ಹಿರಿಯೂರು: ಗ್ರಾಮೀಣ ಜನರು ನಿರ್ಲಕ್ಷéದಿಂದ ಪ್ರಾಣ ಹಾನಿ ಮಾಡಿಕೊಳ್ಳಬಾರದು. ಆರೋಗ್ಯ ರಕ್ಷಣೆಗೆ ಗಮನ ನೀಡಬೇಕು ಎಂದು ಜಿಲ್ಲಾಧಿ ಕಾರಿ ಕವಿತಾ ಎಸ್. ಮನ್ನಿಕೇರಿ ಹೇಳಿದರು. ತಾಲೂಕಿನ ಆಲೂರು ಗ್ರಾಮದಲ್ಲಿ ಮಂಗಳವಾರ ನಡೆದ ಕೊರೊನಾ ಜಾಗೃತಿ ಹಾಗೂ “ವೈದ್ಯರ ನಡೆ ಹಳ್ಳಿ ಕಡೆ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಆಲೂರು ಗ್ರಾಮದ 40ಕ್ಕೂ ಹೆಚ್ಚು ಕೊರೊನಾ ಸೋಂಕಿತರು ದೇವರಕೊಟ್ಟ ಕೋವಿಡ್ ಸೆಂಟರ್‌ಗೆ ದಾಖಲಾಗಿದ್ದಾರೆ. ಇಬ್ಬರು ಮೃತಪಟ್ಟಿದ್ದಾರೆ. ಪ್ರತಿಯೊಬ್ಬರೂ ಕೊರೊನಾ ಬಗ್ಗೆ ಎಚ್ಚರಿಕೆ ವಹಿಸಬೇಕು. ಕೆಮ್ಮು, ನೆಗಡಿ, ಜ್ವರ ಬಂದರೆ ತಕ್ಷಣ ವೈದ್ಯರನ್ನು ಸಂಪರ್ಕಿಸಿ ಕಡ್ಡಾಯವಾಗಿ ಲಸಿಕೆ ತೆಗೆದುಕೊಳ್ಳಬೇಕು ಎಂದರು.
ಕೋವಿಡ್ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಗ್ರಾಮ ಪಂಚಾಯಿತಿ ಕಾರ್ಯಪಡೆ ಯಶಸ್ವಿಯಾಗಿ ಕಾರ್ಯ ನಿರ್ವಹಿಸಬೇಕು. ಕೋವಿಡ್ ಸೋಂಕಿತರನ್ನು ಕಡ್ಡಾಯವಾಗಿ ಕೋವಿಡ್ ಕೇರ್ ಸೆಂಟರ್‌ಗೆ ಸ್ಥಳಾಂತರಿಸಬೇಕು. ಯಾವುದೇ ಕಾರಣಕ್ಕೂ ಹೋಂ ಐಸೋಲೇಷನ್ ಗೆ ಅವಕಾಶ ನೀಡಬಾರದು ಎಂದು ಸೂಚಿಸಿದರು.
ಸೋಂಕಿತರ ಮನೆಗಳನ್ನು ಸೀಲ್ ಡೌನ್ ಮಾಡಬೇಕೆಂದು ಗ್ರಾಮಸ್ಥರು ಜಿಲ್ಲಾಧಿ ಕಾರಿಗಳನ್ನು ಒತ್ತಾಯಿಸಿದರು. ಸೀಲ್ ಡೌನ್ ಮಾಡುವುದರಿಂದ ಜನರಿಗೆ ತೊಂದರೆಯಾಗುತ್ತದೆ. ಅದರ ಬದಲಾಗಿ ಸೋಂಕಿತರ ಮನೆ ಬಳಿ ರೆಡ್ ಟೇಪ್ ಹಾಕುವಂತೆ ಜಿಲ್ಲಾಧಿಕಾರಿಯವರು ಸೂಚನೆ ನೀಡಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಧಿ ಕಾ ಮಾತನಾಡಿ, ಕೊರೊನಾ ನಿರ್ಮೂಲನೆಗೆ ಎಲ್ಲರ ಸಹಕಾರ ಅಗತ್ಯ. ಸೋಂಕು ನಿಯಂತ್ರಣಕ್ಕೆ ಬರುವವರೆಗೆ ಗ್ರಾಮಸ್ಥರು ನಗರ ಸಂಚಾರಕ್ಕೆ ಕಡಿವಾಣ ಹಾಕಬೇಕು. ಸರ್ಕಾರದ ಲಾಕ್‌ಡೌನ್ ನಿಯಮವನ್ನು ಎಲ್ಲರೂ ಕಡ್ಡಾಯವಾಗಿ ಪಾಲಿಸಬೇಕು. ಇಲ್ಲದಿದ್ದರೆ ವಿನಾಕಾರಣ ತೊಂದರೆಗೆ ಸಿಲುಕಬೇಕಾಗುತ್ತದೆ ಎಂದು ಎಚ್ಚರಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷೆ ದ್ಯಾಮಲಾಂಬ ಶ್ರೀನಿವಾಸ್ ವಹಿಸಿದ್ದರು. ಜಿಲ್ಲಾ ಪಂಚಾಯಿತಿ ಸಿಇಒ ಡಾ| ಕೆ. ನಂದಿನಿದೇವಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ| ಪಾಲಾಕ್ಷ, ತಹಶೀಲ್ದಾರ್ ಜಿ.ಎಚ್. ಸತ್ಯನಾರಾಯಣ, ತಾಲೂಕು ಆರೋಗ್ಯಾಧಿ ಕಾರಿ ಡಾ| ವೆಂಕಟೇಶ್, ಡಾ| ಸಾದಿ ಕ್, ಡಾ| ರಂಗನಾಥ್, ಗ್ರಾಪಂ ಉಪಾಧ್ಯಕ್ಷೆ ಜಯಲಕ್ಷ್ಮೀ ದೇವರಾಜ್, ಲೆಕ್ಕಾಧಿ ಕಾರಿ ಸ್ವಾಮಿ, ಪಿಡಿಒ ಶಿವಣ್ಣ, ಗ್ರಾಪಂ ಸದಸ್ಯರಾದ ರಿಹಾನ ತಾಜ್, ಹೇಮಲತಾ, ಡಿ.ಜಿ. ಗೌಡ, ದೇವರಾಜ್, ಶ್ರೀನಿವಾಸ್, ಗ್ರಾಮದ ಮುಖಂಡರು ಉಪಸ್ಥಿತರಿದ್ದರು.