Advertisement
ಆಸ್ಪತ್ರೆ ಆವರಣದಲ್ಲಿರುವ ತಾಯಿ ಮತ್ತು ಮಕ್ಕಳ ವಾರ್ಡ್, ಐಸಿಯು ವಾರ್ಡ್‌ಗೆ ಭೇಟಿ ನೀಡಿ ರೋಗಿಗಳ ಆರೋಗ್ಯ ವಿಚಾರಿಸಿದರು. ವೈದ್ಯರು, ನರ್ಸ್‌ಗಳು ಮತ್ತು ಸಿಬ್ಬಂದಿ ಆಸ್ಪತ್ರೆಗೆ ಆಗಮಿಸುವ ರೋಗಿಗಳನ್ನು ಕುಟುಂಬದವರಂತೆ ನೋಡಿಕೊಳ್ಳಬೇಕು. ಇಲ್ಲಿನ ವೈದ್ಯರು ಮತ್ತು ಸಿಬ್ಬಂದಿಯವರು ಸಹ ಈಗಾಗಲೇ ಅಚ್ಚುಕಟ್ಟಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಮುಂದೆಯೂ ಇದೇ ರೀತಿ ಗುಣಮಟ್ಟದ ಸೇವೆಯನ್ನು ಮುಂದುವರೆಸಿಕೊಂಡು ಹೋಗಿ ಎಂದು ವೈದ್ಯಾಧಿ ಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾ ಕುಟುಂಬ ಕಲ್ಯಾಣಾಧಿ ಕಾರಿ ಡಾ| ಸಿ.ಎಲ್. ಪಾಲಾಕ್ಷ, ಪ್ರತಿ ತಿಂಗಳು ಜಿಲ್ಲಾಸ್ಪತ್ರೆಯಲ್ಲಿ 800 ರಿಂದ 900 ಹೆರಿಗೆ ಮಾಡಿಸಲಾಗುತ್ತದೆ. ಶೇ. 60 ರಷ್ಟು ಸಾಮಾನ್ಯ ಹೆರಿಗೆ ಆದರೆ,ಶೇ .40 ರಷ್ಟು ಶಸ್ತ್ರಚಿಕಿತ್ಸೆ ಮೂಲಕ ಆಗುತ್ತಿವೆ. ವರ್ಷಕ್ಕೆ 30 ಸಾವಿರ ಎಎನ್‌ಸಿ ನೋಂದಣಿ ಆಗುತ್ತವೆ. ಸಾಂಸ್ಥಿಕ ಹೆರಿಗೆಯನ್ನು ಹೆಚ್ಚಿಸಲು ಜಿಲ್ಲೆಯಲ್ಲಿ 34 ಕಡೆ 24×7 ಹೆರಿಗೆ ಆಸ್ಪತ್ರೆಗಳಿದ್ದು, ಬಹುತೇಕ ಹೆರಿಗೆಗಳು ಆಸ್ಪತ್ರೆಯಲ್ಲಾಗುತ್ತವೆ. ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದೇವೆ ಎಂದರು. ರಾಷ್ಟ್ರೀಯ ಆರೋಗ್ಯ ಅಭಿಯಾನದ ಮೂಲಕ ತಾಯಿ ಮತ್ತು ಮಗುವಿನ ಆರೋಗ್ಯ ಕಾಪಾಡುವ ಹಿನ್ನೆಲೆಯಲ್ಲಿ ಸಾಕಷ್ಟು ಸೌಲಭ್ಯ ಕಲ್ಪಿಸಲಾಗುತ್ತಿದೆ. ಇದರ ಸದ್ಬಳಕೆ ಮಾಡಿಕೊಂಡು ಜನರ ಆರೋಗ್ಯ ಕಾಪಾಡಬೇಕೆಂದು ಜಿಲ್ಲಾಧಿಕಾರಿ ಸೂಚಿಸಿದರು. ಜಿಲ್ಲಾ ಶಸ್ತ್ರಚಿಕಿತ್ಸಕ ಡಾ| ಬಸವರಾಜ್, ಡಾ| ದೇವರಾಜ್, ಡಾ| ಬಸವರಾಜ್, ಶುಶ್ರೂಷಾ ಅ ಧೀಕ್ಷಕಿ ಶಾಂತಾ ಮತ್ತಿತರರು ಇದ್ದರು.