ಚಿತ್ರದುರ್ಗ: ಕೋವಿಡ್-19 ಮೊದಲ ಅಲೆಗಿಂತ ಎರಡನೇ ಅಲೆ ಸಾಕಷ್ಟು ನಷ್ಟ ಉಂಟು ಮಾಡಿದೆ. ಈ ಹಿನ್ನೆಲೆಯಲ್ಲಿ ಸಂಭಾವ್ಯ ಮೂರನೇ ಅಲೆ ಬರಬಹುದು ಎಂದು ತಜ್ಞರು ಸಲಹೆ ನೀಡಿದ್ದಾರೆ. ಮೂರನೇ ಅಲೆ ತಡೆಗಟ್ಟುವ ನಿಟ್ಟಿನಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ. ಶ್ರೀರಾಮುಲು, ಅ ಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾಧಿ ಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಕೋವಿಡ್-19 ಸಂಭಾವ್ಯ ಮೂರನೇ ಅಲೆಯ ಹಿನ್ನೆಲೆಯಲ್ಲಿ ರೋಗ ತಡೆ ಹಾಗೂ ನಿಯಂತ್ರಣ ಕ್ರಮಗಳು ಮತ್ತು ಹೆಚ್ಚಿನ ಮಳೆಯಿಂದ ಉಂಟಾಗಿರುವ ಹಾನಿಗಳು ಮತ್ತು ಪರಿಹಾರ ಕ್ರಮಗಳ ಕುರಿತು ಚರ್ಚಿಸಲು ಹಮ್ಮಿಕೊಂಡಿದ್ದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಕೋವಿಡ್-19 ಸಂಭಾವ್ಯ ಮೂರನೇ ಅಲೆ ತಡೆಗಟ್ಟುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ಅಗತ್ಯ ಸಿದ್ಧತೆ ಕೈಗೊಳ್ಳಬೇಕಾಗಿದೆ.
ಈ ನಿಟ್ಟಿನಲ್ಲಿ ಹೆಚ್ಚಿನ ಜನರಿಗೆ ಲಸಿಕೆ ಹಾಕುವುದು ಸೇರಿದಂತೆ ಕೋವಿಡ್ -19ಗೆ ಚಿಕಿತ್ಸೆಗೆ ಅಗತ್ಯವಿರುವ ಸಿಬ್ಬಂದಿ, ಸೌಲಭ್ಯಗಳು, ತರಬೇತಿ, ಕೋವಿಡ್ ಕೇರ್ ಸೆಂಟರ್‌ಗಳ ಅಗತ್ಯತೆ, ಔಷ ಧ ಸೇರಿದಂತೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ಸಿದ್ಧತೆ ಮಾಡಿಕೊಳ್ಳಬೇಕು ಎಂದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿ ಕಾರಿ ಡಾ| ರಂಗನಾಥ್ ಮಾತನಾಡಿ, ಕೋವಿಡ್ ಮೂರನೇ ಅಲೆಯ ಹಿನ್ನೆಲೆಯಲ್ಲಿ ಜಿಲ್ಲಾ ಆಸ್ಪತ್ರೆಯಲ್ಲಿ ನೂರು ಬೆಡ್‌ಗಳು ಸೇರಿದಂತೆ ತಾಲೂಕು, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಆಕ್ಸಿಜನ್‌ನೆಟೆಡ್ ಬೆಡ್‌ಗಳ ಸಂಖ್ಯೆಯನ್ನು ಹೆಚ್ಚಿಸಲಾಗಿದೆ. ಹಾಗೂ ಜಿಲ್ಲಾ ಆಸ್ಪತ್ರೆಯಲ್ಲಿ ಮೂರು ಘಟಕಗಳು ಹಾಗೂ ಎಲ್ಲಾ ತಾಲ್ಲೂಕು ಆಸ್ಪತ್ರೆಯಲ್ಲಿ ಆಕ್ಸಿಜನ್ ಉತ್ಪಾದನಾ ಘಟಕಗಳ ಸಿವಿಲ್ ಕಾಮಗಾರಿ ಮುಕ್ತಾಯವಾಗಿದೆ. ಮಷಿನರಿ ಅಳವಡಿಸುವ ಕಾಮಗಾರಿ ನಡೆಯುತ್ತಿದೆ. ಮುಂದಿನ 15 ದಿನಗಳಲ್ಲಿ ಪೂರ್ಣಗೊಳ್ಳಲಿದೆ ಎಂದರು.
