ಚಿತ್ರದುರ್ಗ: ಜಿಲ್ಲೆಯಲ್ಲಿ ಕೆರೆಗಳ ಒತ್ತುವರಿಯನ್ನು ಶೀಘ್ರದಲ್ಲೇ ತೆರವುಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ, ಅ ಧಿಕಾರಿಗಳಿಗೆ ತಾಕೀತು ಮಾಡಿದರು. ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ನಡೆದ ಕಂದಾಯ ಮತ್ತು ಜಿಲ್ಲಾ ಮಟ್ಟದ ಅಧಿ ಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಒಟ್ಟು 462 ಕೆರೆಗಳ ಒತ್ತುವರಿಯಾಗಿದ್ದು, ಈಗಾಗಲೇ 90 ಕೆರೆಗಳ ಒತ್ತುವರಿ ತೆರವುಗೊಳಿಸಲಾಗಿದೆ. ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಮತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 296 ಕೆರೆಗಳ ಒತ್ತುವರಿ ನಡೆದಿದ್ದು, ಇದುವರೆಗೆ 32 ಕೆರೆಗಳ ಒತ್ತುವರಿ ತೆರವುಗೊಳಿಸಲಾಗಿದೆ. ಬಾಕಿ ಉಳಿದ ಕೆರೆಗಳ ಒತ್ತುವರಿಯನ್ನು ಸಂಬಂಧಪಟ್ಟ ಅ ಧಿಕಾರಿಗಳು ಆದಷ್ಟು ಬೇಗ ತೆರವುಗೊಳಿಸಬೇಕು. ಇಲ್ಲದಿದ್ದರೆ ಅಂತಹ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಸಣ್ಣ ನೀರಾವರಿ ಇಲಾಖೆ ವ್ಯಾಪ್ತಿಗೆ 144 ಕೆರೆಗಳು ಬರಲಿದ್ದು, ಇವುಗಳ ಒತ್ತುವರಿಯನ್ನು ಶೀಘ್ರದಲ್ಲಿ ತೆರವು ಮಾಡಬೇಕು. ಒತ್ತುವರಿ ಮಾಡಿಕೊಂಡಿರುವ ಬಗ್ಗೆ ಹೈಕೋರ್ಟ್‌ನಲ್ಲಿ ಪ್ರಕರಣ ಬಾಕಿ ಇದೆ. ಜಿಲ್ಲೆಯಲ್ಲಿ ಕೆರೆಗಳ ತೆರವು ಮಾಡಿರುವ ಬಗ್ಗೆ ನ್ಯಾಯಾಲಯಕ್ಕೆ ಮಾಹಿತಿ ನೀಡಬೇಕಾಗಿದೆ. ಸಣ್ಣ ನೀರಾವರಿ ಹಾಗೂ ಪಂಚಾಯತ್ ರಾಜ್ ಇಲಾಖೆ ಇಂಜಿನಿಯರ್‌ಗಳು ಕೆರೆ ಒತ್ತುವರಿಯನ್ನು ಆದಷ್ಟು ಬೇಗ ಕೈಗೊಳ್ಳಲಿದ್ದಲ್ಲಿ ನಿಮ್ಮ ಮೇಲೆ ವರದಿ ಮಾಡಬೇಕಾಗುತ್ತದೆ ಎಂದರು. ಆಶ್ರಯ ಯೋಜನೆಗೆ ಸಂಬಂಧಪಟ್ಟಂತೆ ಜಿಲ್ಲೆಯಲ್ಲಿ ನಿವೇಶನ ರಹಿತ ಮತ್ತು ವಸತಿ ರಹಿತರಿಗೆ ಸರ್ಕಾರಿ ಜಮೀನಿನಲ್ಲಿ ನಿವೇಶನ ಮಂಜೂರು ಮಾಡಲಾಗಿದೆ.
