ಚಿತ್ರದುರ್ಗ: ಕೋವಿಡ್ ವಿರುದ್ಧ ಜಯ ಸಾ ಧಿಸಲು 45 ವರ್ಷ ಮೇಲ್ಪಟ್ಟ ಜಿಲ್ಲೆಯ ಎಲ್ಲ ನಾಗರಿಕರೂ ತಪ್ಪದೆ ಕೋವಿಡ್ ಲಸಿಕೆ ಪಡೆಯಬೇಕು ಎಂದು ಜಿಲ್ಲಾ ಆರೋಗ್ಯಾ ಧಿಕಾರಿ ಡಾ| ಸಿ.ಎಲ್. ಪಾಲಾಕ್ಷ ಹೇಳಿದರು. ನಗರದ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜು ಆವರಣದಲ್ಲಿ ಸೋಮವಾರ ಜಿಲ್ಲಾಡಳಿತ, ಜಿಪಂ, ಆರೋಗ್ಯ ಇಲಾಖೆಯಿಂದ ಆಯೋಜಿಸಿದ್ದ ಕೋವಿಡ್-19 ಲಸಿಕಾ ಉತ್ಸವಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಏ. 11ರಿಂದ ಲಸಿಕಾ ಉತ್ಸವ ಆರಂಭವಾಗಿದ್ದು, 14 ರವರೆಗೆ ನಡೆಯಲಿದೆ. ಜಿಲ್ಲೆಯ ಎಲ್ಲ ಇಲಾಖೆ ಮತ್ತು ವಿಭಾಗಗಳಲ್ಲಿರುವ 45 ವರ್ಷ ವಯಸ್ಸಿನವರು ಲಸಿಕೆ ಹಾಕಿಸಿಕೊಳ್ಳುವ ಮೂಲಕ ಶೇ.100 ರಷ್ಟು ಗುರಿ ಸಾಧಿ ಸಿ ಚಿತ್ರದುರ್ಗ ಜಿಲ್ಲೆಯನ್ನು ಕೊರೊನಾ ಮುಕ್ತ ಜಿಲ್ಲೆಯನ್ನಾಗಿ ಮಾಡುವ ನಿಟ್ಟಿನಲ್ಲಿ ಪಣ ತೊಡಬೇಕು ಎಂದು ಕರೆ ನೀಡಿದರು.
45 ವರ್ಷ ಮೇಲ್ಪಟ್ಟ ಎಲ್ಲ ನಾಗರಿಕರು ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಬೇಕು. ಎಲ್ಲ ಸಾರ್ವಜನಿಕರು ಸರ್ಕಾರದ ಕೋವಿಡ್ ಮಾರ್ಗಸೂಚಿಗಳಾದ ಸ್ಯಾನಿಟೈಸರ್, ಮಾಸ್ಕ್ ಧರಿಸುವುದು ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಕಡ್ಡಾಯವಾಗಿ ಪಾಲಿಸಿಬೇಕು. ಸಾರ್ವಜನಿಕರು ಹಬ್ಬ, ಹರಿದಿನಗಳನ್ನು ಪರಿಗಣಿಸದೆ ಸಮರೋಪಾದಿಯಾಗಿ ಬಂದು ಉಚಿತವಾಗಿ ಕೋವಿಡ್ ಲಸಿಕೆ ಪಡೆದುಕೊಳ್ಳಬೇಕು ಎಂದರು.
ಜಿಲ್ಲೆಯಲ್ಲಿ ಈಗಾಗಲೇ ಮೊದಲ ಹಂತದ ಕೋವಿಡ್ ಲಸಿಕೆಯನ್ನು ಆರೋಗ್ಯ ಇಲಾಖೆಯ ಸಿಬ್ಬಂದಿಗಳು, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಸೇರಿದಂತೆ ಸುಮಾರು 10,317 ಫಲಾನುಭವಿಗಳಿಗೆ ನೀಡಲಾಗಿದೆ. ಜಿಲ್ಲೆ ರಾಜ್ಯದಲ್ಲಿಯೇ ಪ್ರಥಮ ಸ್ಥಾನದಲ್ಲಿದೆ. ಎರಡನೇ ಹಂತದಲ್ಲಿ ಲಸಿಕೆಯನ್ನು ಪೊಲೀಸ್ ಇಲಾಖೆ, ನಗರಸಭೆ ಸಿಬ್ಬಂದಿಗಳು, ಕಂದಾಯ ಇಲಾಖೆಯ 4714 ಜನರಿಗೆ ಲಸಿಕೆ ನೀಡಲಾಗಿದ್ದು, ಶೇ. 72 ರಷ್ಟು ಪ್ರಗತಿ ಸಾಧಿ ಸಿದೆ ಎಂದು ತಿಳಿಸಿದರು.
ಲಸಿಕಾ ಉತ್ಸವದಲ್ಲಿ ನೂರಕ್ಕೂ ಹೆಚ್ಚು ಮಂದಿ ಶಿಕ್ಷಕರು ಕೋವಿಡ್ ಲಸಿಕೆ ಪಡೆದರು. ತಾಲೂಕು ಆರೋಗ್ಯಾಧಿ ಕಾರಿ ಡಾ| ಬಿ.ವಿ. ಗಿರೀಶ್, ಬಾಲಕಿಯರ ಸರ್ಕಾರಿ ಪಪೂ ಕಾಲೇಜಿನ ಪ್ರಾಚಾರ್ಯ ನಾಗರಾಜು, ನಗರಸಭೆ ಆಯುಕ್ತ ಜೆ.ಟಿ. ಹನುಮಂತರಾಜು, ಪ್ರಭಾರಿ ಉಪ ಆರೋಗ್ಯ ಶಿಕ್ಷಣಾ ಧಿಕಾರಿ ಬಿ. ಮೂಗಪ್ಪ, ಕ್ಷೇತ್ರ ಆರೋಗ್ಯ ಶಿಕ್ಷಣಾ ಧಿಕಾರಿ ಬಿ. ಜಾನಕಿ, ತಾಲೂಕು ಆರೋಗ್ಯ ಶಿಕ್ಷಣಾ ಧಿಕಾರಿ ಎನ್.ಎಸ್. ಮಂಜುನಾಥ್ ಇದ್ದರು.