Advertisement

ಕೋವಿಡ್‌ ಮುಕ್ತ ಜಿಲ್ಲೆಯಾಗಿಸಲು ಶ್ರಮಿಸಿ

10:42 PM Jun 03, 2021 | Team Udayavani |

ಚಿತ್ರದುರ್ಗ: ಜಿಲ್ಲೆಯನ್ನು ಕೋವಿಡ್‌ ಮುಕ್ತ ಮಾಡಲು ಸಂಸದ ಎ. ನಾರಾಯಣಸ್ವಾಮಿ ಶ್ರಮಿಸುತ್ತಿದ್ದಾರೆ. ಜಿಲ್ಲೆಯ ಜನತೆ ಅವರ ಜತೆಗೆ ಕೈ ಜೋಡಿಸಬೇಕು ಎಂದು ಮಾದಾರ ಚನ್ನಯ್ಯ ಗುರುಪೀಠದ ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಹೇಳಿದರು.

Advertisement

ನಗರದ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜು ಆವರಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಪೌರಕಾರ್ಮಿಕರಿಗೆ ಆಹಾರ ಕಿಟ್‌ ವಿತರಣಾ ಸಮಾರಂಭದ ಸಾನ್ನಿಧ್ಯ ವಹಿಸಿ ಮಾತನಾಡಿದರು. ಕೊರೊನಾ ಎರಡನೇ ಅಲೆ ಅಬ್ಬರಿಸುತ್ತಿರುವ ಸಂದರ್ಭದಲ್ಲಿ ಕೆಲ ಜನಪ್ರತಿನಿಧಿ ಗಳು ಮನೆಯಿಂದ ಹೊರಗೆ ಬರಲು ಹೆದರುತ್ತಿದ್ದಾರೆ. ಆದರೆ ಸಂಸದ ಎ. ನಾರಾಯಣಸ್ವಾಮಿ ಬಡವರ ಕಷ್ಟಕ್ಕೆ ಸ್ಪಂದಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಶ್ಲಾಘಿಸಿದರು.

ಕೊರೊನಾ ಸೋಂಕು ಕಣ್ಣಿಗೆ ಕಾಣದ ಶತ್ರು. ಹಾಗಾಗಿ ಎಲ್ಲರೂ ಎಚ್ಚರಿಕೆಯಿಂದ ಇರಬೇಕು. ಮಾರುಕಟ್ಟೆ ಮತ್ತಿತರ ಅಗತ್ಯ ವಸ್ತುಗಳ ಖರೀದಿ ಸಂದರ್ಭದಲ್ಲಿ ಜನರು ಖರೀದಿಗೆ ಮುಗಿ ಬೀಳುತ್ತಿರುವುದು ಸರಿಯಲ್ಲ. ಎಲ್ಲರೂ ತಪ್ಪದೇ ಕೊರೊನಾ ನಿಯಮ ಪಾಲಿಸುವ ಮೂಲಕ ವೈರಾಣುವನ್ನು ಹಿಮ್ಮೆಟ್ಟಿಸಬೇಕಿದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಜಾಗೃತರಾಗಿರಬೇಕು ಎಂದರು.

ಸಂಸದ ಎ. ನಾರಾಯಣಸ್ವಾಮಿ ಮಾತನಾಡಿ, ಪೌರ ಕಾರ್ಮಿಕರು, ಖಾಸಗಿ ಶಾಲೆಗಳು, ಅನುದಾನ ರಹಿತ ಶಾಲಾ ಸಿಬ್ಬಂದಿಗೆ ಇಂದು ಆಹಾರ ಕಿಟ್‌ಗಳನ್ನು ವಿತರಿಸಲಾಗಿದೆ. ಜೊತೆಗೆ ಮಾಸ್ಕ್ಗಳನ್ನೂ ನೀಡಲಾಗಿದೆ. ಎಲ್ಲರೂ ತಪ್ಪದೇ ಮಾಸ್ಕ್ ಧರಿಸಬೇಕು. ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಕೋವಿಡ್‌ ನಿಯಮಗಳನ್ನು ಪಾಲಿಸುವ ಮೂಲಕ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬೇಕೆಂದು ಕಿವಿಮಾತು ಹೇಳಿದರು.

ಜಿಲ್ಲಾಧಿಕಾರಿ ಕವಿತಾ ಎಸ್‌. ಮನ್ನಿಕೇರಿ ಮಾತನಾಡಿ, ಜಿಲ್ಲೆಯಲ್ಲಿ ಕೊರೊನಾ ಎರಡನೇ ಅಲೆ ವ್ಯಾಪಕವಾಗಿ ಹರಡುತ್ತಿದೆ. ಇದರಿಂದಾಗಿ ಅನೇಕ ಜನರು ಕೆಲಸ ಕಳೆದುಕೊಂಡು ದುಡಿಮೆ ಇಲ್ಲದೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಬಡವರು ಬದುಕು ನಡೆಸುವುದು ದುಸ್ತರವಾಗಿದೆ. ಇಂತಹ ಸಂದರ್ಭದಲ್ಲಿ ಸಂಸದರು ಜನರಿಗೆ ಆಹಾರದ ಕಿಟ್‌ಗಳನ್ನು ವಿತರಿಸುತ್ತಿರುವುದು ಉತ್ತಮ ಬೆಳವಣಿಗೆ ಎಂದರು.

Advertisement

ಬಿಜೆಪಿ ಜಿಲ್ಲಾಧ್ಯಕ್ಷ ಎ. ಮುರುಳಿ, ನಗರಸಭೆ ಅಧ್ಯಕ್ಷೆ ತಿಪ್ಪಮ್ಮ, ಸದಸ್ಯ ವೆಂಕಟೇಶ್‌, ಜಿಪಂ ಸಿಇಒ ಡಾ| ಕೆ. ನಂದಿನಿದೇವಿ, ಜಿಪಂ ಮಾಜಿ ಅಧ್ಯಕ್ಷ ಮೀಸೆ ಮಹಾಲಿಂಗಪ್ಪ, ಡಿಡಿಪಿಐ ಕೆ. ರವಿಶಂಕರ್‌ ರೆಡ್ಡಿ, ನಗರಸಭೆ ಪೌರಾಯುಕ್ತ ಜೆ.ಟಿ. ಹನುಮಂತರಾಜು, ವ್ಯವಸ್ಥಾಪಕಿ ಮಂಜುಳಮ್ಮ ಮತ್ತಿತರರು ಇದ್ದರು. ಪೌರ ಕಾರ್ಮಿಕರು, ಖಾಸಗಿ ಅನುದಾನ ರಹಿತ ಶಾಲಾ ಶಿಕ್ಷಕರು, ಚಮ್ಮಾರರು ಸೇರಿದಂತೆ 500ಕ್ಕೂ ಹೆಚ್ಚು ಜನರಿಗೆ ಆಹಾರ ಕಿಟ್‌ಗಳನ್ನು ವಿತರಿಸಲಾಯಿತು.

Advertisement

Udayavani is now on Telegram. Click here to join our channel and stay updated with the latest news.

Next