Advertisement

ಜನರ ಹಿತರಕ್ಷಣೆಯಲ್ಲಿಸರ್ಕಾರ ವಿಫಲ

06:20 PM Aug 31, 2021 | Team Udayavani |

ಹೊಸದುರ್ಗ: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‌ ಪಕ್ಷವನ್ನು ಅಧಿಕಾರಕ್ಕೆ ತರಲು ಸಂಘಟನೆಗೆ ಒತ್ತು ನೀಡಬೇಕಿದೆ ಎಂದು ಜೆಡಿಎಸ್‌ ಪ್ರಚಾರ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಶಾಸಕ ವೈ.ಎಸ್‌.ವಿ ದತ್ತ ಹೇಳಿದರು.

Advertisement

ಪಟ್ಟಣದ ಶ್ರೀ ಬನಶಂಕರಿ ಸಮುದಾಯ ಭವನದಲ್ಲಿಜೆಡಿಎಸ್‌ತಾಲೂಕುಘಟಕದವತಿಯಿಂದ ಸೋಮವಾರ ಹಮ್ಮಿಕೊಂಡಿದ್ದ ತಾಲೂಕು ಘಟಕದ ನೂತನ ಅಧ್ಯಕ್ಷರ ಪದಗ್ರಹಣ ಸಮಾರಂಭ ಮತ್ತು ಪಕ್ಷ ಸೇರ್ಪಡೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕೇಂದ್ರ ಮತ್ತು ರಾಜ್ಯ ಸರಕಾರಗಳ ಜನ ವಿರೋಧಿ ನೀತಿಯಿಂದ ಜನರು ಬೇಸತ್ತಿದ್ದಾರೆ. ಪ್ರತಿನಿತ್ಯ ಪೆಟ್ರೋಲ್‌, ಡೀಸೆಲ್‌, ಗ್ಯಾಸ್‌ ಸಿಲಿಂಡರ್‌, ದಿನಬಳಕೆ ಡವಸ್ತುಗಳ ಬೆಲೆ ಏರಿಕೆಯಿಂದ ಜನಸಾಮಾನ್ಯರು ಆಕ್ರೋಶಗೊಂಡಿದ್ದು, ಜನರ ಆಶೋತ್ತರಗಳನ್ನು ಈಡೇರಿಸುವಲ್ಲಿ ಸರಕಾರ ಸಂಪೂರ್ಣ ವಿಫಲವಾಗಿದೆ. ಇಂತಹ ಸಂದರ್ಭದಲ್ಲಿ ಸಾರ್ವಜನಿಕರ ಪರವಾಗಿ ನಾವು ಹೋರಾಟ ಮಾಡಬೇಕೇ ವಿನಃ ಬಿಜೆಪಿಯೊಂದಿಗೆ ರಾಜಿಯಾದರೆ ಜೆಡಿಎಸ್‌ ಪಕ್ಷಕ್ಕೆ ಅಪಾಯ ಎಂದು ಎಚ್ಚರಿಸಿದರು.

ಹೈಕಮಾಂಡ್‌ ಸಂಸ್ಕೃತಿ ಹೊಂದಿರುವ ಕಾಂಗ್ರೆಸ್‌ ಮತ್ತು ಬಿಜೆಪಿ ಪಕ್ಷಗಳು ದೆಹಲಿ ನಾಯಕರ ಕೈಗೊಂಬೆಯಂತೆ ವರ್ತಿಸುತ್ತಿವೆ. ರಾಜ್ಯದ ವಿಷಯ ಬಂದಾಗ ಈ ಪಕ್ಷಗಳ ನಾಯಕರು ಗಟ್ಟಿ ಧ್ವನಿಯಲ್ಲಿ ಮಾತನಾಡಲಾರರು. ಈ ಎರಡು ರಾಷ್ಟ್ರೀಯ ಪಕ್ಷಗಳಿಗೆ ಪರ್ಯಾಯವಾಗಿ ರಾಜ್ಯದ ಜನರು ಜೆಡಿಎಸ್‌ ಪಕ್ಷಕ್ಕೆ ಆಶೀರ್ವಾದ ಮಾಡಬೇಕು. ಪ್ರಾದೇಶಿಕ ಅಸ್ಮಿತೆ, ಕನ್ನಡ ಭಾಷೆ, ನೀರಾವರಿ ಯೋಜನೆಗಳು ಸಾಕಾರಗೊಳ್ಳಲು ಹಾಗೂ ಮಹದಾಯಿ ಸಮಸ್ಯೆ ಇತ್ಯರ್ಥಪಡಿಸಲು ಜೆಡಿಎಸ್‌ ನಿಂದ ಮಾತ್ರ ಸಾಧ್ಯ ಎಂದು ಪ್ರತಿಪಾದಿಸಿದರು.

ಜಿಲ್ಲಾಧ್ಯಕ್ಷ ಯಶೋಧರ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಜೆಡಿಎಸ್‌ ಅಧ್ಯಕ್ಷ ಜಿ. ಗಣೇಶಮೂರ್ತಿ, ಹರಿಹರದ ಮಾಜಿ ಶಾಸಕ ಎಚ್‌.ಎಸ್‌. ಶಿವಶಂಕರ್‌, ಜಿಲ್ಲಾ ಹಿರಿಯ ಉಪಾಧ್ಯಕ್ಷ ರಾಗಿ ಶಿವಮೂರ್ತಿ, ಕಾನೂನು ಘಟಕ ಜಿಲ್ಲಾಧ್ಯಕ್ಷ ಪಿ. ಶಿವಕುಮಾರ್‌ ಯಾದವ್‌, ಪರಿಶಿಷ್ಟ ಜಾತಿ ವಿಭಾಗದ ಜಿಲ್ಲಾಧ್ಯಕ್ಷ ಪರಮೇಶ್ವರಯ್ಯ, ಹೊಸದುರ್ಗ ವಿಭಾಗದ ಅಧ್ಯಕ್ಷ ಹನುಮಂತಪ್ಪ, ತಾಲೂಕು ಪ್ರಧಾನ ಕಾರ್ಯದರ್ಶಿ ಮೈಲಾರಪ್ಪ, ಹೊಸದುರ್ಗ ಯುವ ಘಟಕದ ಅಧ್ಯಕ್ಷ ಕಿರಣ್‌ಕುಮಾರ್‌, ನಗರ ಘಟಕದ ಅಧ್ಯಕ್ಷ ಅರ್ಪತ್‌ ಖಾನ್‌ ಮತ್ತಿತರರು ಇದ್ದರು.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next