Advertisement

ಕೋವಿಡ್‌ ಲಸಿಕೆಯಿಂದ ಆರೋಗ್ಯ ರಕ್ಷಣೆ: ತಿಪ್ಪಾರೆಡ್ಡಿ

10:03 PM Jun 02, 2021 | Team Udayavani |

ಚಿತ್ರದುರ್ಗ: ಕೊರೊನಾ ಒಂದು ಮಾರಕ ರೋಗವಾಗಿದ್ದು, ಇದರಿಂದ ರಕ್ಷಣೆ ಪಡೆಯಲು ಕಡ್ಡಾಯವಾಗಿ ಲಸಿಕೆ ಹಾಕಿಸಿಕೊಳ್ಳಬೇಕು ಎಂದು ಶಾಸಕ ಜಿ.ಎಚ್‌. ತಿಪ್ಪಾರೆಡ್ಡಿ ಹೇಳಿದರು.

Advertisement

ನಗರದ ಕ್ಷೇತ್ರ ಶಿಕ್ಷಣಾಧಿ ಕಾರಿ ಕಚೇರಿ ಆವರಣದಲ್ಲಿ ಶಿಕ್ಷಕರು ಹಾಗೂ ಶಿಕ್ಷಣ ಇಲಾಖೆ ಸಿಬ್ಬಂದಿಗಳಿಗೆ ಲಸಿಕೆ ನೀಡುವ ಹಿನ್ನೆಲೆಯಲ್ಲಿ ಹಮ್ಮಿಕೊಂಡಿದ್ದ ಲಸಿಕಾ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ದೇಶದಲ್ಲಿ ಕೋವಿಡ್‌ ಲಸಿಕೆ ನೀಡಲು ಮುಂದಾದಾಗ ಅನೇಕರು ಲಸಿಕೆ ಕುರಿತು ಅಪಪ್ರಚಾರ ನಡೆಸಿದರು.

ಲಸಿಕೆ ಪಡೆದಲ್ಲಿ ಹೆಣ್ಣುಮಕ್ಕಳಿಗೆ ಸಂತಾನ ಭಾಗ್ಯ ಆಗುವುದಿಲ್ಲ. ಗಂಡಸರಿಗೆ ನಪುಂಸಕತ್ವ ಉಂಟಾಗುತ್ತದೆ ಎಂದು ವದಂತಿ ಹಬ್ಬಿಸಲಾಗಿತ್ತು. ಇದರಿಂದ ಆತಂಕಗೊಂಡ ಜನತೆ ಲಸಿಕೆ ಹಾಕಿಸಿಕೊಳ್ಳಲು ಹಿಂದೇಟು ಹಾಕಿದ್ದರು. ಆದರೆ ಈಗ ಜನರಲ್ಲಿ ಜಾಗೃತಿ ಉಂಟಾಗಿ ಲಸಿಕೆ ಹಾಕಿಸಿಕೊಳ್ಳಲು ಮುಂದೆ ಬರುತ್ತಿರುವುದು ಉತ್ತಮ ಬೆಳವಣಿಗೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಜಿಲ್ಲೆಯಲ್ಲಿ ಕೋವಿಡ್‌ ಮೊದಲ ಅಲೆ ಪ್ರವೇಶವಾದ ಸಂದರ್ಭದಲ್ಲಿ ಅನೇಕ ಶಿಕ್ಷಕರು ಕೋವಿಡ್‌ಗೆ ಬಲಿಯಾಗಿದ್ದಾರೆ. ಸರ್ಕಾರ ವಿವಿಧ ಕಾರ್ಯಕ್ರಮಗಳ ಅನುಷ್ಠಾನ ಮಾಡುವಲ್ಲಿ ಶ್ರಮಿಸುವ ಶಿಕ್ಷಕರು ಕೋವಿಡ್‌ ಲಸಿಕೆ ಪಡೆದು ಆರೋಗ್ಯ ಕಾಪಾಡಿಕೊಳ್ಳಬೇಕೆಂದು ಸಲಹೆ ನೀಡಿದರು.

