Advertisement
ನಗರದ ಅಮೋಘ ಇಂಟರ್‌ನ್ಯಾಷನಲ್ ಹೋಟೆಲ್ನಲ್ಲಿ ಕುಂಚಿಟಿಗ ವೀರಶೈವ ಲಿಂಗಾಯತ ಸಮಾಜದ ದಶಮಾನೋತ್ಸವ ಹಾಗೂ ಪ್ರತಿಭಾ ಪುರಸ್ಕಾರ ಮತ್ತು ಸನ್ಮಾನ ಸಮಾರಂಭವನ್ನು ಭಾನುವಾರ ಉದ್ಘಾಟಿಸಿ ಶರಣರು ಆಶೀರ್ವಚನ ನೀಡಿದರು.
Related Articles
Advertisement
ವಿದ್ಯಾವಂತರಾದವರ ಬದುಕು ಪ್ರಕಾಶಮಾನವಾಗಿರುತ್ತದೆ. ಪ್ರತಿಭೆ ಯಾವುದೇ ಸಮುದಾಯಕ್ಕೆ ಸೀಮಿತವಲ್ಲ. ಪ್ರತಿಭಾವಂತರನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸ ಆಗಬೇಕು. ಕುಂಚಿಟಿಗ ವೀರಶೈವ ಲಿಂಗಾಯತ ಸಮಾಜದ ವಿದ್ಯಾರ್ಥಿಗಳು ಎಸ್‌ಎಸ್‌ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ. 95 ಕ್ಕೂ ಹೆಚ್ಚು ಅಂಕಗಳನ್ನು ಪಡೆದಿದ್ದಾರೆಂದರೆ ನಿಜಕ್ಕೂ ದೊಡ್ಡ ಸಾಧನೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಸಾಕ್ಷರತೆ, ಸಂಸ್ಕಾರ ಎರಡೂ ಜೀವನಕ್ಕೆ ಅತ್ಯವಶ್ಯಕ. ಸಂಸ್ಕಾರದ ಜೊತೆ ಸಾಗಿದಾಗ ಮಾತ್ರ ಪ್ರಗತಿ ಪಥದತ್ತ ಸಾಗಲು ಸಾಧ್ಯ. ಸ್ಪರ್ಧಾತ್ಮಕ ಜಗತ್ತಿನಲ್ಲಿ ಅತಿ ಹೆಚ್ಚು ಅಂಕಗಳನ್ನು ಗಳಿಸಬೇಕಾಗಿರುವುದರಿಂದ ಒಂದೊಂದು ಅಂಕಕ್ಕೂ ಮೌಲ್ಯವಿದೆ. ನಿರಂತರ ಪ್ರಯತ್ನ ಹಾಗೂ ಕಠಿಣ ಪರಿಶ್ರಮದಿಂದ ಅತ್ಯುತ್ತಮ ಅಂಕಗಳನ್ನು ಗಳಿಸುವ ಮೂಲಕ ನಿಮ್ಮ ಭವಿಷ್ಯವನ್ನು ಉಜ್ವಲಗೊಳಿಸಿಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಕುಂಚಿಟಿಗ ವೀರಶೈವ ಲಿಂಗಾಯತ ಸಮಾಜದ ಪ್ರಧಾನ ಕಾರ್ಯದರ್ಶಿ ಎಲ್.ಬಿ. ರಾಜಶೇಖರ್ ಪ್ರಾಸ್ತಾವಿಕವಾಗಿ ಮಾತನಾಡಿ, ಕಳೆದ ಹತ್ತು ವರ್ಷಗಳಿಂದ ಕುಂಚಿಟಿಗ ಲಿಂಗಾಯತ ಸಮಾಜವನ್ನು ಸಂಘಟಿಸಲು ನಿರಂತರವಾಗಿ ಪ್ರಯತ್ನ ಮಾಡುತ್ತಿದ್ದೇನೆ. ಪ್ರತಿ ವರ್ಷ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಗುತ್ತಿದೆ. ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ಸಿಗಬೇಕಾದರೆ ಪ್ರತಿಯೊಬ್ಬರೂ ಕೈಜೋಡಿಸಬೇಕು. ಸಮಾಜಕ್ಕೆ ಆರ್ಥಿಕ ನೆರವು ನೀಡಿದಾಗ ಮಾತ್ರ ಕುಂಚಿಟಿಗ ವೀರಶೈವ ಲಿಂಗಾಯತರು ಅಭಿವೃದ್ಧಿ ಸಾಧಿಸಬಹುದು ಎಂದು ಅಭಿಪ್ರಾಯಪಟ್ಟರು.
ಕುಂಚಿಟಿಗ ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಎಂ.ಬಿ. ತಿಪ್ಪೇರುದ್ರಪ್ಪ ಅಧ್ಯಕ್ಷತೆ ವಹಿಸಿದ್ದರು. ಸಮಾಜದ ಮುಖಂಡರುಗಳಾದ ಪರಮೇಶ್ವರಪ್ಪ, ನಿವೃತ್ತ ಉಪನ್ಯಾಸಕ ಕುಬೇರಪ್ಪ, ವಿಶ್ವನಾಥ್, ಶಿವಪ್ರಕಾಶ್, ಜಿ.ಎಸ್. ಉಜ್ಜಿನಪ್ಪ, ದಗ್ಗೆ ಶಿವಪ್ರಕಾಶ್ ಮತ್ತಿತರರು ಇದ್ದರು. ಇದೇ ಸಂದರ್ಭದಲ್ಲಿ ನಿವೃತ್ತ ಡಿವೈಎಸ್ಪಿ ರಾಜಪ್ಪ ಹಾಗೂ ರಸಾಯನಶಾಸ್ತ್ರ ವಿಷಯದಲ್ಲಿ ಡಾಕ್ಟರೆಟ್ ಪಡೆದಿರುವ ಮಂಜಣ್ಣ ಅವರನ್ನು ಸನ್ಮಾನಿಸಲಾಯಿತು.