Advertisement
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ನಡೆದ ಕೊರೊನಾ ಸಂಭಾವ್ಯ ಮೂರನೇ ಅಲೆಯಿಂದ ಮಕ್ಕಳ ರಕ್ಷಣೆ ಹಾಗೂ ಆರೈಕೆ ಕುರಿತ ಮುಂಜಾಗ್ರತಾ ಸಭೆಯಲ್ಲಿ ಅವರು ಮಾತನಾಡಿದರು. ಕೋವಿಡ್ ಮೂರನೇ ಅಲೆ ಎದುರಿಸಲು ಮಕ್ಕಳಿಗಾಗಿ ಪ್ರತಿ ತಾಲೂಕಿನಲ್ಲೂ ಕೋವಿಡ್ ಕೇರ್ ಸೆಂಟರ್ ಗುರುತಿಸಲಾಗಿದೆ. ಕೋವಿಡ್ ರೋಗ ಲಕ್ಷಣಗಳಿಲ್ಲದಿದ್ದರೆ ಮಗುವಿನೊಂದಿಗೆ ತಾಯಿಯೂ ಇರಲು ಅವಕಾಶ ಮಾಡಲಾಗಿದೆ. ಕೋವಿಡ್ ಕೇರ್ ಸೆಂಟರ್‌ನಲ್ಲಿ ಉಚಿತ ಊಟದ ವ್ಯವಸ್ಥೆ ಸೇರಿದಂತೆ ಎಲ್ಲ ರೀತಿಯ ಸೌಕರ್ಯಗಳನ್ನು ಒದಗಿಸಲಾಗುವುದು ಎಂದರು.
Related Articles
Advertisement
ಕಳೆದ ಒಂದು ವರ್ಷದಲ್ಲಿ 98 ಬಾಲ್ಯವಿವಾಹಗಳ ದೂರುಗಳು ಬಂದಿವೆ. ಈಗಾಗಲೇ 93 ಪ್ರಕರಣಗಳಿಗೆ ಎಫ್‌ಐಆರ್ ದಾಖಲಿಸಲಾಗಿದೆ. ಈ ವರ್ಷ ಏಪ್ರಿಲ್‌ನಲ್ಲಿ 41 ಬಾಲ್ಯವಿವಾಹದ ದೂರುಗಳು ಬಂದಿದ್ದವು. ಇದರಲ್ಲಿ 40 ಬಾಲ್ಯವಿವಾಹಗಳನ್ನು ತಡೆದು, ಒಂದು ಪ್ರಕರಣಕ್ಕೆ ಸಂಬ ಸಿದಂತೆ ಎಫ್‌ಐಆರ್ ದಾಖಲಿಸಲಾಗಿದೆ ಎಂದರು. ಜಿಲ್ಲಾ ಆರೋಗ್ಯಾಧಿ ಕಾರಿ ಡಾ| ಸಿ.ಎಲ್. ಪಾಲಾಕ್ಷ ಮಾತನಾಡಿ, ಜಿಲ್ಲಾಸ್ಪತ್ರೆಯಲ್ಲಿ ಎರಡು ಆಕ್ಸಿಜನ್ ಸಾಮರ್ಥ್ಯದ ಮಕ್ಕಳ ವಾರ್ಡ್‌ಗಳನ್ನು ಈಗಾಗಲೇ ಪ್ರಾರಂಭಿಸಲಾಗಿದೆ. ಜಿಲ್ಲಾಸ್ಪತ್ರೆ ಸೇರಿದಂತೆ ಉಳಿದ ಐದು ತಾಲೂಕುಗಳ ಸಾರ್ವಜನಿಕ ಆಸ್ಪತ್ರೆ ಸೇರಿದಂತೆ ಒಟ್ಟು ಆರು ಆಸ್ಪತ್ರೆಗಳನ್ನು ಗುರುತಿಸಲಾಗಿದೆ.
ಆರು ಆಸ್ಪತ್ರೆಗಳಲ್ಲಿ ಐಸಿಯು, ವೆಂಟಿಲೇಟರ್ ಸೇರಿದಂತೆ ಒಟ್ಟು 94 ಬೆಡ್‌ಗಳನ್ನು ಪ್ರತ್ಯೇಕಿಸಿ ಮಕ್ಕಳ ಚಿಕಿತ್ಸೆಗೆ ಕಾಯ್ದಿರಿಸಲಾಗಿದೆ. 18 ವರ್ಷದೊಳಗಿನ ಕೋವಿಡ್ ಸೋಂಕಿತ ರೋಗ ಲಕ್ಷಣಗಳಿಲ್ಲದ ಮಕ್ಕಳಿಗೋಸ್ಕರ ಕೋವಿಡ್ ಕೇರ್ ಸೆಂಟರ್‌ಗಳನ್ನು ಪ್ರಾರಂಭಿಸಲು ಕ್ರಮ ವಹಿಸಲಾಗಿದೆ. ಜಿಲ್ಲಾ ಮಟ್ಟದ ಮಕ್ಕಳ ಕೋವಿಡ್ ಕೇರ್ ಸೆಂಟರ್‌ನಲ್ಲಿ 50 ಬೆಡ್, ಐದು ತಾಲೂಕಿನಲ್ಲಿ ತಲಾ 25 ಬೆಡ್ ಸೇರಿದಂತೆ ಒಟ್ಟು 175 ಬೆಡ್ ಸಾಮರ್ಥ್ಯದ ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ಕೋವಿಡ್ ಕೇರ್ ಸೆಂಟರ್‌ಗಳನ್ನು ಪ್ರಾರಂಭಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು. ಜಿಲ್ಲಾ ಧಿಕಾರಿ ಕವಿತಾ ಎಸ್. ಮನ್ನಿಕೇರಿ ಮಾತನಾಡಿ, ಕೋವಿಡ್ ಮೂರನೇ ಅಲೆ ಮಕ್ಕಳ ಮೇಲೆ ಪರಿಣಾಮ ಬೀರಲಿದೆ ಎಂಬ ತಜ್ಞರ ಅಭಿಪ್ರಾಯದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಈಗಾಗಲೇ ಕಳೆದ 20 ದಿನಗಳ ಹಿಂದೆಯೇ ಸಮಿತಿ ರಚನೆ ಮಾಡಲಾಗಿದೆ. ಕ್ರಿಯಾ ಯೋಜನೆ ತಯಾರಿಸಲು ಸಂಬಂ ಧಿಸಿದ ಅ ಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ಸಭೆಯಲ್ಲಿ ಶಾಸಕರಾದ ಜಿ.ಎಚ್. ತಿಪ್ಪಾರೆಡ್ಡಿ, ಟಿ. ರಘುಮೂರ್ತಿ, ಜಿಪಂ ಸಿಇಒ ಡಾ| ಕೆ. ನಂದಿನಿದೇವಿ, ಜಿಲ್ಲಾ ಪೊಲೀಸ್ ವರಿಷ್ಠಾ ಧಿಕಾರಿ ಜಿ. ರಾಧಿ ಕಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ರಾಜಾ ನಾಯಕ್, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿ ಕಾರಿ ಜೆ. ವೈಶಾಲಿ ಮತ್ತಿತರರು ಭಾಗವಹಿಸಿದ್ದರು.