ನ ಆರಂಭಿಸಿದೆ. “ಹಳ್ಳಿ ಕಡೆ ವೈದ್ಯರ ನಡೆ’ ಎಷ್ಟರ ಮಟ್ಟಿಗೆ ಯಶಸ್ವಿಯಾಗುತ್ತದೆ ಎಂಬುದನ್ನು ಕಾದು ನೋಡಬೇಕಿದೆ.