Advertisement

ಚಿತ್ರದುರ್ಗ; ಲಾರಿ, ಕಾರು ಭೀಕರ ಅಪಘಾತ; 3 ಮಹಿಳೆಯರು ಸೇರಿ ನಾಲ್ವರ ಸಾವು

08:42 AM Jul 18, 2019 | Nagendra Trasi |

ಚಿತ್ರದುರ್ಗ: ಲಾರಿ ಮತ್ತು ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಮಹಿಳೆಯರು ಹಾಗೂ ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಬುಧವಾರ ಸಂಜೆ ರಾಷ್ಟ್ರೀಯ ಹೆದ್ದಾರಿ 4ರ ಕಂಚಿಗನಾಳ್ ಬಳಿ ನಡೆದಿದೆ.

Advertisement

ಬೆಂಗಳೂರಿನಿಂದ ಬಾದಾಮಿಯ ಬನಶಂಕರಿಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಕಾರಿನಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಎಂಟು ಮಂದಿ ಪ್ರಯಾಣಿಸುತ್ತಿದ್ದರು. ಭೀಕರ ಅಪಘಾತದಿಂದಾಗಿ ಇಬ್ಬರು ಮಕ್ಕಳು ಸೇರಿದಂತೆ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಕಾರಿನಲ್ಲಿ ಅಶೋಕ್, ಪ್ರವಿತಾ, ಮಂಜುಳಾ, ಶೋಭಾ, ಸುಕನ್ಯಾ, ಶ್ರೇಷ್ಠ ಪ್ರಯಾಣಿಸುತ್ತಿದ್ದರು. ಇನ್ನಿಬ್ಬರ ಗುರುತು ಪತ್ತೆಯಾಗಿಲ್ಲ. ಕಾರಿನಲ್ಲಿದ್ದವರು ಬೆಂಗಳೂರಿನ ಆರ್ ಆರ್ ನಗರ ನಿವಾಸಿಗಳು ಎಂದು ತಿಳಿದು ಬಂದಿದೆ.

ಗಾಯಾಳುಗಳನ್ನು ಚಿತ್ರದುರ್ಗ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನ ಟಯರ್ ಸ್ಫೋಟಗೊಂಡು ಅಪಘಾತ ಸಂಭವಿಸಿದೆ ಎಂದು ಶಂಕಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next