Advertisement
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಘಟನೆ ಗಟ್ಟಿಗೊಳಿಸುವ ಉದ್ದೇಶದಿಂದ ನಡೆಯಲಿರುವ ಯುವ ಮೋರ್ಚಾ ರಾಜ್ಯ ಕಾರ್ಯಕಾರಿಣಿಯಲ್ಲಿ ರಾಜ್ಯದ ಪದಾಧಿಕಾರಿಗಳು ಆಗಮಿಸಲಿದ್ದಾರೆ ಎಂದರು.
ಕುಮಾರ್ ಕಟೀಲ್ ಹಾಗೂ ಯುವ ಮೋರ್ಚಾ ರಾಜ್ಯಾಧ್ಯಕ್ಷ ಸಂದೀಪ್ ಭಾಗವಹಿಸಲಿದ್ದಾರೆ ಎಂದು
ಹೇಳಿದರು.
ಯುವ ಮೋರ್ಚಾದ 156 ಪದಾಧಿ ಕಾರಿಗಳು ಕಾರ್ಯಕಾರಿಣಿಯಲ್ಲಿ ಪಾಲ್ಗೊಳ್ಳಲಿದ್ದು, ಅಂದು ಬೆಳಗ್ಗೆ 9.30 ಕ್ಕೆ ನೀಲಕಂಠೇಶ್ವರಸ್ವಾಮಿ ದೇವಸ್ಥಾನದಿಂದ ಮೆರವಣಿಗೆ ಹೊರಟು ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಗುವುದು. ಒನಕೆ ಓಬವ್ವ ವೃತ್ತದಲ್ಲಿ ಮೆರವಣಿಗೆ ಮುಕ್ತಾಯವಾಗಲಿದೆ. ಜಿಲ್ಲೆಯ ಐವರು ಶಾಸಕರು, ಸಂಸದರು, ವಿಧಾನ ಪರಿಷತ್ ಸದಸ್ಯರು, ಪಕ್ಷದ ಮುಖಂಡರು ಕಾರ್ಯಕರ್ತರು ಮೆರವಣಿಗೆಯಲ್ಲಿ ಭಾಗವಹಿಸಲಿದ್ದಾರೆ ರಾಜ್ಯ ಕಾರ್ಯಕಾರಿಣಿಗೆ ಈಗಾಗಲೆ 19 ವಿಭಾಗಗಳನ್ನು ರಚಿಸಿದ್ದು, ಒಂದೊಂದು ವಿಭಾಗವೂ ಕಾರ್ಯಕಾರಿಣಿಯ ಸಿದ್ಧತೆ ನೋಡಿಕೊಳ್ಳಲಿದೆ ಎಂದರು.
Related Articles
ನಡೆಯುತ್ತಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳನ್ನು ಜನತೆಗೆ ತಲುಪಿಸುವುದು. ರಾಷ್ಟ್ರ ಭಕ್ತರನ್ನು ಸೃಷ್ಟಿಸುವ ಕೆಲಸ ಪಕ್ಷದಿಂದ ಆಗುತ್ತಿದೆ ಎಂದು ಹೇಳಿದರು.
Advertisement
ಬಿಜೆಪಿ ಯುವ ಮೋರ್ಚಾ ರಾಜ್ಯ ಉಪಾಧ್ಯಕ್ಷ ಹರ್ಷಿತ್ ಮಾತನಾಡಿ, ಮುಂದಿನ ಮೂರು ವರ್ಷಗಳಲ್ಲಿ ಯುವ ಮೋರ್ಚಾ ಏನೇನು ಕೆಲಸ ಮಾಡಬೇಕು ಎನ್ನುವ ಅಜೆಂಡಾ ಇಟ್ಟುಕೊಂಡು ರಾಜ್ಯ ಯುವ ಮೋರ್ಚಾ ಕಾರ್ಯಕಾರಿಣಿಯಲ್ಲಿ ಪದಾಧಿಕಾರಿಗಳಿಗೆ ಮಾರ್ಗದರ್ಶನ ಮಾಡಲಾಗುವುದು ಎಂದರು.
ಶಾಸಕ ಜಿ.ಎಚ್.ತಿಪ್ಪಾರೆಡ್ಡಿ, ವಿಭಾಗ ಪ್ರಭಾರಿ ಜಿ.ಎಂ.ಸುರೇಶ್, ಪ್ರಧಾನ ಕಾರ್ಯದರ್ಶಿ ಜಯಪಾಲ್, ಮುಖಂಡರಾದ ಎಂ.ಎ.ಸೇತುರಾಂ, ಮಲ್ಲಿಕಾರ್ಜುನ್, ಮಂಜುನಾಥ್, ವಕ್ತಾರರಾದ ನಾಗರಾಜ್ ಬೇದ್ರೆ, ದಗ್ಗೆ ಶಿವಪ್ರಕಾಶ್ ಇದ್ದರು.
ಓದಿ : ಇಂದು ಸಂಜೆ ಇನ್ಸ್‌ಪೆಕ್ಟರ್ ವಿಕ್ರಂ ಟ್ರೇಲರ್ ರಿಲೀಸ್