Advertisement

ಅಪರಿಚಿತ ವಾಹನ ಢಿಕ್ಕಿ: ಚಿಕಿತ್ಸೆ ಫಲಕಾರಿಯಾಗದೆ ಚಿತ್ರದುರ್ಗ ಉಪವಿಭಾಗಧಿಕಾರಿ ಸಾವು!

01:46 PM May 04, 2021 | Team Udayavani |

ಚಿತ್ರದುರ್ಗ: ಸೋಮವಾರ ಬೆಳಗ್ಗೆ ವಾಕಿಂಗ್ ಮಾಡುವ ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡಿದ್ದ ಚಿತ್ರದುರ್ಗ ಉಪವಿಭಾಗಧಿಕಾರಿ ಪ್ರಸನ್ನ (52 ವ) ಚಿಕಿತ್ಸೆ ಫಲಿಸದೆ ಇಂದು ಸಾವನ್ನಪ್ಪಿದರು.

Advertisement

ಚಿತ್ರದುರ್ಗದ ಗೋನೂರು ರಸ್ತೆಯಲ್ಲಿ ಸೋಮವಾರ ಬೆಳಗ್ಗೆ ವಾಕಿಂಗ್ ಮಾಡುತ್ತಿದ್ದ ವೇಳೆ ಎಸಿ ಪ್ರಸನ್ನ ಅವರಿಗೆ ಅಪರಿಚಿತ ವಾಹನ ಢಿಕ್ಕಿ ಹೊಡೆದು ಪರಾರಿಯಾಗಿತ್ತು. ಈ ವೇಳೆ ಗಂಭೀರವಾಗು ಗಾಯಗೊಂಡಿದ್ದ ಅವರನ್ನು ಬೆಂಗಳೂರಿನ ಆಸ್ಟರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಇದನ್ನೂ ಓದಿ:ಮಮತಾ ಬ್ಯಾನರ್ಜಿ ಬಗ್ಗೆ ಆಕ್ಷೇಪಾರ್ಹ ಟ್ವೀಟ್ : ಕಂಗನಾ ರಣಾವತ್ ಟ್ವಿಟ್ಟರ್ ಅಮಾನತು

ಪ್ರಸನ್ನ ಅವರು ಚಿತ್ರದುರ್ಗ ತಾಲೂಕಿನ ಕಡಬನಕಟ್ಟೆ ಗ್ರಾಮದವರಾಗಿದ್ದರು. ಇವರು ತಂದೆ, ತಾಯಿ ಹಾಗೂ ಇಬ್ಬರು ಸಹೋದರರು, ಇಬ್ಬರು ಹೆಣ್ಣು ಮಕ್ಕಳು, ಪತ್ನಿಯನ್ನು ಅಗಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next