Advertisement
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಕ್ರೀಡಾ ಇಲಾಖೆ, ಶಾಸಕರ ಪ್ರದೇಶಾಭಿವೃದ್ಧಿ ಅನುದಾನ ಬಳಕೆ, ಬಯಲುಸೀಮೆ ಪ್ರದೇಶಾಭಿವೃದ್ಧಿ ಮತ್ತಿತರೆ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ಸರ್ಕಾರ ಅನುದಾನ ನೀಡಿದರೂ ಸರಿಯಾದ ರೀತಿಯಲ್ಲಿ ನಿರ್ಮಾಣ ಏಜೆನ್ಸಿಯವರು ಕಾರ್ಯ ನಿರ್ವಹಿಸುತ್ತಿಲ್ಲ. ನಿರ್ಮಾಣ ಏಜೆನ್ಸಿಯವರ ವಿಳಂಬದಿಂದ ಅಭಿವೃದ್ಧಿ ಕಾರ್ಯಗಳಿಗೆ ತೊಂದರೆಯಾಗುತ್ತಿದೆ ಎಂದು ಕೆಆರ್‌ಐಡಿಎಲ್, ನಿರ್ಮಿತಿ ಕೇಂದ್ರ, ಭೂಸೇನಾ ನಿಗಮದ ಅಧಿ ಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.
Related Articles
Advertisement
ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಮಾತನಾಡಿ, ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನಕ್ಕೆ ಸಂಬಂಧಿ ಸಿದಂತೆ ನಿಯಮಾವಳಿಗಳನ್ನು ಸರಳೀಕರಣ ಮಾಡುವ ಅಗತ್ಯವಿದೆ. ಅನುದಾನ ಮಂಜೂರಾತಿಯಲ್ಲಿ ಸಾಕಷ್ಟು ವಿಳಂಬವಾಗುತ್ತಿದೆ. ಸ್ಥಳೀಯ ಶಾಸಕರ ಅನುದಾನದಲ್ಲಿ ನಿರ್ಮಾಣವಾಗುವ ಕೆಲಸಗಳು ಶೀಘ್ರದಲ್ಲಿ ಪ್ರಾರಂಭ ವಾಗಬೇಕು. ಆದರೆ ಅನುದಾನ ಮಂಜೂರಾಗಲು ವಿವಿಧ ಇಲಾಖೆಗಳಲ್ಲಿ ತಿಂಗಳುಗಳ ಕಾಲ ವ್ಯಯವಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಕಾಮಗಾರಿಯಲ್ಲಿ ಲೋಪವಾದರೆ ಕ್ರಮ: ಅ ಧಿಕಾರಿಗಳು ಅನುದಾನ ಬಿಡುಗಡೆಯಲ್ಲಿ ಅಥವಾ ಕಾಮಗಾರಿಯಲ್ಲಿ ಲೋಪವೆಸಗಿದರೆ ಯಾವುದೇ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಅ ಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. ಸಾಮಾನ್ಯವಾಗಿ ಯೋಜನಾ ಇಲಾಖೆ ಮುಖ್ಯಮಂತ್ರಿಗಳ ಬಳಿ ಇರುತ್ತಿತ್ತು. ಸಮಯದ ಅಭಾವದಿಂದ ಸರಿಯಾಗಿ ಎಲ್ಲವವನ್ನೂ ಗಮನಿಸಲು ಸಾಧ್ಯವಾಗುತ್ತಿರಲಿಲ್ಲ. ಮುಖ್ಯಮಂತ್ರಿಗಳು ಆ ಇಲಾಖೆಯನ್ನು ನನಗೆ ನೀಡಿ ಜವಾಬ್ದಾರಿ ವಹಿಸಿದ್ದಾರೆ.
ಹೀಗಾಗಿ ಸುಮ್ಮನೆ ಕೂರಲು ಸಾಧ್ಯವಿಲ್ಲ. ಪ್ರತಿ ಜಿಲ್ಲೆಗೆ ತೆರಳಿ ಪರಿಶೀಲನೆ ನಡೆಸುತ್ತೇನೆ. ಕೂಲಂಕುಷವಾಗಿ ಎಲ್ಲವನ್ನೂ ಗಮನಿಸಿ ಅನುದಾನ ಬಿಡುಗಡೆ ಹಾಗೂ ಅನುದಾನ ಬಳಕೆಯನ್ನು ಗಮನಿಸುತ್ತೇನೆ ಎಂದು ಸಚಿವ ಡಾ| ನಾರಾಯಣಗೌಡ ತಿಳಿಸಿದರು.