ಆದರೆ ಭೂಸ್ವಾ ಧೀನವಾಗಿ ಹಲವು ವರ್ಷಗಳಾದರೂ ಜಮೀನಿನಲ್ಲಿ ಯಾವ ಅಭಿವೃದ್ಧಿ ಸಾಧ್ಯವಾಗಿಲ್ಲವೋ ಈ ಕುರಿತು ಅಧಿ ಕಾರಿಗಳು ಗಮನ ಹರಿಸಿ ಸೂಕ್ತ ಕ್ರಮ ವಹಿಸಬೇಕು ಎಂದು ತಿಳಿಸಿದರು. ಚಿತ್ರದುರ್ಗ ಜಿಲ್ಲೆಯಲ್ಲಿ 2009ರ ನಂತರ ಅನ ಧಿಕೃತವಾಗಿ ಕಟ್ಟಿದ್ದ ಒಟ್ಟು 34 ದೇವಸ್ಥಾನಗಳನ್ನು ಗುರುತಿಸಲಾಗಿದೆ. ಅವುಗಳನ್ನು ಯಾವುದೇ ತಕರಾರು ಇಲ್ಲದೇ ಸಂಬಂಧಪಟ್ಟ ಅಧಿ ಕಾರಿಗಳು ತೆರವುಗೊಳಿಸಬೇಕು ಎಂದು ಸೂಚಿಸಿದರು.
ಜಿಲ್ಲೆಯಲ್ಲಿ 375 ಮಿಮೀ ಮಳೆ: ಜಿಲ್ಲೆಯಲ್ಲಿ 186 ಮಿಮೀ ವಾಡಿಕೆ ಮಳೆಗೆ ಸರಾಸರಿ 375 ಮಿಮೀ ಮಳೆಯಾಗಿದೆ. ಇದು ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಇನ್ನೂ 3,38,385 ಹೆಕ್ಟೇರ್‌ಗಳಲ್ಲಿ ಬಿತ್ತನೆ ಗುರಿ ಹೊಂದಿದ್ದು, 1,67,058 ಹೆಕ್ಟೇರ್ ಗಳಲ್ಲಿ ಬಿತ್ತನೆಯಾಗಿದ್ದು, ಒಟ್ಟು ಶೇ.49.40 ರಷ್ಟು ಸಾಧನೆಯಾಗಿದೆ.
2020-21ನೇ ಸಾಲಿನಲ್ಲಿ ಬೆಳೆ ಪರಿಹಾರ ಸಂಬಂಧಪಟ್ಟಂತೆ ಒಟ್ಟು 34931 ರೈತರಿಗೆ ಬೆಳೆ ಪರಿಹಾರ ಬರುವುದು ಬಾಕಿ ಉಳಿದಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕ ರಮೇಶ್ ಸಭೆಗೆ ಮಾಹಿತಿ ನೀಡಿದರು. ಮುಂಗಾರು ಹಂಗಾಮಿನಲ್ಲಿ 68,360 ಮೆಟ್ರಿಕ್ ಟನ್ ರಸಗೊಬ್ಬರಗಳ ಬೇಡಿಕೆ ಇದ್ದು, 56,532 ಮೆಟ್ರಿಕ್ ಟನ್ ದಾಸ್ತಾನು ಮಾಡಲಾಗಿತ್ತು. ಅದರಲ್ಲಿ 42312 ಮೆಟ್ರಿಕ್ ಟನ್ ವಿತರಣೆ ಮಾಡಲಾಗಿದೆ. ಇನ್ನೂ 14,220 ಟನ್ ರಸಗೊಬ್ಬರ ಉಳಿದಿದೆ ಎಂದು ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾ ಧಿಕಾರಿ ಈ. ಬಾಲಕೃಷ್ಣ, ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾ ಧಿಕಾರಿ ಗಾಯತ್ರಿ, ಜಿಲ್ಲಾ ಮತ್ತು ತಾಲೂಕು ಮಟ್ಟದ ಅ ಧಿಕಾರಿಗಳು ಉಪಸ್ಥಿತರಿದ್ದರು.