Advertisement
ರೈತರ ಜೀವನದಿಯಾಗಿರುವ ಕಾವೇರಿ ನೀರಿನ ಹಕ್ಕಿಗಾಗಿ ಹೋರಾಟ ನಡೆಸಿ ಕಾವೇರಿ ಹಿತರಕ್ಷಣಾ ಸಮಿತಿ ಯ ಅಧ್ಯಕ್ಷರಾಗಿದ್ದುಕೊಂಡು ಕಾವೇರಿ ನೀರನ್ನು ಬೇರೆ ಕಡೆಗೆ ಕೊಡ ದಂತೆ ತಮ್ಮ ದಿಟ್ಟ ಹಾಗೂ ದಕ್ಷ ನಾಯಕತ್ವದಲ್ಲಿ ರೈತರ ಸಹಕಾರದೊಡನೆ ಉಳಿಸಿಕೊಂಡು ಹೋಗುತ್ತಿದ್ದರು. ರೈತರ ಪ್ರಮುಖ ಬೆಳೆಯಾದ ಕಬ್ಬಿಗೆ ಸೂಕ್ತ ಬೆಲೆ ಕೊಡಿಸಲು ಹಾಗೂ ಆರ್ಥಿಕ ಅಭಿವೃದ್ಧಿಗಾಗಿ ಭಾರತೀನಗರದಲ್ಲಿ ಚಾಮುಂಡೇಶ್ವರಿ ಸಕ್ಕರೆ ಕಾರ್ಖಾನೆ ಸ್ಥಾಪಿಸಿ ಆ ಭಾಗದ ರೈತರ ಕಣ್ಮಣಿಯಾಗಿದ್ದರು.
Related Articles
Advertisement
ರಾಜಕೀಯ ಪ್ರವೇಶ: 1959ರಲ್ಲಿ ತಾಲೂಕು ಬೋರ್ಡ್ ಚುನಾವಣೆ ಬಂದಾಗ, ಅಂದು ಮಂಡ್ಯ ಮತ್ತು ಮದ್ದೂರಿನ ಕಾಂಗ್ರೆಸ್ ಪಕ್ಷದ ಜನಪ್ರಿಯ ನಾಯಕರಾಗಿದ್ದ ಕೆ.ವಿ.ಶಂಕರಗೌಡ ಮತ್ತು ಎಚ್. ಕೆ.ವೀರಣ್ಣಗೌಡರು ಕಾಂಗ್ರೆಸ್‌ನಲ್ಲಿ ಚಟುವಟಿಕೆಯಿಂದ ಓಡಾಡುತ್ತಿದ್ದ ಮಾದೇ ಗೌಡರನ್ನು ಕರೆದು, ತಾಲೂಕು ಬೋರ್ಡ್ ಚುನಾವಣೆಗೆ ನಿಲ್ಲಿಸಿದರು. ಇದರಲ್ಲಿ ಗೆದ್ದು ಬಂದರು. ಇದು ಗೌಡರ ರಾಜಕೀಯದಲ್ಲಿ ಸಾಮಾನ್ಯ ವಾದ ಗೆಲುವಲ್ಲ. ಅವರ ಮುಂದಿನ ಗೆಲುವಿನ ಮಾಲೆಗೆ ನಾಂದಿಯಾಯಿತು. ನಂತರ ಮಾದೇಗೌಡರ ಬದುಕು 3 ದಶಕಗಳ ಕಾಲ ಬರೀ ಗೆಲುವಾಗಿತ್ತು. 1962ರಲ್ಲಿ ವಿಧಾನಸಭೆ ಚುನಾವಣೆ ಬಂದಾಗ, ಮಳವಳ್ಳಿ ಕ್ಷೇತ್ರದ ಶಾಸಕರಾಗಿದ್ದ ಹಿಟ್ಟನಹಳ್ಳಿ ಕೊಪ್ಪಲಿನ ಎಚ್.ವಿ.ವೀರೇಗೌಡರು ಬಿಟ್ಟು ಕೊಟ್ಟ ಸ್ಥಾನಕ್ಕೆ ಮಾದೇಗೌಡರು ನಿಂತು ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾದರು.
