ಚಿತ್ರದುರ್ಗ: ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ಹಿನ್ನಲೆಯಲ್ಲಿ ತಹಶೀಲ್ದಾರ್ ಸೇರಿದಂತೆ ಸಂಬಂಧಪಟ್ಟ ಅ ಧಿಕಾರಿಗಳು ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಿತರನ್ನು ಕಡ್ಡಾಯವಾಗಿ ಗುರುತಿಸಬೇಕು ಎಂದು ಜಿಲ್ಲಾಧಿ ಕಾರಿ ಕವಿತಾ ಎಸ್. ಮನ್ನಿಕೇರಿ ಸೂಚನೆ ನೀಡಿದರು. ಜಿಲ್ಲಾ ಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಕೋವಿಡ್ ನಿಯಂತ್ರಣ ಕುರಿತು ವಿವಿಧ ಇಲಾಖೆ ಅ ಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.
ಸೋಂಕಿತರಿಗೆ ಸಂಬಂ ಧಿಸಿದಂತೆ 10 ಪ್ರಾಥಮಿಕ ಸಂಪರ್ಕಿತರು ಹಾಗೂ 20 ದ್ವಿತೀಯ ಸಂಪರ್ಕಿತರು ಸೇರಿದಂತೆ ಒಂದು ಕೋವಿಡ್ ಪ್ರಕರಣಕ್ಕೆ ಕನಿಷ್ಠ 30 ಸಂಪರ್ಕಿತರನ್ನು ಕಡ್ಡಾಯವಾಗಿ ಗುರುತಿಸಿ ತಪಾಸಣೆ ಮಾಡಬೇಕು ಎಂದರು. ಬೆಂಗಳೂರಿನಿಂದ ಹಿರಿಯೂರಿಗೆ ಬಹಳಷ್ಟು ಜನರು ಪ್ರಯಾಣಿಸುತ್ತಾರೆ. ಹಾಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಬೆಂಗಳೂರಿನಿಂದ ಹಿರಿಯೂರಿಗೆ ಬರುವ ಪ್ರತಿಯೊಬ್ಬರನ್ನು ತಪಾಸಣೆಗೆ ಒಳಪಡಿಸಿಬೇಕು ಎಂದು ಹೇಳಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ. ರಾಧಿ ಕಾ ಮಾತನಾಡಿ, ಹಿರಿಯೂರು, ಮೊಳಕಾಲ್ಮೂರುರು, ರಾಂಪುರ, ರಾಯದುರ್ಗ ಸೇರಿದಂತೆ ಜಿಲ್ಲೆಯ ವಿವಿಧೆಡೆಗಳಲ್ಲಿ ತಪಾಸಣಾ ಸ್ಥಳಗಳನ್ನು ಗುರುತಿಸಿ ಪೊಲೀಸ್, ತಾಲೂಕು ಆಡಳಿತ, ಆರೋಗ್ಯ ಇಲಾಖೆ ತಂಡದೊಂದಿಗೆ ತಪಾಸಣೆ ಮಾಡಲು ವ್ಯವಸ್ಥೆ ಮಾಡಿಕೊಳ್ಳಬೇಕು ಎಂದರು.
