ಚಿತ್ರದುರ್ಗ: ನಗರದಲ್ಲಿ ನಡೆಯುತ್ತಿರುವ ರಸ್ತೆ ಕಾಮಗಾರಿಗಳಿಗೆ ಅಡ್ಡವಾಗಿರುವ ಕಟ್ಟಡಗಳ ಒತ್ತುವರಿಯನ್ನು ಶೀಘ್ರ ತೆರವು ಮಾಡುವಂತೆ ಜಿಲ್ಲಾಧಿ ಕಾರಿ ಕವಿತಾ ಎಸ್. ಮನ್ನಿಕೇರಿ, ನಗರಸಭೆ ಅಧಿ ಕಾರಿಗಳಿಗೆ ಸೂಚಿಸಿದರು.
ಶನಿವಾರ ಬೆಳ್ಳಂಬೆಳಿಗ್ಗೆ ಅಧಿಕಾರಿಗಳ ತಂಡದೊಂದಿಗೆ ಚಳ್ಳಕೆರೆ ಗೇಟ್‌ನಿಂದ ಹೊಳಲ್ಕೆರೆ ರಸ್ತೆಯ ಸಂಗೊಳ್ಳಿ ರಾಯಣ್ಣ ವೃತ್ತದವರೆಗೆ ಸಂಚರಿಸಿ ನಗರದಲ್ಲಿ ನಡೆಯುತ್ತಿರುವ ರಸ್ತೆ ಅಭಿವೃದ್ಧಿ ಹಾಗೂ ಅಗಲೀಕರಣ ಕಾಮಗಾರಿಗಳನ್ನು ಪರಿಶೀಲಿಸಿ ಈ ಸೂಚನೆ ನೀಡಿದರು.
ನಗರದ ಬಿ.ಡಿ. ರಸ್ತೆಯ ಚಳ್ಳಕೆರೆ ಗೇಟ್, ಪಂಚಾಚಾರ್ಯ ಕಲ್ಯಾಣಮಂಟಪದ ಎದುರು, ಸರ್ಕಾರಿ ವಿಜ್ಞಾನ ಕಾಲೇಜು ಮುಂಭಾಗ, ಮದಕರಿ ನಾಯಕ ವೃತ್ತ, ಸ್ಟೇಟ್ ಬ್ಯಾಂಕ್ ಇಂಡಿಯಾ ವೃತ್ತ, ಕೆಎಸ್ ಆರ್‌ಟಿಸಿ ಬಸ್ ನಿಲ್ದಾಣದ ರಸ್ತೆ, ಅಂಚೆ ಕಚೇರಿ ರಸ್ತೆ, ನೀಲಕಂಠೇಶ್ವರ ದೇವಸ್ಥಾನ ರಸ್ತೆ, ಹೊಳಲ್ಕೆರೆ ರಸ್ತೆಯ ಗೌರಸಂದ್ರ ಮಾರಮ್ಮ ದೇವಸ್ಥಾನ ಮತ್ತು ಕನಕ ವೃತ್ತ ಸೇರಿದಂತೆ ನಗರದ ವಿವಿಧೆಡೆ ನಡೆಯುತ್ತಿರುವ ರಸ್ತೆ ಅಗಲೀಕರಣ ಕಾಮಗಾರಿಗಳಿಗೆ ಭೇಟಿ ನೀಡಿ ರಸ್ತೆ ಅಗಲೀಕರಣದ ಅಡೆ ತಡೆಗಳನ್ನು ಪರಿಶೀಲಿಸಿದರು.
ಚಿತ್ರದುರ್ಗ ನಗರದ ಎಸ್‌ಬಿಐ ವೃತ್ತದ ರಸ್ತೆ ಕಾಮಗಾರಿ ವೀಕ್ಷಿಸಿದ ಜಿಲ್ಲಾಧಿ ಕಾರಿಗಳು, ಎಸ್‌ಬಿಐ ಬ್ಯಾಂಕ್ ಬಳಿ ಪ್ರತಿ ನಿತ್ಯ ನೂರಾರು ಸಾರ್ವಜನಿಕರು ವಹಿವಾಟು ನಡೆಸಲು ಆಗಮಿಸುತ್ತಿರುತ್ತಾರೆ. ಆದರಲ್ಲೂ ಹಿರಿಯ ನಾಗರಿಕರು, ಗರ್ಭಿಣಿಯರು ಬರುವುದರಿಂದ ರಸ್ತೆ ದಾಟಲು ಹರಸಾಹಸ ಪಡುತ್ತಾರೆ. ಹಾಗಾಗಿ ಸಾರ್ವಜನಿಕರ ಸಂಚಾರಕ್ಕೆ ಯಾವುದೇ ತೊಂದರೆಯಾಗದಂತೆ ಅದಷ್ಟು ತ್ವರಿತವಾಗಿ ರಸ್ತೆ ಕಾಮಗಾರಿ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ತಾಕೀತು ಮಾಡಿದರು.
ಈ ಸಂದರ್ಭದಲ್ಲಿ ಲೋಕೋಪ ಯೋಗಿ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ಸತೀಶ್‌ಬಾಬು, ನಗರಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಸತೀಶ್ ರೆಡ್ಡಿ, ಲೋಕೋಪಯೋಗಿ ಇಲಾಖೆಯ ಜಿ. ಕೃಷ್ಣಪ್ಪ, ಬೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ತಿಮ್ಮಣ್ಣ, ಲೋಕೋಪಯೋಗಿ ಇಲಾಖೆಯ ಸಹಾಯಕ ಇಂಜಿನಿಯರ್ ಗೋಪಾಲ್, ನಗರಸಭೆಯ ಎಂಜಿನಿಯರ್ ಮನೋಹರ್ ಸೇರಿದಂತೆ ಮತ್ತಿತರರು ಹಾಜರಿದ್ದರು.