ಆಗ ಮಾದೇಗೌಡರಿಗೆ ಕೇವಲ 32 ವರ್ಷ. ಮಳವಳ್ಳಿ, ಕಿರುಗಾವಲು ಕ್ಷೇತ್ರದ ಕೇಂದ್ರವಾದ ಕುಗ್ರಾಮ ಕಾಳ ಮುದ್ದನದೊಡ್ಡಿ ಯನ್ನು ಕೇಂದ್ರವನ್ನಾಗಿಟ್ಟುಕೊಂಡು ಒಂದೊಂದೇ ಜನಪರ ಕೆಲಸ ಮಾಡತೊಡಗಿದರು. ಕೃಷಿ ಕ್ಷೇತ್ರ, ಆರ್ಥಿಕ ಕ್ಷೇತ್ರ, ಶಿಕ್ಷಣ ಕ್ಷೇತ್ರಗಳ ಬಗ್ಗೆ ಗೌಡರು ಕೈಗೊಂಡ ಪ್ರಗತಿಪರ ಕೆಲಸಗಳು ಜನಮೆಚ್ಚುಗೆ ಗಳಿಸಿದ್ದವು. ಇದಕ್ಕೆ ಅವರು ಮತ್ತೆ ಮತ್ತೆ ಚುನಾವಣೆಗಳಲ್ಲಿ ಗೆಲುವು ಸಾಧಿ ಸುತ್ತಿದ್ದದ್ದೇ ಪ್ರತ್ಯಕ್ಷ ಸಾಕ್ಷಿ. ಚುನಾವಣಾ ಸಮಯದಲ್ಲಿ ಖರ್ಚಿಗೆಂದು ಗೌಡರಿಗೆ ತಾವೇ ಕಾಸು ಕೊಟ್ಟು ಮತವನ್ನೂ ಕೊಡುತ್ತಿದ್ದರು. 1962ರಿಂದ 1989ರವರೆಗೆ ಮಾದೇಗೌಡರು ಸತತವಾಗಿ 6 ಬಾರಿ ಕಿರುಗಾವಲು ಕ್ಷೇತ್ರದಿಂದ ವಿಧಾನಸಭೆಗೆ ಆಯ್ಕೆಯಾಗಿದ್ದರು. ಇದು ಯಾವುದೇ ರಾಜಕಾರಣಿಗಳ ಬದುಕಿನಲ್ಲಿ ಮಹತ್ವದ ದಾಖಲೆಯೂ ಹೌದು. ಜನ ಅವರನ್ನು ಸೋಲಿಲ್ಲದ ಸರದಾರ ಎಂದು ಕರೆದರು.
ಆರ್.ಗುಂಡೂರಾವ್ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭ ದಲ್ಲಿ ಮಾದೇಗೌಡರು ಅರಣ್ಯ ಮತ್ತು ಗಣಿ ಅಭಿವೃದ್ಧಿ ಮಂತ್ರಿಗಳಾಗಿ ಗಮ ನಾರ್ಹ ಸೇವೆ ಸಲ್ಲಿಸಿದರು. 1989ರಲ್ಲಿ ಗೌಡರ ರಾಜಕೀಯ ಕಿರು ಗಾವಲು ಕ್ಷೇತ್ರದಿಂದ ಮಂಡ್ಯ ಜಿಲ್ಲೆಗೆ ವಿಸ್ತರಿಸಿ ಸಂಸದರಾಗಿ ಆಯ್ಕೆ ಯಾದರು. ಮತ್ತೆ 1991ರಲ್ಲಿ ನಡೆದ ಮರು ಚುನಾವಣೆಯಲ್ಲೂ ಜನತೆ ಗೌಡರನ್ನು ಸಂಸದರಾಗಿ ಆಯ್ಕೆ ಮಾಡಿದರು. ಹೀಗೆ 3 ದಶಕಗಳ ಕಾಲ ಜನ ಗೌಡರಿಗೆ ಮತ ನೀಡಿ ಗೆಲ್ಲಿಸಿದರು. ಪ್ರತಿಯಾಗಿ ಮಾದೇಗೌಡರು ತಮ್ಮ ಕ್ಷೇತ್ರದ ಜಿಲ್ಲೆಯ ಜನತೆಗೆ ಶಾಲೆ, ಕಾಲೇಜು, ಕಾರ್ಖಾನೆ, ಆಸ್ಪತ್ರೆ, ದೇವಸ್ಥಾನ ಹಲವು ಅಭಿವೃದ್ಧಿ ಕಾರ್ಯ ಮಾಡಿದ್ದಾರೆ.