ಚಳ್ಳಕೆರೆ: ಕಳೆದ ಎರಡು ವರ್ಷಗಳಿಂದ ನಿರಂತರವಾಗಿ ಕೊರೊನಾ ವೈರಾಣು ಭಯದಿಂದ ಜನರು ತಲ್ಲಣಗೊಂಡಿದ್ದಾರೆ. ಗ್ರಾಮೀಣ ಭಾಗದ ಜನರಲ್ಲಿ ಆತ್ಮಸ್ಥೈರ್ಯ ಮೂಡಿಸಲು ಸರ್ಕಾರ “ವೈದ್ಯರ ನಡೆ ಹಳ್ಳಿ ಕಡೆ’ ಕಾರ್ಯಕ್ರಮ ರೂಪಿಸಿದೆ. ವೈದ್ಯರು ನಿಮ್ಮೂರಿಗೆ ಬಂದು ಕೊರೊನಾ ಜಾಗೃತಿ ಮೂಡಿಸುತ್ತಿರುವುದು ಸ್ತುತ್ಯರ್ಹ ಎಂದು ಶಾಸಕ ಟಿ. ರಘುಮೂರ್ತಿ ಹೇಳಿದರು.
ಗುರುವಾರ ತಾಲೂಕಿನ ರಾಮಜೋಗಿಹಳ್ಳಿ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದ ವೈದ್ಯರ ನಡೆ ಹಳ್ಳಿ ಕಡೆ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ವೈದ್ಯರು ಮತ್ತು ಅ ಕಾರಿಗಳ ಪರಿಶ್ರಮದಿಂದ ಕೆಲವು ದಿನಗಳಿಂದ ಕೊರೊನಾ ನಿಯಂತ್ರಣದಲ್ಲಿದೆ.
ಜನರು ಮನೆಯಲ್ಲಿದ್ದರೆ ಮಾತ್ರ ಕೊರೊನಾ ನಿಯಂತ್ರಣ ಸಾಧ್ಯ ಎಂದರು. ಜಿಲ್ಲಾಧಿ ಕಾರಿ ಕವಿತಾ ಎಸ್. ಮನ್ನಿಕೇರಿ ಮಾತನಾಡಿ, ಜಿಲ್ಲೆಯಾದ್ಯಂತ “ವೈದ್ಯರ ನಡೆ ಹಳ್ಳಿ ಕಡೆ’ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಎಲ್ಲಾ ವಿಭಾಗದ ತಜ್ಞ ವೈದ್ಯರು, ಅ ಧಿಕಾರಿಗಳೊಂದಿಗೆ ಗ್ರಾಮೀಣ ಪ್ರದೇಶಕ್ಕೆ ಭೇಟಿ ನೀಡಿ ಅಲ್ಲಿನ ಜನರಿಗೆ ಕೊರೊನಾ ಅರಿವು ಮೂಡಿಸಲಾಗುತ್ತಿದೆ. ಕೊರೊನಾ ಸೋಂಕಿತರು ಭಯಪಡುವ ಅಗತ್ಯವಿಲ್ಲ. ಆರೋಗ್ಯ ಇಲಾಖೆ ಸಕಾಲದಲ್ಲಿ ಚಿಕಿತ್ಸೆ ನೀಡಿ ಗುಣಮುಖರನ್ನಾಗಿ ಮಾಡುವಲ್ಲಿ ಯಶಸ್ವಿಯಾಗುತ್ತಿದೆ ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಸಿ.ಎಲ್. ಪಾಲಾಕ್ಷ ಮಾತನಾಡಿ, ಚಳ್ಳಕೆರೆ ತಾಲೂಕು ಸೇರಿದಂತೆ ಜಿಲ್ಲೆಯ ವಿವಿಧೆಡೆ ಸಂಭವಿಸಿರುವ ಮರಣ ಪ್ರಕರಣಗಳು ಜನರಲ್ಲಿ ಗಾಬರಿ ಹುಟ್ಟಿಸಿವೆ. ಆದರೆ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ ಅತಿ ಕಡಿಮೆ. ದಿನದ 24 ಗಂಟೆಗಳ ಕಾಲ ಆರೋಗ್ಯ ಇಲಾಖೆಯ ವೈದ್ಯರು, ಸಿಬ್ಬಂದಿ ವರ್ಗ ತೊಡಗಿಸಿಕೊಂಡಿದ್ದಾರೆ ಎಂದು ತಿಳಿಸಿದರು.
ಜಿಲ್ಲಾ ರಕ್ಷಣಾಧಿ ಕಾರಿ ಜಿ. ರಾಧಿ ಕಾ ಮಾತನಾಡಿ, ನಿರ್ಲಕ್ಷéವೇ ಕೊರೊನಾ ಹರಡಲು ಪ್ರಮುಖ ಕಾರಣ. ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಅ ಧಿಕಾರಿಗಳು ಜಾಥಾ ನಡೆಸಿ ಮನೆಯಿಂದ ಹೊರ ಬಾರದಂತೆ ಮನವಿ ಮಾಡಿದರೂ ಜನರು ಮಾತ್ರ ರಸ್ತೆಯನ್ನು ಬಿಟ್ಟು ಕದಲುತ್ತಿಲ್ಲ. ಕೊರೊನಾ ದೂರವಾಗಲು ನಾವೆಲ್ಲರೂ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಬೇಕೆಂದರು.
ಜಿಪಂ ಸಿಇಒ ಡಾ| ನಂದಿನಿದೇವಿ, ತಹಶೀಲ್ದಾರ್ ಎಂ. ಮಲ್ಲಿಕಾರ್ಜುನ್, ತಾಪಂ ಇಒ ಪ್ರಕಾಶ್, ಜಿಲ್ಲಾ ಸರ್ವೇಕ್ಷಣಾ ಧಿಕಾರಿ ಡಾ| ರಂಗನಾಥ್, ತಾಲೂಕು ಆರೋಗ್ಯಾಧಿ ಕಾರಿ ಡಾ| ಎನ್. ಪ್ರೇಮಸುಧಾ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿ ಕಾರಿ ಎಸ್.ಬಿ. ತಿಪ್ಪೇಸ್ವಾಮಿ ಮತ್ತಿತರರು ಇದ್ದರು.