ಕೃಷಿಹೊಂಡ ಫಲಾನುಭವಿಗಳ ಮಾಹಿತಿ ನೀಡಿ: ಕೃಷಿಹೊಂಡಗಳನ್ನು ವೈಜ್ಞಾನಿಕವಾಗಿ ನಿರ್ಮಿಸಬೇಕು. ಕೃಷಿ ಹೊಂಡ ಫಲಾನುಭವಿಗಳ ಸಂಪೂರ್ಣ ಮಾಹಿತಿಯನ್ನು ಶಾಸಕರಿಗೆ ನೀಡಬೇಕು ಎಂದು ಸಚಿವರು ಸೂಚಿಸಿದರು. ಕೃಷಿಹೊಂಡ ತೆಗೆದು ಒಂದೇ ವರ್ಷದಲ್ಲೇ ಮುಚ್ಚುತ್ತಾರೆ. ಈ ಫಲಾನುಭವಿಗಳ ಆಯ್ಕೆಯಲ್ಲಿ ಅಕ್ರಮ ನಡೆಯುತ್ತದೆ. ಹಾಗಾಗಿ ಶಾಸಕರ ಗಮನಕ್ಕೆ ತರದೆ ಫಲಾನುಭವಿಗಳ ಆಯ್ಕೆ ಆಗಬಾರದು ಎಂದು ಜಂಟಿ ಕೃಷಿ ನಿರ್ದೇಶಕರಿಗೆ ತಿಳಿಸಿದರು.
ಜಿಲ್ಲೆಯಲ್ಲಿ ಕಳೆದ ಐದು ವರ್ಷದಲ್ಲಿ ನಿರ್ಮಾಣಗೊಂಡ ಕೃಷಿಹೊಂಡಗಳ ಸಂಪೂರ್ಣ ಮಾಹಿತಿ ಪಡೆದು, ಶಾಸಕರು ಸ್ಥಳ ಪರಿಶೀಲನೆ ಮಾಡಿ ಪರಿಶೀಲಿಸಬೇಕೆಂದರು. ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಜಯಲಕ್ಷ್ಮೀಬಾಯಿ ಮಾತನಾಡಿ, ಜಿಲ್ಲಾ ಪಂಚಾಯಿತಿ ಅನುದಾನದಲ್ಲಿ ಕಳೆದ ವರ್ಷ 2.72 ಕೋಟಿ ರೂ. ಅನುದಾನ ಬಿಡುಗಡೆಯಾಗಿತ್ತು. ಈ ಅನುದಾನವನ್ನು 10 ಯೋಜನೆಗಳಿಗೆ ಬಳಸಿದ್ದು, ಶೇ. 99 ಅನುದಾನ ಖರ್ಚಾಗಿದೆ.
ಉಳಿದ ಅನುದಾನದಲ್ಲಿ ಗ್ರಾಮೀಣ ಕ್ರೀಡಾಕೂಟ ಹಾಗೂ 150 ಮಕ್ಕಳಿಗೆ ವಿವಿ ಸಾಗರದಲ್ಲಿ ಜಲಸಾಹಸ ಶಿಬಿರ ಆಯೋಜಿಸಲಾಗಿದೆ. ಪ್ರಸಕ್ತ ವರ್ಷ 1.92 ಕೋಟಿ ರೂ. ಕ್ರಿಯಾ ಯೋಜನೆ ರೂಪಿಸಿದ್ದು, ಅನುಮೋದನೆಯ ಹಂತದಲ್ಲಿದೆ ಎಂದು ತಿಳಿಸಿದರು.
ಜಿಲ್ಲಾ ಕ್ರೀಡಾಂಗಣದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು 6 ಕೋಟಿ ರೂ. ಅನುದಾನದ ಅಗತ್ಯವಿದೆ ಎಂದು ಸಚಿವರ ಗಮನಕ್ಕೆ ತಂದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಜಿಲ್ಲೆಯಲ್ಲಿ ಕ್ರೀಡಾಂಗಣಗಳ ಅಭಿವೃದ್ಧಿಗೆ ಜಿಲ್ಲಾ ಖನಿಜ ಪ್ರತಿಷ್ಠಾನದ ನಿ ಧಿ (ಡಿಎಂಎಫ್) ಬಳಸುವಂತೆ ಸೂಚಿಸಿದರು. ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿ ಕಾರ್ಯದರ್ಶಿ ಬಸವರಾಜಪ್ಪ ವಿವಿಧ ಕಾಮಗಾರಿಗಳ ಮಾಹಿತಿ ನೀಡಿದರು.
ಸಭೆಯಲ್ಲಿ ಶಾಸಕ ಟಿ. ರಘುಮೂರ್ತಿ, ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಜೀವನ್ ಮೂರ್ತಿ, ಜಿಪಂ ಸಿಇಒ ಡಾ| ಕೆ. ನಂದಿನಿದೇವಿ, ಅಪರ ಜಿಲ್ಲಾಧಿ ಕಾರಿ ಇ. ಬಾಲಕೃಷ್ಣ, ಉಪವಿಭಾಗಾ ಧಿಕಾರಿ ಚಂದ್ರಯ್ಯ ಮತ್ತಿತರರು ಉಪಸ್ಥಿತರಿದ್ದರು.