ಚಿತ್ರದುರ್ಗ: ಕೋವಿಡ್ ಮೊದಲ ಮತ್ತು ಎರಡನೇ ಅಲೆಯಲ್ಲಿ ವಯಸ್ಕರು ಮೃತಪಟ್ಟರು. ಆದರೆ ಮೂರನೇ ಅಲೆಯಲ್ಲಿ ಮಕ್ಕಳಿಗೆ ತೊಂದರೆಯಾದರೆ ಜನ ಸಹಿಸುವುದಿಲ್ಲ. ಈ ನಿಟ್ಟಿನಲ್ಲಿ ಎಚ್ಚರಿಕೆಯಿಂದ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಿ ಎಂದು ಸಂಸದ ಎ. ನಾರಾಯಣಸ್ವಾಮಿ, ಅ ಧಿಕಾರಿಗಳಿಗೆ ಸೂಚಿಸಿದರು.
ನಗರದ ಜಿಲ್ಲಾ ಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಕೋವಿಡ್-19 ಸಂಭಾವ್ಯ ಮೂರನೇ ಅಲೆ ನಿಯಂತ್ರಣ ಸಂಬಂಧ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ಕೋವಿಡ್-19 ಎರಡನೇ ಅಲೆಯ ಸಂದರ್ಭದಲ್ಲಿ ಆಗಿರುವ ಲೋಪ ದೋಷಗಳನ್ನು ಸರಿಪಡಿಸಿಕೊಂಡು ಸಂಭಾವ್ಯ ಮೂರನೇ ಅಲೆಯ ನಿಯಂತ್ರಣಕ್ಕೆ ಸಿದ್ಧರಾಗಬೇಕು. ಮಕ್ಕಳಿಗೆ ತೊಂದರೆಯಾದರೆ ಆಸ್ಪತ್ರೆಗಳು ದ್ವಂಸವಾಗುತ್ತವೆ ಎಂದು ಎಚ್ಚರಿಸಿದರು.
ಸಂಭಾವ್ಯ ಮೂರನೇ ಅಲೆಯು ಹೆಚ್ಚಾಗಿ ಮಕ್ಕಳಲ್ಲಿ ಸೋಂಕು ಕಂಡು ಬರುವ ಸಾಧ್ಯತೆ ಇರುವುದರಿಂದ, ಒಂದು ತಿಂಗಳೊಳಗೆ ಅಗತ್ಯವಿರುವ ಎಲ್ಲ ಸೌಲಭ್ಯಗಳೊಂದಿಗೆ ಚಿಕಿತ್ಸೆಗೆ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಡಿಎಚ್‌ಒ ಹಾಗೂ ಜಿಲ್ಲಾ ಶಸ್ತ್ರಚಿಕಿತ್ಸಕರಿಗೆ ಸೂಚನೆ ನೀಡಿದರು.
ಅಗತ್ಯ ಪರಿಕರ ಖರೀದಿಗೆ ಪ್ರಸ್ತಾವನೆ ಸಲ್ಲಿಸಿ: ಕೊರೊನಾ ಮೂರನೇ ಅಲೆಯಲ್ಲಿ ಮಕ್ಕಳನ್ನು ದೃಷ್ಟಿಯಲ್ಲಿಟ್ಟುಕೊಂಡು ಅವರಿಗೆ ಚಿಕಿತ್ಸೆ ನೀಡಲು ಅಗತ್ಯವಿರುವ ಪರಿಕರ, ಔಷಧ ಮತ್ತಿತರೆ ವ್ಯವಸ್ಥೆಗಳಿಗೆ ಪ್ರಸ್ತಾವನೆ ಸಲ್ಲಿಸಿ. ಬೇಕಾಗಿರುವ ಆಸ್ಪತ್ರೆ, ಕೋವಿಡ್ ಕೇರ್ ಸೆಂಟರ್, ತಜ್ಞ ವೈದ್ಯರು, ಸಿಬ್ಬಂದಿ, ಹಾಸಿಗೆ, ಆಕ್ಸಿಜನ್, ವೆಂಟಿಲೇಟರ್, ಔಷ ಗಳ ವಿವರಗಳನ್ನೊಳಗೊಂಡಂತೆ ಇದಕ್ಕೆ ಬೇಕಾಗುವ ಬಜೆಟ್‌ನ ಸಂಪೂರ್ಣ ವಿವರದ ಕುರಿತು ಪ್ರಸ್ತಾವನೆ ಸಲ್ಲಿಸುವಂತೆ ಸಂಸದರು ತಿಳಿಸಿದರು.
ಜಿಲ್ಲೆಗೆ ಅಗತ್ಯವಿರುವ ಸಿಬ್ಬಂದಿಯನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಶೀಘ್ರದಲ್ಲಿ ಅರ್ಜಿ ಆಹ್ವಾನಿಸಬೇಕು. ಶೇ. 10 ರಷ್ಟು ಅಗತ್ಯವಿರುವ ಔಷ ಧಿಯನ್ನು ಖರೀದಿಸಬೇಕು. ಕೋವಿಡ್-19 ಮೂರನೇ ಅಲೆಯಲ್ಲಿ ಮಕ್ಕಳಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗಬಾರದು ಎಂದರು.
ಸಭೆಯಲ್ಲಿ ಜಿಲ್ಲಾ ಧಿಕಾರಿ ಕವಿತಾ ಎಸ್. ಮನ್ನಿಕೇರಿ, ಜಿಪಂ ಸಿಇಒ ಡಾ| ಕೆ. ನಂದಿನಿದೇವಿ, ಜಿಲ್ಲಾ ಪೊಲೀಸ್ ವರಿಷ್ಠಾ ಧಿಕಾರಿ ಜಿ. ರಾಧಿ ಕಾ, ಅಪರ ಜಿಲ್ಲಾಧಿ ಕಾರಿ ಇ. ಬಾಲಕೃಷ್ಣ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ| ಎಚ್.ಜೆ. ಬಸವರಾಜಪ್ಪ, ಆರ್‌ಸಿಎಚ್ ಅ ಧಿಕಾರಿ ಡಾ| ಕುಮಾರಸ್ವಾಮಿ ಹಾಗೂ ತಾಲೂಕು ಆರೋಗ್ಯಾಧಿ ಕಾರಿಗಳು ಭಾಗವಹಿಸಿದ್ದರು.