Advertisement
ತಾಲೂಕಿನ 33 ಗ್ರಾಪಂಗಳ ವ್ಯಾಪ್ತಿಯಲ್ಲಿ ವಾಸ ಮಾಡುತ್ತಿರುವ ಅಲೆಮಾರಿ, ಅರೆ ಅಲೆಮಾರಿ ಸಮುದಾಯದ 4448 ಫಲಾನುಭವಿಗಳಿಗೆ ಸರ್ಕಾರದ ವಸತಿ ಯೋಜನೆಗಳ ಅಡಿ ಮನೆ ನಿರ್ಮಿಸಿಕೊಳ್ಳಲು ಕಾರ್ಯಾದೇಶ ಪತ್ರ ವಿತರಣೆ ಮತ್ತು 5000 ಜನರಿಗೆ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಸ್ವಾತಂತ್ರÂ ದೊರೆತು 75 ವರ್ಷ ಕಳೆದರೂ ಸಮಾಜದ ಕಟ್ಟ ಕಡೆಯ ಸಮುದಾಯದವರಿಗೆ ಮನೆಗಳು ಸಿಕ್ಕಿರಲಿಲ್ಲ. ಪ್ರಧಾನಿ ನರೇಂದ್ರ ಮೋದಿಯವರು ದೇಶದ ಎಲ್ಲ ರಾಜ್ಯಗಳಿಗೆ ಕೋಟ್ಯಂತರ ರೂ. ಬಿಡುಗಡೆ ಮಾಡಿ ಬಡವರು ಮನೆಗಳನ್ನು ನಿರ್ಮಾಣ ಮಾಡಿಕೊಳ್ಳುವಂತೆ ಮಾಡಿದ್ದಾರೆ.
Related Articles
Advertisement
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಉತ್ತಮವಾಗಿ ಕೆಲಸ ಮಾಡುತ್ತಿವೆ. ಕೋವಿಡ್ ಲಸಿಕೆ ಬಗ್ಗೆ ಮೊದಲು ಅಪಪ್ರಚಾರ ಮಾಡಿದವರು ಕಾಂಗ್ರೆಸ್ ನವರಾಗಿದ್ದಾರೆ. ಸುಳ್ಳು ಆರೋಪ ಮಾಡುವುದನ್ನು ನಿಲ್ಲಿಸಬೇಕು ಎಂದು ತಾಕೀತು ಮಾಡಿದರು. ಅಧ್ಯಕ್ಷತೆ ವಹಿಸಿದ್ದ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಮಾತನಾಡಿ, ವಸತಿ ರಹಿತರಿಗೆ ಮನೆ ನೀಡುವ ಕೆಲಸವನ್ನು ವಸತಿ ಸಚಿವ ಸೋಮಣ್ಣನವರು ಮಾಡಿದ್ದಾರೆ. ತಾಲೂಕಿಗೆ ಅತಿ ಹೆಚ್ಚು ಮನೆಗಳನ್ನು ನೀಡಿ 330 ಕೋಟಿ ರೂ. ಬಿಡುಗಡೆ ಮಾಡಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.
ಧರ್ಮಪುರ ಕೆರೆಗೆ ನೀರು ಹರಿಸುವ ಕಾರ್ಯಕ್ಕೆ ಸರ್ಕಾರದಿಂದ ಅನುದಾನ ಬಿಡುಗಡೆಯಾಗಿದೆ. ಇನ್ನು ಗಾಯತ್ರಿ ಜಲಾಶಯಕ್ಕೆ ನೀರು ತರಬೇಕಾಗಿದೆ. ಈ ಕೆಲಸದಲ್ಲಿ ವಸತಿ ಸಚಿವರು ಸಹಾಯ ಮಾಡಬೇಕು. ಹಿರಿಯೂರನ್ನು ಗುಡಿಸಲು ಮುಕ್ತ ತಾಲೂಕನ್ನಾಗಿ ಮಾಡಲು ಶ್ರಮಿಸುವುದಾಗಿ ತಿಳಿಸಿದರು. ಶ್ರೀ ಕೃಷ್ಣ ಯಾದವಾನಂದ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.
ಕಾರ್ಯಕ್ರಮದಲ್ಲಿವಸತಿ ಯೋಜನೆ ಅಧಿಕಾರಿ ಪರಶುರಾಮ್, ರಾಜ್ಯ ಯಾದವ ಸಂಘದ ಅಧ್ಯಕ್ಷ ಡಿ.ಟಿ. ಶ್ರೀನಿವಾಸ್, ಜಿಪಂ ಸಿಇಒ ಡಾ| ನಂದಿನಿದೇವಿ, ತಹಶೀಲ್ದಾರ್ ಶಿವಕುಮಾರ್, ಯಾದವ ಸಂಘದ ಅಧ್ಯಕ್ಷ ರಂಗಸ್ವಾಮಿ, ಶಿವಣ್ಣ, ತಿಪ್ಪೇಸ್ವಾಮಿ, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಚಿತ್ರಜಿತ್ ಯಾದವ್, ಸದಸ್ಯರಾದ ಬಾಲಕೃಷ್ಣ, ಸಿ.ಎಂ. ಸ್ವಾಮಿ, ಡಾ| ವೆಂಕಟೇಶ್, ತಾಪಂ ಇಒ ಪ್ರಸಾದ್ ಮೊದಲಾದವರು ಭಾಗವಹಿಸಿದ್ದರು.