Advertisement
ಭಾರತ ದೇಶ ಎಲ್ಲಾ ರಂಗಗಳಲ್ಲೂ ಪ್ರಗತಿ ಸಾಧಿ ಸುತ್ತಿದೆ. ವ್ಯವಸಾಯ, ವಿಜ್ಞಾನ, ತಂತ್ರಜ್ಞಾನ, ಶಿಕ್ಷಣ, ಆರೋಗ್ಯ, ಮೂಲಭೂತ ಸೌಕರ್ಯ, ಕ್ರೀಡೆ ಹೀಗೆ ಎಲ್ಲಾ ರಂಗಗಳಲ್ಲಿಯೂ ಭಾರತೀಯರ ಸಿಂಹ ಘರ್ಜನೆ ಇಡೀ ವಿಶ್ವದ ಮೂಲೆ ಮೂಲೆಯಲ್ಲಿ ಕೇಳಿಸುತ್ತಿದೆ. ಸಾಮಾಜಿಕ, ಆರ್ಥಿಕ, ಶೈಕ್ಷಣಿಕವಾಗಿ, ಬಲಿಷ್ಠ ಭಾರತ ನಿರ್ಮಾಣಕ್ಕಾಗಿ ದೇಶದ ಪ್ರಧಾನಮಂತ್ರಿಗಳು ಸಂಕಲ್ಪ ಮಾಡಿದ್ದಾರೆ ಎಂದರು.
Related Articles
Advertisement
ಜಿಲ್ಲಾ ಖನಿಜ ಪ್ರತಿಷ್ಠಾನದಿಂದ ಕಳೆದ 5 ವರ್ಷಗಳಿಂದ 249.55 ಕೋಟಿ ರೂ. ಸಂಗ್ರಹವಾಗಿದ್ದು, ಇದರಲ್ಲಿ 92.34 ಕೋಟಿ ರೂ.ಗಳನ್ನು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ವಿನಿಯೋಗಿಸಲಾಗಿದೆ. ಕೋವಿಡ್ ನಿಯಂತ್ರಣಕ್ಕಾಗಿ ಮೀಸಲಿಟ್ಟ 36.7 ಕೋಟಿ ರೂ. ಗಳಲ್ಲಿ 29.68 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಜಿಲ್ಲೆಯ ಬಹು ದಿನಗಳ ಬೇಡಿಕೆಯಾದ ನೀರಾವರಿ, ನೇರ ರೈಲ್ವೆ ಮಾರ್ಗ, ವೈದ್ಯಕೀಯ ಕಾಲೇಜು ನಿರ್ಮಾಣ, ಕೈಗಾರಿಕೆಗಳು ನೆಲೆಗೊಳ್ಳುವ ನಿಟ್ಟಿನಲ್ಲಿ ಸರ್ಕಾರ ಕಟಿಬದ್ಧವಾಗಿದೆ ಎಂದರು.
ಕೊರೊನಾ ವಾರಿಯರ್ಸ್‌ಗಳಾಗಿ ಸೇವೆ ಸಲ್ಲಿಸಿದ ವಿವಿಧ ಇಲಾಖೆಗಳ ನೌಕರರನ್ನು ಸನ್ಮಾನಿಸಲಾಯಿತು. ಜಿಲ್ಲೆಯಲ್ಲಿ ನಡೆದ ನೈಜ ಘಟನೆಗಳನ್ನು ಆಧರಿಸಿದ ಬಾಲ್ಯವಿವಾಹ ಹಾಗೂ ಬಹಿರ್ದೆಸೆಗೆ ಹೋದ ಬಾಲಕಿಯ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಗೃತಿ ನೃತ್ಯ ಪ್ರದರ್ಶಿಸಲಾಯಿತು. ಕಾರ್ಯಕ್ರಮದಲ್ಲಿ ರಾಜ್ಯ ಖನಿಜ ನಿಗಮದ ಅಧ್ಯಕ್ಷ ಎಸ್. ಲಿಂಗಮೂರ್ತಿ, ನಗರಾಭಿವೃದ್ಧಿ ಪ್ರಾಧಿ ಕಾರದ ಅಧ್ಯಕ್ಷ ಟಿ. ಬದರಿನಾಥ್, ನಗರಸಭೆ ಅಧ್ಯಕ್ಷೆ ತಿಪ್ಪಮ್ಮ, ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ, ಜಿಪಂ ಸಿಇಒ ಡಾ| ಕೆ. ನಂದಿನಿದೇವಿ, ಜಿಲ್ಲಾ ಪೊಲೀಸ್ ವರಿಷ್ಠಾ ಧಿಕಾರಿ ಜಿ. ರಾಧಿಕಾ, ಹೆಚ್ಚುವರಿ ಜಿಲ್ಲಾಧಿಕಾರಿ ಇ. ಬಾಲಕೃಷ್ಣ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾ ಧಿಕಾರಿ ನಂದಗಾವಿ, ಉಪವಿಭಾಗಾ ಧಿಕಾರಿ ಆರ್. ಚಂದ್ರಯ್ಯ ಮತ್ತಿತರರು ಭಾಗವಹಿಸಿದ್ದರು.