ಹೊರಗಿನಿಂದ ಬಂದವರ ಪರೀಕ್ಷೆ ಕಡ್ಡಾಯ: ಹೊರ ರಾಜ್ಯ, ಹೊರ ದೇಶದಿಂದ ಜಿಲ್ಲೆಗೆ ಆಗಮಿಸುವವರು ಕಡ್ಡಾಯವಾಗಿ ಕೋವಿಡ್ ಟೆಸ್ಟ್ ಮಾಡಿಸಿ 10 ದಿನ ಹೋಂ ಕ್ವಾರಂಟೈನ್ ಆಗಬೇಕು. ಜಿಲ್ಲೆಯಿಂದ ಕುಂಭಮೇಳಕ್ಕೆ ಹೋದವರು ಮುನ್ನೆಚ್ಚರಿಕಾ ಕ್ರಮವಾಗಿ ಸ್ವಯಂ ಐಸೋಲೇಟ್ ಆಗಿ ಕೋವಿಡ್ ಟೆಸ್ಟ್ ಮಾಡಿಸಬೇಕು ಎಂದು ಜಿಲ್ಲಾ ಧಿಕಾರಿಗಳು ಮನವಿ ಮಾಡಿದರು. ಮದುವೆ ಸಮಾರಂಭಗಳಿಗೆ ಪಾಸ್: ಮದುವೆ ಸಮಾರಂಭಗಳಿಗೆ ಕಲ್ಯಾಣ ಮಂಟಪಕ್ಕೆ ಸಂಬಂಧಿಸಿದಂತೆ ಒಳಾಂಗಣ ಸಭಾಂಗಣ 100, ಹೊರಾಂಗಣ ಆವರಣದಲ್ಲಿ ನಡೆದರೆ 200 ಜನರಿಗೆ ಅವಕಾಶವಿದೆ. ಆಯಾ ತಾಲೂಕಿನ ತಹಶೀಲ್ದಾರ್‌ಗಳಿಂದ ಪಾಸ್ ಪಡೆಯುವುದು ಕಡ್ಡಾಯ ಎಂದು ಜಿಲ್ಲಾ ಧಿಕಾರಿ ಕವಿತಾ ಎಸ್. ಮನ್ನಿಕೇರಿ ತಿಳಿಸಿದರು. ಕಲ್ಯಾಣ ಮಂಟಪದ ಮಾಲೀಕರು ಕಡ್ಡಾಯವಾಗಿ ಕೋವಿಡ್ ನಿಯಮಾವಳಿ ಪಾಲಿಸಬೇಕು. ನಿಯಮ ಪಾಲನೆ ಮಾಡದಿದ್ದರೆ ಕಲ್ಯಾಣಮಂಟಪದ ಲೈಸೆನ್ಸ್ ರದ್ದು ಮಾಡಲಾಗುವುದು ಎಂದು ಎಚ್ಚರಿಸಿದರು.
ಜಿಪಂ ಸಿಇಒ ಡಾ| ಕೆ. ನಂದಿನಿದೇವಿ ಮಾತನಾಡಿ, ಗ್ರಾಮೀಣ ಪ್ರದೇಶಗಳಲ್ಲಿ ಮನೆ, ದೇವಸ್ಥಾನಗಳಲ್ಲಿ ಹಾಗೂ ಸ್ಥಳೀಯವಾಗಿ ನಡೆಯುವ ಮದುವೆ ಸಮಾರಂಭಗಳಿಗೆ ಸಂಬಂಧಿ ಸಿದಂತೆ ಈಗಾಗಲೇ ಪಂಚಾಯಿತಿ ಅಭಿವೃದ್ಧಿ ಅ ಧಿಕಾರಿಗಳಿಗೆ ಮಾರ್ಗದರ್ಶನ ಮಾಡಲಾಗಿದೆ ಎಂದು ಹೇಳಿದರು. ಸಭೆಯಲ್ಲಿ ಅಪರ ಜಿಲ್ಲಾಧಿ ಕಾರಿ ಈ. ಬಾಲಕೃಷ್ಣ, ಉಪವಿಭಾಗಾ ಧಿಕಾರಿ ಪ್ರಸನ್ನ, ಡಿಎಚ್‌ಒ ಡಾ| ಸಿ.ಎಲ್. ಪಾಲಾಕ್ಷ, ಜಿಲ್ಲಾ ಸರ್ವೇಕ್ಷಣಾಧಿ ಕಾರಿ ಡಾ| ತುಳಸಿರಂಗನಾಥ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ| ಎಚ್.ಜೆ. ಬಸವರಾಜಪ್ಪ, ಆರ್‌ಸಿಎಚ್ ಅ ಧಿಕಾರಿ ಡಾ| ಕುಮಾರಸ್ವಾಮಿ ಭಾಾಗವಹಿಸಿದ್ದರು.