ಚಿತ್ರದುರ್ಗ: ಜಿಲ್ಲೆಯಲ್ಲಿ ಕೋವಿಡ್ -19 ಎರಡನೇ ಅಲೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಸೋಂಕು ನಿಯಂತ್ರಿಸುವ ಸಲುವಾಗಿ ನಗರಸಭೆಯಿಂದ ನಗರದ ವಿವಿಧೆಡೆ ಬುಧವಾರ ಮಾಸ್ಕ್ ಅಭಿಯಾನ ನಡೆಸಲಾಯಿತು. ನಗರಸಭೆ ಆಯುಕ್ತರಾದ ಜೆ.ಟಿ. ಹನುಮಂತರಾಜು, ಸಹಾಯಕ ಕಾರ್ಯಪಾಲಕ ಅಭಿಯಂತರರು (ಪರಿಸರ) ಶಿವಶಂಕರ್ ಅವರ ನೇತೃತ್ವದಲ್ಲಿ ಚಿತ್ರದುರ್ಗದ ನಗರದ ಗಾಂ ಧಿ ವೃತ್ತ, ಮೆದೇಹಳ್ಳಿ ರಸ್ತೆ, ಸಂತೆ ಹೊಂಡ ಮಾರುಕಟ್ಟೆ ಸೇರಿದಂತೆ ವಿವಿಧೆಡೆ ಮಾಸ್ಕ್ ಅಭಿಯಾನ ನಡೆಸಿದರು.
ಗಾಂಧಿ ವೃತ್ತದ ಸಮೀಪ ಇರುವ ಅಂಗಡಿಗಳಲ್ಲಿ ಮಾಸ್ಕ್ ಧರಿಸದೆ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ವ್ಯಾಪಾರ ನಡೆಸುತ್ತಿದ್ದ ಅಂಗಡಿ ಮಾಲೀಕರಿಗೆ ಮಾಸ್ಕ್ ಧರಿಸುವಂತೆ ಮತ್ತು ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು. ಪ್ರತಿಯೊಬ್ಬರೂ ಮಾಸ್ಕ್ ಅನ್ನು ಕಡ್ಡಾಯವಾಗಿ ಧರಿಸುವ ಮೂಲಕ ಸೋಂಕು ನಿಯಂತ್ರಿಸಲು ಕೈ ಜೋಡಿಸಬೇಕು ಎಂದು ಮನವಿ ಮಾಡಿದರು.
ಮಾಸ್ಕ್ ಧರಿಸದೇ ವ್ಯಾಪಾರ ಮಾಡುತ್ತಿದ್ದ ಅಂಗಡಿಗಳ ಮಾಲೀಕರಿಗೆ ಮತ್ತು ವ್ಯಾಪಾರಿಗಳಿಗೆ ಸ್ಥಳದಲ್ಲೇ ದಂಡ ವಿಧಿ ಸಿದರು. ಸಂತೆ ಹೊಂಡದ ಬಳಿ ತರಕಾರಿ, ಹಣ್ಣು ಮತ್ತು ಹೂ ಮಾರಾಟ ಮಾಡುವ ಅಂಗಡಿಗಳ ಮಾಲೀಕರಿಗೆ ತರಕಾರಿ, ಹಣ್ಣು ಮತ್ತು ಹೂ ಮಾರುಕಟ್ಟೆಯನ್ನು ನಗರದ ಸರ್ಕಾರಿ ವಿಜ್ಞಾನ ಕಾಲೇಜಿನ ಎಸ್‌ಜೆಎಂ ಕ್ರೀಡಾಂಗಣಕ್ಕೆ ಸ್ಥಳಾಂತರ ಮಾಡುವಂತೆ ಎಚ್ಚರಿಕೆ ನೀಡಿದರು. ಮುಂದಿನ ಆದೇಶದವರೆಗೆ ಅಲ್ಲಿಯೇ ವ್ಯಾಪಾರ ನಡೆಸುವಂತೆ ಸೂಚನೆ ನೀಡಿದರು. ಸಂತೆ ಹೊಂಡದ ಬಳಿ ನಿತ್ಯ ಹಲವಾರು ವ್ಯಾಪಾರಿಗಳು, ರೈತಾಪಿ ಜನರು, ಸಾರ್ವಜನಿಕರು, ಮಹಿಳೆಯರು ಸೇರಿದಂತೆ ಮುಂತಾದ ವರ್ಗದ ಜನರು ಸೇರುವುದರಿಂದ ಎಲ್ಲರೂ ಮಾಸ್ಕ್ ಧರಿಸಿಕೊಂಡು ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು ಎಂದರು.
ಮಾಸ್ಕ್ ಧರಿಸದೇ ವ್ಯಾಪಾರ ನಡೆಸುತ್ತಿದ್ದ ತರಕಾರಿ, ಹಣ್ಣು ವ್ಯಾಪಾರಿಗಳಿಗೆ ಮತ್ತು ರಸ್ತೆಯಲ್ಲಿ ಮಾಸ್ಕ್ ಧರಿಸದೇ ಬೇಕಾಬಿಟ್ಟಿ ಓಡಾಡುತ್ತಿದ್ದ ಸಾರ್ವಜನಿಕರಿಗೆ ಸ್ಥಳದಲ್ಲಿಯೇ 200 ರಿಂದ 250 ರೂ. ವರೆಗೂ ದಂಡ ವಿ ಧಿಸಲಾಯಿತು. ಈ ಸಂದರ್ಭದಲ್ಲಿ ನಗರಸಭೆ ಆರೋಗ್ಯ ನಿರೀಕ್ಷಕರಾದ ಸರಳ, ಭಾರತಿ, ನಾಗರಾಜು, ಕಂದಾಯ ಅ ಕಾರಿ ಚಂದ್ರಶೇಖರ್ ಸೇರಿದಂತೆ ಪೊಲೀಸ್ ಸಿಬ್ಬಂದಿ ಇದ್ದರು.