Advertisement
ನಗರದ ಜಿಲ್ಲಾ ಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಗಣಿ ಮತ್ತು ಭೂವಿಜ್ಞಾನ ಇಲಾಖೆ ಮತ್ತು ಕೆಎಂಇಆರ್‌ಸಿಯ ಪ್ರಗತಿ ಪರಿಶೀಲನಾ ಸಭೆ ನಂತರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಮುಂದಿನ 15 ದಿನಗಳಲ್ಲಿ ಈ ಪ್ರಕರಣ ವಿಚಾರಣೆಗೆ ಬರಲಿದ್ದು, ರಾಜ್ಯದಿಂದ ಹಿರಿಯ ನ್ಯಾಯವಾದಿಗಳನ್ನು ನೇಮಿಸಲಾಗಿದೆ.
Related Articles
Advertisement
ಮರಳು ಬ್ಯಾಗ್‌ಗಳಿಗೆ ಸರ್ಕಾರ ದರ ನಿಗದಿಪಡಿಸಿದ್ದು, ಮರಳು ಬ್ಯಾಗ್‌ಗಳಲ್ಲಿ ಸರ್ಕಾರದ ಲೋಗೊ ಮತ್ತು ಕಂಪನಿ ಹೆಸರು ಇರುತ್ತದೆ. ಪ್ರತಿಯೊಂದು ಬ್ಯಾಗ್ ಕ್ರಮಸಂಖ್ಯೆ ಹೊಂದಿದ್ದು, ಇದರಿಂದ ಇಲಾಖೆಗೆ ಬರುವ ಆದಾಯ ಹೆಚ್ಚಾಗಲಿದೆ. ಗ್ರಾಹಕರಿಗೆ ಉತ್ತಮ ಗುಣಮಟ್ಟದ ಮರಳು ಸರಬರಾಜು ಮಾಡಲು ಅನುಕೂಲವಾಗಲಿದೆ ಎಂದರು.
ಅರ್ಜಿ ವಿಲೇವಾರಿಗೆ ಮೈನಿಂಗ್ ಅದಾಲತ್: 2000 ನೇ ಸಾಲಿನಿಂದ ಗಣಿ ಮತ್ತು ಭೂವಿಜ್ಞಾನ ಇಲಾಖೆಗೆ ಸಂಬಂಧಪಟ್ಟಂತೆ ವಿವಿಧ ಉತ್ಪಾದನಾ ಚಟುವಟಿಕೆಗಳಿಗೆ ಸಂಬಂ ಸಿದ 6 ಸಾವಿರ ಅರ್ಜಿಗಳು ಬಾಕಿ ಉಳಿದಿವೆ. ಇವುಗಳನ್ನು ಇತ್ಯರ್ಥಗೊಳಿಸಲು ಸಿಂಗಲ್ ವಿಂಡೋ ಸಿಸ್ಟಮ್ ಜಾರಿಗೆ ತರಲಾಗುವುದು ಎಂದು ಸಚಿವ ನಿರಾಣಿ ತಿಳಿಸಿದರು.
ಸರ್ಕಾರವೇ ಉದ್ದಿಮೆದಾರರ ಮನೆಗೆ ಬರುವ ಸಲುವಾಗಿ ಇಲಾಖೆಯ ಪ್ರತಿಯೊಂದು ವಿಭಾಗದಲ್ಲೂ ಗಣಿಗೆ ಸಂಬಂಧಪಟ್ಟ ಸಮಸ್ಯೆಗಳನ್ನು ಬಗೆಹರಿಸಲು ಮೈನಿಂಗ್ ಆದಾಲತ್ ಆರಂಭಿಸಲಾಗುವುದು. ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಸಂಬಂ ಧಿಸಿದಂತೆ ಚಿತ್ರದುರ್ಗದಲ್ಲಿ ಸ್ವಂತ ಕಟ್ಟಡ ಇಲ್ಲ. ಇದಕ್ಕಾಗಿ ಸುಮಾರು 2 ಕೋಟಿ ರೂ. ವೆಚ್ಚದಲ್ಲಿ ಖನಿಜ ಭವನ ನಿರ್ಮಿಸಲು ಶೀಘ್ರದಲ್ಲಿ ಭೂಮಿಪೂಜೆ ನೆರವೇರಿಸಲಾಗುವುದು. ರಾಜ್ಯದ 13 ಜಿಲ್ಲೆಗಳಲ್ಲಿ ಖನಿಜ ಭವನಗಳಿದ್ದು, ಇನ್ನುಳಿದ ಜಿಲ್ಲೆಗಳಲ್ಲೂ ಖನಿಜ ಭವನಗಳನ್ನು ಸ್ಥಾಪನೆ ಮಾಡಲಾಗುವುದು ಎಂದರು.
ರೋಗಗ್ರಸ್ಥ ಗಣಿ ಆರಂಭಕ್ಕೆ ಕ್ರಮ: ಈಗಾಗಲೇ ನಷ್ಟದಲ್ಲಿದ್ದು ಮುಚ್ಚಿರುವ ಸಿ ದರ್ಜೆಯ ಹಲವು ಗಣಿಗಳನ್ನು ಆರಂಭಿಸಲು ಚಿಂತನೆ ನಡೆದಿದೆ. ಇದರಲ್ಲಿ ಇಂಗಳದಾಳ್ ತಾಮ್ರ ಗಣಿ, ಕೋಲಾರ ಚಿನ್ನದ ಗಣಿಯೂ ಸೇರಿವೆ. ರಾಜ್ಯದಲ್ಲಿ ಖನಿಜ ಸಂಪತ್ತು ಹೆಚ್ಚಿದೆ. ಯಾವ ಯಾವ ಭಾಗದಲ್ಲಿ ಎಷ್ಟಿದೆ ಎಂದು ತಿಳಿಯಲು ಹೈ ರೆಸಲ್ಯೂಷನ್ ಸರ್ವೆ ಮಾಡಲು ಜಾಗತಿಕ ಟೆಂಡರ್ ಕರೆಯಲಾಗುವುದು.
ಈ ಮೂಲಕ 2023ಕ್ಕೆ ಮೈನಿಂಗ್ ಗ್ಲೋಬಲ್ ಹೂಡಿಕೆದಾರರ ಸಮಾವೇಶ ಆಯೋಜಿಸಲು ಉದ್ದೇಶಿಸಲಾಗಿದೆ ಎಂದು ತಿಳಿಸಿದರು. ಸಭೆಯಲ್ಲಿ ಶಾಸಕರಾದ ಜಿ.ಎಚ್. ತಿಪ್ಪಾರೆಡ್ಡಿ, ಪೂರ್ಣಿಮಾ ಶ್ರೀನಿವಾಸ್, ಟಿ. ರಘುಮೂರ್ತಿ, ಎಂ. ಚಂದ್ರಪ್ಪ, ಕೆಎಂಇಆರ್‌ಸಿ ಪ್ರಧಾನ ಕಾರ್ಯದರ್ಶಿ ಪಿ.ಸಿ. ರೇ, ನಿರ್ದೇಶಕ ಪಿ.ಎನ್. ರವೀಂದ್ರ, ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ, ಜಿಪಂ ಸಿಇಒ ಡಾ| ಕೆ.ನಂದಿನಿದೇವಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ. ರಾಧಿಕಾ, ಗಣಿ ಮತ್ತು ಭೂವಿಜ್ಞಾನ ಇಲಾಖೆ ಉಪನಿರ್ದೇಶಕ ಚಂದ್ರಶೇಖರ್ ಮತ್ತಿತರರು ಭಾಗವಹಿಸಿದ್ದರು.