ಆದಷ್ಟು ಬೇಗ ಕಾಮಗಾರಿ ಮುಗಿಯುವಂತೆ ನೋಡಿಕೊಳ್ಳಬೇಕು ಮತ್ತು ಅಗತ್ಯ ವೈದ್ಯರ ನೇಮಕ ಸೇರಿದಂತೆ ಎಲ್ಲಾ ವ್ಯವಸ್ಥೆ ಮಾಡಿಕೊಳ್ಳಲು ಸಚಿವರು ತಿಳಿಸಿದರು. ಜಿಲ್ಲೆಯಲ್ಲಿ ಈವರೆಗೆ 35,946 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. 189 ಸಾವು ಸಂಭವಿಸಿದ್ದು, ಮರಣ ಪ್ರಮಾಣ 0.53 ಇದೆ. ಬೇರೆ ಜಿಲ್ಲೆಗೆ ಹೋಲಿಕೆ ಮಾಡಿದರೆ ನಮ್ಮ ಜಿಲ್ಲೆಯ ಮರಣ ಪ್ರಮಾಣದಲ್ಲಿ ಕಡಿಮೆ ಇದೆ. ಸೋಂಕಿತರ ಗುಣಮುಖ ಪ್ರಮಾಣ ಶೇ. 98 ರಷ್ಟಿದೆ. ಜಿಲ್ಲೆಯಲ್ಲಿ ಪಾಸಿಟಿವಿಟಿ ಪ್ರಸ್ತುತ ಪ್ರಮಾಣ ಶೇ. 0.75 ಇದೆ ಎಂದು ಮಾಹಿತಿ ನೀಡಿದರು. ಮೊದಲ ಮತ್ತು ಎರಡನೇ ಅಲೆಯಲ್ಲಿ ಸಾಕಷ್ಟು ಸಿಲಿಂಡರ್ ಹಾಗೂ ಆಕ್ಸಿಜನ್ ಕಾನ್ಸಂಟ್ರೇಟಸ್ ìಗಳನ್ನು ದಾನಿಗಳು ಕೊಡುಗೆಯಾಗಿ ನೀಡಿದ್ದಾರೆ ಹಾಗೂ ಸರ್ಕಾರದಿಂದಲೂ ಒದಗಿಸಲಾಗಿದೆ. ಹಾಗಾಗಿ ಮುಂಬರುವ ದಿನಗಳಲ್ಲಿ ಆಕ್ಸಿಜನ್ ಸಮಸ್ಯೆ ಕಡಿಮೆಯಾಗಲಿದೆ. ಜಿಲ್ಲಾಸ್ಪತ್ರೆ, ತಾಲೂಕು ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಹೆಚ್ಚುವರಿ ಹಾಸಿಗೆ ಸೌಲಭ್ಯಕ್ಕೆ ಕ್ರಮ ವಹಿಸಲಾಗಿದೆ. ಮೂರನೇ ಅಲೆ ಮಕ್ಕಳಿಗೆ ಬಾಧಿಸಬಹುದು ಎಂದು ತಜ್ಞರು ಸಲಹೆ ನೀಡಿದ್ದಾರೆ.
