ಚಿತ್ರದುರ್ಗ: ಭದ್ರಾ ಮೇಲ್ದಂಡೆ ರಾಷ್ಟ್ರೀಯ ಯೋಜನೆಯಾಗುವ ಪ್ರಕ್ರಿಯೆ ಕೊನೆಯ ಹಂತದಲ್ಲಿದ್ದು, ಆದಷ್ಟು ಶೀಘ್ರದಲ್ಲಿ ಎಲ್ಲಾ ಪ್ರಕ್ರಿಯೆಗಳು ಪೂರ್ಣಗೊಂಡು ರಾಷ್ಟ್ರೀಯ ಯೋಜನೆಯಾಗಿ ಘೋಷಣೆಯಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ. ಶ್ರೀರಾಮುಲು ತಿಳಿಸಿದರು.
ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹಿರೇಹಳ್ಳಿ ಬಳಿ ಮಂಗಳವಾರ ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿ ಪರಿಶೀಲಿಸಿ ಅವರು ಮಾತನಾಡಿದರು. ಜಿಲ್ಲೆಯ ಕುಡಿಯುವ ನೀರು ಮತ್ತು ನೀರಾವರಿ ಬೇಡಿಕೆ ನೀಗಿಸುವ ಸಲುವಾಗಿ ಭದ್ರಾ ಮೇಲ್ದಂಡೆ ಯೋಜನೆ ಜಾರಿಗೊಳಿಸುತ್ತಿದ್ದು, ಹಲವು ವರ್ಷಗಳಿಂದ ಭದ್ರಾ ಮೇಲ್ದಂಡೆ ಕಾಮಗಾರಿ ನಡೆಯುತ್ತಿದೆ. ಇದು ಸಾಕಷ್ಟು ವಿಳಂಬವಾಗುತ್ತಿರುವುದರಿಂದ ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ. ಮುಂದಿನ ಫೆಬ್ರವರಿ ತಿಂಗಳೊಳಗೆ ಕಾಮಗಾರಿ ಮುಕ್ತಾಯವಾಗಲಿದೆ ಎಂದರು.
ಭದ್ರಾ ಮೇಲ್ದಂಡೆ ಯೋಜನೆಯಿಂದ ಚಿತ್ರದುರ್ಗ, ತುಮಕೂರು, ಚಿಕ್ಕಮಗಳೂರು, ದಾವಣಗೆರೆ ಜಿಲ್ಲೆ ಸೇರಿದಂತೆ ಒಟ್ಟು 2,25,515 ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಕಲ್ಪಿಸುವುದು ಮತ್ತು 367 ಕೆರೆಗಳಿಗೆ ಶೇ.50ರಷ್ಟು ತುಂಬಿಸುವ ಉದ್ದೇಶವಿದೆ. ಚಿತ್ರದುರ್ಗ ಶಾಖಾ ಕಾಲುವೆಯ 120.82 ಕಿಮೀ (ಬೆಳಘಟ್ಟ ಗ್ರಾಮದಿಂದ) ಕವಲೊಡೆದು ಚಳ್ಳಕೆರೆ ಹಾಗೂ ಮೊಳಕಾಲ್ಮೂರು ತಾಲೂಕುಗಳಿಗೆ ಗುರುತ್ವಾಕರ್ಷಣೆಯ ಮೂಲಕ 59 ಕೆರೆಗಳಿಗೆ 1.412 ಟಿಎಂಸಿ ನೀರು ಹಂಚಿಕೆಯಾಗಿದ್ದು, ಭದ್ರಾ ಮೇಲ್ದಂಡೆ ಯೋಜನೆಯಿಂದ ಮೊದಲ ಆದ್ಯತೆಯಾಗಿ ರೈತರ ಹೊಲಗಳಿಗೆ ಹಾಗೂ ಕೆರೆಗಳಿಗೆ ನೀರು ಹರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ವಿವರಿಸಿದರು.
ಈ ಹಿಂದೆ ನೀಡಿರುವ ಆಶ್ವಾಸನೆಯಂತೆ ಕ್ಷೇತ್ರದ ಜನರಿಗೆ ತುಂಗಭದ್ರಾ ಹಿನ್ನೀರಿನಿಂದ ಕುಡಿಯುವ ನೀರು ಒದಗಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ತುಂಗಭದ್ರಾ ಹಿನ್ನೀರು ಯೋಜನೆ ಕಾಮಗಾರಿಗಳು ಬಹುತೇಕ ಪೂರ್ಣಗೊಂಡಿದ್ದು, ಜಾಕ್‌ವೆಲ್ ಮಾತ್ರ ಬಾಕಿ ಇದೆ. ಶೀಘ್ರದಲ್ಲೇ ಈ ಕಾಮಗಾರಿಯೂ ಮುಗಿಯಲಿದೆ. ಇದರೊಟ್ಟಿಗೆ ಭದ್ರಾ ಮೇಲ್ದಂಡೆ ಯೋಜನೆಯಿಂದ ಕ್ಷೇತ್ರದ ಎಲ್ಲ ಕೆರೆಗಳಿಗೆ ನೀರು ಹರಿಸಲಾಗುವುದು ಎಂದು ಸಚಿವರು ಭರವಸೆ ನೀಡಿದರು.
ಕಾಲಮಿತಿಯಲ್ಲಿ ಕಾಮಗಾರಿ ಮುಗಿಸಿ: ಭದ್ರಾ ಮೇಲ್ದಂಡೆ ಯೋಜನೆಗೆ ಸಂಬಂಧಿ ಸಿದಂತೆ ಭೂಸ್ವಾಧಿಧೀನ ಪ್ರಕ್ರಿಯೆಯಲ್ಲಿ ಸಮಸ್ಯೆಗಳು ಕಂಡುಬಂದಾಗ ಗಮನಕ್ಕೆ ತಂದರೆ ತುರ್ತಾಗಿ ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು.
ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಸಮಸ್ಯೆಯಾದರೆ ಅಧಿ ಕಾರಿಗಳ ತಂಡವನ್ನು ಕಳುಹಿಸಿ ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ. ನಿಗದಿ ತ ಅವ ಧಿಯೊಳಗೆ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಸಚಿವರು ಗುತ್ತಿಗೆದಾರರಿಗೆ ಸೂಚನೆ ನೀಡಿದರು.