ಏಕ ಕಾಲದಲ್ಲಿ ಹೆಚ್ಚು ಜನ ಲಸಿಕೆ ಪಡೆಯಲು ಬರುತ್ತಿರುವ ಕಾರಣ ಲಸಿಕೆ ನೀಡುವಲ್ಲಿ ಕೊಂಚ ವ್ಯತ್ಯಯ ಉಂಟಾಗುತ್ತಿದೆ. ಕೊರೊನಾ ಮೊದಲ ಅಲೆಯಲ್ಲಿ ಆಕ್ಸಿಜನ್‌ ಅಗತ್ಯ ಅಷ್ಟಾಗಿ ಕಂಡುಬರಲಿಲ್ಲ. ಈಗ ಸಾಕಷ್ಟು ಬೇಡಿಕೆ ಇದೆ. ಆದಾಗ್ಯೂ ಆಕ್ಸಿಜನ್‌ ಪೂರೈಸಲಾಗುತ್ತಿದೆ. ಆದರೆ ವಿರೋಧ ಪಕ್ಷಗಳು ಅನಗತ್ಯವಾಗಿ ಈ ಕುರಿತು ಟೀಕೆ ಮಾಡುತ್ತಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಜಿಲ್ಲಾ ಆರ್‌ಸಿಎಚ್‌ ಅಧಿ ಕಾರಿ ಡಾ| ಕುಮಾರಸ್ವಾಮಿ ಮಾತನಾಡಿ, ಶಾಸಕರು ಲಸಿಕೆ ಪಡೆಯುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದ್ದರು. ಇಲ್ಲಿ ನಡೆಯುತ್ತಿರುವ ಲಸಿಕಾ ಕಾರ್ಯಕ್ರಮದಲ್ಲಿ ಮೂರು ಸಾವಿರ ಶಿಕ್ಷಕರಿಗೆ ಲಸಿಕೆ ನೀಡಲಾಗುವುದು. ಜಿಲ್ಲೆಯಲ್ಲಿ ಈವರೆಗೆ 3.78 ಲಕ್ಷ ಜನರಿಗೆ ಮೊದಲ ಡೋಸ್‌ ನೀಡಲಾಗಿದೆ. ಇಂದು 15 ಸಾವಿರ ಡೋಸ್‌ ಲಸಿಕೆ ಬಂದಿದೆ. ಮುಂದಿನ ದಿನಗಳಲ್ಲಿ ಕೊಳಗೇರಿ ಸೇರಿದಂತೆ ಬಡಜನರು ಇರುವ ಪ್ರದೇಶಗಳಲ್ಲಿ ಲಸಿಕೆ ನೀಡಲಾಗುವುದು. ಲಸಿಕೆ ಪಡೆದಲ್ಲಿ ಕೊರೋನಾ ಸೋಂಕಿನಿಂದ ರಕ್ಷಣೆ ಪಡೆಯಬಹುದು.

Advertisement

ಹಾಗಾಗಿ ಪ್ರತಿಯೊಬ್ಬರೂ ಲಸಿಕೆ ಪಡೆದು ಉತ್ತಮ ಆರೋಗ್ಯ ಕಾಪಾಡಿಕೊಳ್ಳಬೇಕೆಂದು ಮನವಿ ಮಾಡಿದರು. ಡಿಡಿಪಿಐ ಕೆ. ರವಿಶಂಕರ್‌ ರೆಡ್ಡಿ, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಮಂಜುನಾಥ್‌, ಪ್ರಧಾನ ಕಾರ್ಯದರ್ಶಿ ಪ್ರದೀಪ್‌ ಕುಮಾರ್‌, ರಾಜ್ಯ ಸದಸ್ಯ ತಿಮ್ಮಾರೆಡ್ಡಿ, ಲಸಿಕಾ ಕಾರ್ಯಕ್ರಮದ ಅ ಧಿಕಾರಿ ಗಂಗಾಧರ ಮತ್ತಿತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next