Advertisement

ಇಂಧನ ಬೆಲೆ ಏರಿಕೆಗೆ ಆಕ್ರೋಶ

03:44 PM Feb 19, 2021 | Team Udayavani |

ಹೊಸದುರ್ಗ: ಪೆಟ್ರೋಲ್‌ ಹಾಗೂ ಡಿಸೇಲ್‌ ಬೆಲೆ ಏರಿಕೆಯಿಂದ ದಿನ ನಿತ್ಯದ ವಸ್ತುಗಳ ಬೆಲೆ ಏರಿಕೆಯಾಗಿ ಜನರ ಜೀವನ ನಿರ್ವಹಣೆ ಕಷ್ಟವಾಗಿದೆ ಎಂದು ಆರೋಪಿಸಿ ಹಾಗೂ ರೈತ ವಿರೋಧಿ  ಕೃಷಿ ಕಾಯ್ದೆಗಳನ್ನು ವಿರೋಧಿ ಸಿ ಬ್ಲಾಕ್‌ ಕಾಂಗ್ರೆಸ್‌ ವತಿಯಿಂದ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು.

Advertisement

ಮಾಜಿ ಶಾಸಕ ಬಿ.ಜಿ. ಗೋವಿಂದಪ್ಪ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ದುರಾಡಳಿತಕ್ಕೆ ದೇಶದ ಅರ್ಥ ವ್ಯವಸ್ಥೆ ಕುಸಿದಿದೆ. ಪ್ರತಿಯೊಂದು ವಸ್ತುವಿನ ಬೆಲೆ ದಿನೇ ದಿನೇ ಗಗನಕ್ಕೇರುತ್ತಿದೆ. ಇದರಿಂದ ಜನಸಾಮಾನ್ಯರು ಸಂಕಷ್ಟದಲ್ಲಿ ಜೀವನ ಮಾಡುವಂತಾಗಿದೆ ಎಂದು ಆರೋಪಿಸಿದರು.

ಈಗಿನ ಕೇಂದ್ರ ಬಿಜೆಪಿ ಸರ್ಕಾರ, ಹಿಂದೆ ಕಾಂಗ್ರೆಸ್‌ ಸರ್ಕಾರ ಜಾರಿಗೆ ತಂದಿದ್ದ ರೈತರ ಬೆಳೆಗಳಿಗೆ ಬೆಂಬಲ ಬೆಲೆ ನೀಡುವ ಕೃಷಿ ನೀತಿಯನ್ನು
ತಿದ್ದುಪಡಿ ಮಾಡಿದೆ. ಶ್ರೀಮಂತರಿಗೆ ಅನುಕೂಲವಾಗುವಂತಹ ನೀತಿಗಳನ್ನು ಜಾರಿಗೆ ತರಲು ಕೇಂದ್ರ ಮುಂದಾಗಿದೆ.

ಇದನ್ನು ವಿರೋಧಿ ಸಿ ಕಳೆದ ಮೂರು ತಿಂಗಳಿನಿಂದ ದೆಹಲಿಯಲ್ಲಿ ರೈತರು ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಅದಕ್ಕೂ ಜಗ್ಗದ ಸರ್ಕಾರ ರೈತರನ್ನು ಬಂಡವಾಳ ಶಾಹಿಗಳಿಗೆ ಅಡವಿಡಲು ಮುಂದಾಗಿದೆ ಎಂದು ದೂರಿದರು.

ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ತಾಲೂಕಿನ ವಿದ್ಯುತ್‌ ಸಮಸ್ಯೆ ಪರಿಹಾರವಾಗಿತ್ತು. ಹತ್ತಾರು ಎಂಯುಎಸ್‌ಎಸ್‌ ಘಟಕ ಸ್ಥಾಪನೆ ಮಾಡಿದ ಪರಿಣಾಮ ವಿದ್ಯುತ್‌ ಸಮಸ್ಯೆ ಕಂಡು ಬಂದಿಲ್ಲ. ಅಲ್ಲದೆ ಇನ್ನೂ ಉತ್ತಮ ಗುಣಮಟ್ಟದ ವಿದ್ಯುತ್‌ ನೀಡುವ ನಿಟ್ಟಿನಲ್ಲಿ ಮಧುರೆ ಬಳಿ 66
ಕೆವಿ ವಿತರಣಾ ಘಟಕ ಸ್ಥಾಪನೆಗೆ ಹಣ ಬಿಡುಗಡೆ ಮಾಡಿಸಲಾಗಿತ್ತು. ಆದರೆ ಸರ್ಕಾರ ಬದಲಾಗಿ ಮೂರು ವರ್ಷ ಕಳೆಯುತ್ತಾ ಬಂದರೂ ಕಾಮಗಾರಿ ಪೂರ್ಣಗೊಳಿಸಿ ಉದ್ಘಾಟನೆ ಮಾಡಲು ಸಾಧ್ಯವಾಗಿಲ್ಲ. ಆರ್ಥಿಕ ಸಂಕಷ್ಟದ ನೆಪದಲ್ಲಿ ಭದ್ರಾ ಮೇಲ್ದಂಡೆ ಯೋಜನೆ, ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳು ಸ್ಥಗಿತಗೊಂಡಿವೆ ಎಂದು ವಾಗ್ಧಾಳಿ ನಡೆಸಿದರು.

Advertisement

ಪ್ರತಿಭಟನೆಯಲ್ಲಿ ಮಾಜಿ ಸಚಿವ ಟಿ.ಬಿ. ಜಯಚಂದ್ರ, ಮಾಜಿ ಶಾಸಕ ಇಲ್ಕಲ್‌ ವಿಜಯಕುಮಾರ್‌, ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ತಾಜ್‌ಪೀರ್‌, ಜಿಲ್ಲಾ
ಪ್ರಚಾರ ಸಮಿತಿ ಅಧ್ಯಕ್ಷ ಜಿಎಸ್‌ ಮಂಜುನಾಥ್‌, ಮಹಮ್ಮದ್‌ ಸನಾಉಲ್ಲಾ, ಗೋ. ತಿಪ್ಪೇಶ್‌, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷರುಗಳಾದ ಇಸ್ಮಾಯಿಲ್‌, ರಾಜಪ್ಪ, ಮುಖಂಡರುಗಳಾದ ಕಾರೇಹಳ್ಳಿ ಬಸವರಾಜ್‌, ಎಂ.ಪಿ. ಶಂಕರ್‌, ಆಗ್ರೋ ಶಿವಣ್ಣ, ಅಲ್ತಾಫ್‌, ಕೆ.ಟಿ. ಮಂಜುನಾಥ್‌, ಶ್ರೀರಾಂಪುರದ
ಕೃಷ್ಣಮೂರ್ತಿ ಮತ್ತಿತರರು ಭಾಗವಹಿಸಿದ್ದರು. ತಹಶೀಲ್ದಾರರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.

ಓದಿ : ಒಂದೂವರೆ ವರ್ಷದ ಮಗಳನ್ನು ಕತ್ತುಹಿಸುಕಿ ಕೊಂದ ಪಾಪಿ ತಂದೆಗೆ ಮರಣದಂಡನೆ ಶಿಕ್ಷೆ

 

Advertisement

Udayavani is now on Telegram. Click here to join our channel and stay updated with the latest news.

Next