Advertisement

2 ಸಾವಿರಕ್ಕೂ ಹೆಚ್ಚು ಅಭ್ಯರ್ಥಿಗಳು ಗೈರು

10:59 AM Jun 10, 2019 | Naveen |

ಚಿತ್ರದುರ್ಗ: ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ ಪ್ರಥಮ ದರ್ಜೆ ಸಹಾಯಕ ಹುದ್ದೆಗಳ ನೇಮಕಾತಿಗೆ ಭಾನುವಾರ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಯಿತು. ಎರಡು ಸಾವಿರಕ್ಕೂ ಹೆಚ್ಚು ಅಭ್ಯರ್ಥಿಗಳು ಗೈರುಹಾಜರಾಗಿದ್ದರು.

Advertisement

ಚಿತ್ರದುರ್ಗ ನಗರದ 21 ಪರೀಕ್ಷಾ ಕೇಂದ್ರಗಳಲ್ಲಿ ಬೆಳಿಗ್ಗೆ 10 ರಿಂದ 11:30 ರವರೆಗೆ ನಡೆದ ಪರೀಕ್ಷೆಗೆ 8509 ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. 6232 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರೆ, 2277 ಅಭ್ಯರ್ಥಿಗಳು ಗೈರಾಗಿದ್ದರು. ಅದೇ ರೀತಿ ಮಧ್ಯಾಹ್ನ 2 ರಿಂದ 3:30 ರವರೆಗೆ ಪ್ರಥಮ ದರ್ಜೆ ಸಹಾಯಕ ಹುದ್ದೆಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆದಿದ್ದು, 8509 ಅಭ್ಯರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದು, 6197 ಅಭ್ಯರ್ಥಿಗಳು ಹಾಜರಾಗಿದ್ದರು. 2312 ಅಭ್ಯರ್ಥಿಗಳು ಗೈರಾಗಿದ್ದರು.

ಕೆಪಿಎಸ್‌ಸಿ ವತಿಯಿಂದ ನಡೆಸಲಾದ ಪ್ರದಸ ಹುದ್ದೆಗಳ ನೇಮಕಾತಿ ಪರೀಕ್ಷೆ ಸಮರ್ಪಕವಾಗಿ ನಡೆಯಿತು. ನಕಲು ಸೇರಿದಂತೆ ಯಾವುದೇ ರೀತಿಯ ಅಹಿತಕರ ಘಟನೆಗಳು ಪರೀಕ್ಷೆ ಕೇಂದ್ರದಲ್ಲಿ ನಡೆಯಲಿಲ್ಲ. ಪರೀಕ್ಷಾರ್ಥಿಗಳಿಗೆ ತೊಂದರೆಯಾಗದಂತೆ ಪರೀಕ್ಷಾ ಕೇಂದ್ರಗಳಲ್ಲಿ ಕುಡಿಯುವ ನೀರು, ಶೌಚಾಲಯ, ವ್ಯವಸ್ಥಿತ ಆಸನ ಸೌಲಭ್ಯ ಮಾಡಲಾಗಿತ್ತು. ನಕಲು, ಅವ್ಯವಹಾರ ತಡೆಗಟ್ಟುವ ಉದ್ದೇಶದಿಂದ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ವೀಡಿಯೋ ಚಿತ್ರೀಕರಣ ಮಾಡಲಾಯಿತು.

ಜಿಲ್ಲೆಯಲ್ಲಿ 47 ವಿಕಲಚೇತನ ಅಭ್ಯರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದು, 39 ಅಭ್ಯರ್ಥಿಗಳು ಪರೀಕ್ಷೆ ಎದುರಿಸಿದರು. 8 ವಿಕಲಚೇತನ ಅಭ್ಯರ್ಥಿಗಳು ಗೈರುಹಾಜರಾಗಿದ್ದರು. ಚಿತ್ರದುರ್ಗ ನಗರದ ಚಳ್ಳಕೆರೆ ಟೋಲ್ಗೇಟ್ ಸಮೀಪದ ಇಂಡಿಯನ್‌ ಇಂಟರ್‌ ನ್ಯಾಷನಲ್ ಸ್ಕೂಲ್ನಲ್ಲಿ ವಿಕಲಚೇತನ ಅಭ್ಯರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿತ್ತು. ವಿಕಲಚೇತನರಿಗೆ ಪ್ರತ್ಯೇಕವಾಗಿ ಪರೀಕ್ಷೆ ಬರೆಯಲು 10 ಕೊಠಡಿಗಳನ್ನು ವ್ಯವಸ್ಥೆ ಮಾಡಲಾಗಿತ್ತು.ಪರೀಕ್ಷೆ ಬರೆಯಲು ಹೆಚ್ಚುವರಿಯಾಗಿ 10 ನಿಮಿಷ ಅವಧಿ ನೀಡಲಾಗಿತ್ತು. ಪ್ರತಿ 5 ವಿಕಲಚೇತನ ಅಭ್ಯರ್ಥಿಗಳಿಗೆ ಒಂದು ಕೊಠಡಿಯಂತೆ ವ್ಯವಸ್ಥೆ ಮಾಡಲಾಗಿತ್ತು.

ವಿಕಲಚೇತನರೂ ಪರೀಕ್ಷೆ ಬರೆದ್ರು
ಜಿಲ್ಲೆಯಲ್ಲಿ 47 ವಿಕಲಚೇತನ ಅಭ್ಯರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದು, 39 ಅಭ್ಯರ್ಥಿಗಳು ಪರೀಕ್ಷೆ ಎದುರಿಸಿದರು. 8 ವಿಕಲಚೇತನ ಅಭ್ಯರ್ಥಿಗಳು ಗೈರುಹಾಜರಾಗಿದ್ದರು. ಚಿತ್ರದುರ್ಗ ನಗರದ ಚಳ್ಳಕೆರೆ ಟೋಲ್ಗೇಟ್ ಸಮೀಪದ ಇಂಡಿಯನ್‌ ಇಂಟರ್‌ ನ್ಯಾಷನಲ್ ಸ್ಕೂಲ್ನಲ್ಲಿ ವಿಕಲಚೇತನ ಅಭ್ಯರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿತ್ತು. ವಿಕಲಚೇತನರಿಗೆ ಪ್ರತ್ಯೇಕವಾಗಿ ಪರೀಕ್ಷೆ ಬರೆಯಲು 10 ಕೊಠಡಿಗಳನ್ನು ವ್ಯವಸ್ಥೆ ಮಾಡಲಾಗಿತ್ತು.
Advertisement

Udayavani is now on Telegram. Click here to join our channel and stay updated with the latest news.

Next