Advertisement
ಜಿಪಂ ಸಭಾಂಗಣದಲ್ಲಿ ಬುಧವಾರ ನಡೆದ ಗ್ರಾಮ ಪಂಚಾಯಿತಿ ಪಿಡಿಒ, ಗ್ರಾಮ ಲೆಕ್ಕಾಧಿ ಕಾರಿ ಹಾಗೂ ಪಂಚಾಯಿತಿ ಮಟ್ಟದ ನೋಡಲ್ ಅ ಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ಕೊರೊನಾ ಎರಡನೆ ಅಲೆ ಜಿಲ್ಲೆಯಲ್ಲಿ ವ್ಯಾಪಕವಾಗಿ ಹರಡುತ್ತಿದೆ. ಸೋಂಕಿತರು ಕಂಡು ಬಂದರೆ ತಪಾಸಣೆ ನಡೆಸಿ. ನಂತರ ಹತ್ತು ಮಂದಿ ಪ್ರಾಥಮಿಕ ಹಾಗೂ 20 ಮಂದಿ ದ್ವಿತೀಯ ಸಂಪರ್ಕಿತರನ್ನು ಕಡ್ಡಾಯವಾಗಿ ಪತ್ತೆ ಹಚ್ಚಿ ಚಿಕಿತ್ಸೆ ಕೊಡಿಸುವುದು ನಿಮ್ಮ ಜವಾಬ್ದಾರಿ ಎಂದರು.
Related Articles
Advertisement
ಜಿಪಂ ಸಿಇಒ ಡಾ| ಕೆ. ನಂದಿನಿದೇವಿ ಮಾತನಾಡಿ, ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಮೈಕ್ರೋ ಕೋವಿಡ್ ಕೇರ್ ಸೆಂಟರ್‌ಗಳನ್ನು ತೆರೆಯಲು ಸರ್ಕಾರ ಪ್ರತಿ ಪಂಚಾಯಿತಿಗೆ ಐವತ್ತು ಸಾವಿರ ರೂ.ಗಳನ್ನು ಬಿಡುಗಡೆ ಮಾಡಿದೆ. ಅದರಲ್ಲಿ ಸೋಂಕಿತರಿಗೆ ಉಪಹಾರ, ಊಟಕ್ಕೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಗ್ರಾಮಗಳಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದೆ. ಬೆಡ್, ಕಾಟ್ ವ್ಯವಸ್ಥೆ ಮಾಡಿಕೊಳ್ಳಿ. ಕುಡಿಯುವ ನೀರು, ಫ್ಯಾನ್, ನ್ಯೂಸ್ ಪೇಪರ್‌ಗಳನ್ನು ಸೋಂಕಿತರಿಗೆ ತಲುಪಿಸಬೇಕು ಎಂದರು.
ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು, ಚುನಾಯಿತ ಪ್ರತಿನಿಧಿ ಗಳ ಸಹಕಾರ ಪಡೆದುಕೊಂಡು ನಿಯಂತ್ರಣಕ್ಕೆ ಮುಂದಾಗಿ. ಸಣ್ಣ ಸಣ್ಣ ವಯಸ್ಸಿನವರು ಕೋವಿಡ್‌ಗೆ ಬಲಿಯಾಗುತ್ತಿದ್ದಾರೆ. ಈ ನಿಟ್ಟಿನಲ್ಲಿ ಹೆಚ್ಚು ಜಾಗ್ರತೆ ವಹಿಸಿ. ಸೋಂಕಿನ ಲಕ್ಷಣ ಕಂಡು ಬಂದಲ್ಲಿ ತಕ್ಷಣ ಆಸ್ಪತ್ರೆಗೆ ಸೇರುವಂತೆ ಮಾಡಿ ಎಂದು ಸಲಹೆ ನೀಡಿದರು.
ತಾಲೂಕು ವೈದ್ಯಾಧಿ ಕಾರಿ ಡಾ| ಗಿರೀಶ್ ಮಾತನಾಡಿ, ಚಿತ್ರದುರ್ಗ ತಾಲೂಕಿನಾದ್ಯಂತ ಐದು ಕೋವಿಡ್ ಕೇರ್ ಸೆಂಟರ್‌ಗಳಿವೆ. ಗ್ರಾಮ ಮಟ್ಟದಲ್ಲಿ ಶಾಲೆ, ಸಮುದಾಯ ಭವನ ಗುರುತಿಸಿ ಮೈಕ್ರೋ ಕೋವಿಡ್ ಕೇರ್ ಸೆಂಟರ್ ಗಳು ಆರಂಭಿಸಲಾಗುವುದು. ಪ್ರಾಥಮಿಕ ಆರೋಗ್ಯ ಕೇಂದ್ರದವರು ನಿರ್ವಹಣೆ ನೋಡಿಕೊಳ್ಳುತ್ತಾರೆ. ಕೊರೊನಾ ಕೋವಿಡ್ ಕೇರ್ ಸೆಂಟರ್‌ನಲ್ಲಿ ಕಸ ವಿಲೇವಾರಿ ಸಮಸ್ಯೆಯಿದ್ದು, ಸರಿಪಡಿಸಿ ಎಂದು ಹೇಳಿದರು.
ಡಿಎಚ್‌ಒ ಡಾ| ಸಿ.ಎಲ್. ಪಾಲಾಕ್ಷ, ತಹಶೀಲ್ದಾರ್ ಜೆ.ಸಿ. ವೆಂಕಟೇಶಯ್ಯ, ಕೋವಿಡ್-19 ಜಾಗೃತಿ ನೋಡಲ್ ಅ ಧಿಕಾರಿ ಕೃಷ್ಣಪ್ಪ, ತಾಪಂ ಇಒ ಹನುಮಂತಪ್ಪ ಇದ್ದರು.