ಬಿಜೆಪಿ ನಾಯಕರು, ಸಚಿವರು, ಶಾಸಕರ ನಿಯೋಗ, ಬುಧವಾರ ಸಂಜೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿತು.
Advertisement
ಚಿತ್ರದುರ್ಗದಲ್ಲಿ ಬಹುದಿನಗಳಿಂದ ನನೆಗುದಿಗೆ ಬಿದ್ದಿರುವ ಮೆಡಿಕಲ್ ಕಾಲೇಜು ಪ್ರಸ್ತಾವನೆಗೆ ಸಂಬಂಧಪಟ್ಟಂತೆ ಚರ್ಚಿಸಲಾಯಿತು. ನಿಯೊಗದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಿ. ಶ್ರಿರಾಮುಲು, ಬಿಜೆಪಿ ಜಿಲ್ಲಾಧ್ಯಕ್ಷ ಎ.ಮುರುಳಿ, ಶಾಸಕರಾದ ಜಿ.ಎಚ್. ತಿಪ್ಪಾರೆಡ್ಡಿ, ಗೂಳಿಹಟ್ಟಿ ಡಿ. ಶೇಖರ್, ಪೂರ್ಣಿಮಾ ಶ್ರೀನಿವಾಸ್, ಬಿಜೆಪಿ ರಾಜ್ಯ ಕಾರ್ಯದರ್ಶಿ ಕೆ.ಎಸ್. ನವೀನ್, ರಾಜ್ಯ ಖನಿಜ ನಿಗಮ ಅಧ್ಯಕ್ಷ ಲಿಂಗಮೂರ್ತಿ, ಕರ್ನಾಟಕಅನುಸೂಚಿತ ಜಾತಿ/ಅನುಸೂಚಿತ ಬುಡಕಟ್ಟು ಆಯೋಗದ ರಾಜ್ಯ ಸದಸ್ಯ ಜಯಪಾಲಯ್ಯ ಇದ್ದರು. ಚಿತ್ರದುರ್ಗ ನಗರದಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆಗೆ ಸಂಬಂಧಪಟ್ಟಂತೆ ಅಗತ್ಯ ಮೂಲ ಸೌಕರ್ಯಗಳು ಸಿದ್ಧವಾಗಿದ್ದು, ವೈದ್ಯಕೀಯ ಶಿಕ್ಷಣ ಸಚಿವ ಡಾ| ಸುಧಾಕರ್
ಭೇಟಿ ನೀಡಿ ಸ್ಥಳ ಪರಿಶೀಲಿಸಿ ಕಾಲೇಜು ಆರಂಭಿಸಲು ಸಹಕಾರ ನೀಡುವುದಾಗಿ ಭರವಸೆ ನೀಡಿದ್ದರು. ಅದರ ಪ್ರಕಾರ ಆಯವ್ಯಯದಲ್ಲಿ ಮೆಡಿಕಲ್ ಕಾಲೇಜು ಆರಂಭಕ್ಕೆ ಅನುದಾನ ಮೀಸಲಿಡಲು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ನಿಯೋಗದಲ್ಲಿದ್ದವರು ಒತ್ತಾಯಿಸಿದರು.