ಈ ನಿಟ್ಟಿನಲ್ಲಿ ಮಕ್ಕಳ ತಜ್ಞರು ಸೇರಿದಂತೆ ಎಲ್ಲ ರೀತಿಯ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು. 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೋವಿಡ್ ಲಸಿಕೆಯನ್ನು ಹಾಕಿಸಬೇಕು. ಚಳ್ಳಕೆರೆ ಹಾಗೂ ಮೊಳಕಾಲ್ಮೂರು ತಾಲೂಕುಗಳಲ್ಲಿ ಲಸಿಕಾ ಪ್ರಮಾಣ ಕಡಿಮೆಯಾಗಿದ್ದು ಎಲ್ಲಾ ಅ ಧಿಕಾರಿಗಳು ಗ್ರಾಮ, ವಾರ್ಡ್‌ಗಳಿಗೆ ಭೇಟಿ ನೀಡಿ ಜನರಿಗೆ ಲಸಿಕೆ ಹಾಕಿಸಲು ಸೂಚನೆ ನೀಡಿದರು. ಜಿಲ್ಲಾ ಧಿಕಾರಿ ಕವಿತಾ ಎಸ್. ಮನ್ನಿಕೇರಿ ಮಾತನಾಡಿ, ಪ್ರಕೃತಿ ವಿಕೋಪದಿಂದಾಗಿ ಜಿಲ್ಲೆಯಲ್ಲಿ 4 ಜೀವಹಾನಿ ಪ್ರಕರಣಗಳು ವರದಿಯಾಗಿವೆ. ಜೀವಹಾನಿ ಪ್ರಕರಣಗಳಿಗೆ ಸಂಬಂಧಿಸಿದಂತೆ ಪರಿಹಾರ ನೀಡಲಾಗಿದೆ. ಹೊಸದುರ್ಗ ತಾಲೂಕಿನಲ್ಲಿ ನಡೆದ ಜೀವಹಾನಿ ಪ್ರಕರಣಕ್ಕೆ ಸಂಬಂ ಧಿಸಿದಂತೆ ಪರಿಹಾರ ನೀಡುವ ಕಾರ್ಯ ಪ್ರಕ್ರಿಯೆಯಲ್ಲಿದೆ. ಜಿಲ್ಲೆಯಲ್ಲಿ 11 ದೊಡ್ಡ ಜಾನುವಾರುಗಳು ಮರಣ ಹೊಂದಿವೆ. ಕುರಿ, ಮೇಕೆ ಸೇರಿದಂತೆ 73 ಜಾನುವಾರುಗಳಿಗೆ ಹಾನಿಯಾಗಿದೆ. ಪರಿಹಾರ ನೀಡಲಾಗಿದೆ. ಮಳೆಯಿಂದಾಗಿ ಎರಡು ಮನೆಗಳು ಪೂರ್ಣ ಪ್ರಮಾಣದಲ್ಲಿ ಹಾನಿಯಾಗಿವೆ. 117 ಮನೆಗಳಿಗೆ ಭಾಗಶಃ ಹಾನಿಯಾಗಿದ್ದು, ಪರಿಹಾರ ನೀಡಲಾಗುವುದು ಎಂದರು.
ಪ್ರಸಕ್ತ ಸಾಲಿನಲ್ಲಿ ಮಳೆಯಿಂದಾಗಿ ಸುಮಾರು 4902 ಹೆಕ್ಟೇರ್ ಈರುಳ್ಳಿ ಬೆಳೆ ಹಾನಿಯಾಗಿದೆ ಎಂದು ತೋಟಗಾರಿಕೆ ಇಲಾಖೆ ಉಪನಿರ್ದೇಶಕರು ಸಭೆಗೆ ಮಾಹಿತಿ ನೀಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ರೈತರು ಒಂದು ಎಕರೆ ಪ್ರದೇಶದಲ್ಲಿ ಈರುಳ್ಳಿ ಬೆಳೆ ಬೆಳೆಯಲು ಸುಮಾರು 50 ಸಾವಿರ ರೂ. ವೆಚ್ಚ ಮಾಡುತ್ತಾರೆ. ಹಾನಿಗಳಿಂದ ರೈತರು ಸುಧಾರಿಸಿಕೊಳ್ಳುವುದು ಕಷ್ಟ ಸಾಧ್ಯ. ಈ ನಿಟ್ಟಿನಲ್ಲಿ ರೈತರಿಗೆ ಸಕಾಲದಲ್ಲಿ ಮಾಹಿತಿ ನೀಡಬೇಕೆಂದು ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾ ಧಿಕಾರಿ ಡಾ| ಕೆ. ನಂದಿನಿದೇವಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ. ರಾಧಿ ಕಾ, ಅಪರ ಜಿಲ್ಲಾಧಿ ಕಾರಿ ಇ. ಬಾಲಕೃಷ್ಣ, ಉಪವಿಭಾಗಾಧಿ ಕಾರಿ ಚಂದ್ರಯ್ಯ ಸೇರಿದಂತೆ ಆರೋಗ್ಯ ಇಲಾಖೆ ಅ ಧಿಕಾರಿಗಳು ಹಾಗೂ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅ ಧಿಕಾರಿಗಳು ಉಪಸ್ಥಿತರಿದ್ದರು.